Tragic: 15 ಲಕ್ಷ ಚಿನ್ನ ಪಡೆದು ವಂಚಿಸಿದ ಸ್ನೇಹಿತ: ವಿದ್ಯಾರ್ಥಿನಿ ಆತ್ಮಹತ್ಯೆ!


Team Udayavani, Dec 5, 2024, 1:21 PM IST

Tragic: 15 ಲಕ್ಷ ಚಿನ್ನ ಪಡೆದು ವಂಚಿಸಿದ ಸ್ನೇಹಿತ: ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು: ಇತ್ತೀಚೆಗೆ ಚಿನ್ನಾಭರಣ ಪಡೆದು ವಾಪಸ್‌ ಕೊಡದ ಸ್ನೇಹಿತನ ಹೆಸರನ್ನು ಡೆತ್‌ನೋಟ್‌ನಲ್ಲಿ ಬರೆದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ ಪ್ರಕರಣ ಸಂಬಂಧ ರಾಜಾಜಿನಗರ ಪೊಲೀಸರು ಆರೋಪಿ ಯೊಬ್ಬನನ್ನು ಬಂಧಿಸಿದ್ದಾರೆ.

ರಾಜಾಜಿನಗರ ನಿವಾಸಿ ದಿಗಂತ್‌ ಬಂಧಿತ ಆರೋಪಿ. ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕಾ (19) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಘಟನಾ ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದ್ದು, ಅದರಲ್ಲಿ ತನ್ನ ಸ್ನೇಹಿತ ದಿಗಂತ್‌ ಹೆಸರು ಉಲ್ಲೇಖೀಸಿದ್ದಳು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಿಯಾಂಕಾ ಮತ್ತು ದಿಗಂತ್‌ ಸ್ನೇಹಿತರಾಗಿದ್ದು, ಕೆಲ ತಿಂಗಳ ಹಿಂದೆ ಪ್ರಿಯಾಂಕಾ, ತನ್ನ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಸ್ನೇಹಿತ ದಿಗಂತ್‌ಗೆ ಕೊಟ್ಟಿದ್ದಳು. ಆದರೆ, ನಿಗದಿತ ಸಮಯದಲ್ಲಿ ಆತ ವಾಪಸ್‌ ಕೊಟ್ಟಿಲ್ಲ. ಕೇಳಿದಾಗ ಇಲ್ಲದ ಸಬೂಬು ಹೇಳುತ್ತಿದ್ದ. ಅದರಿಂದ ನೊಂದಿದ್ದ ಪ್ರಿಯಾಂಕಾ, ನ.28ರಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿ ಸಲಾಗಿತ್ತು. ಬಳಿಕ ಆಕೆಯ ಮೊಬೈಲ್‌ ಪರಿಶೀಲಿಸಿದಾಗ ಬ್ಯಾಕ್‌ ಕವರ್‌ನಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ. ಅದರಲ್ಲಿ ದಿಗಂತ್‌ ಎಂಬ ಯುವಕ ಹೆಸರು ಉಲ್ಲೇಖವಾಗಿತ್ತು. ಹೀಗಾಗಿ ಆತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಚಿನ್ನ ವಾಪಸ್‌ ಕೊಡದೆ ಕಿರುಕುಳ ನೀಡಿದ್ದಕ್ಕೆ ಆತ್ಮಹತ್ಯೆ: ಡೆತ್‌ನೋಟ್‌:

ಕಾಲೇಜಿನಲ್ಲಿ ಸ್ನೇಹಿತನಾಗಿದ್ದ ದಿಗಂತ್‌ಗೆ  15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನೀಡಿದ್ದೆ. ಆತ ಚಿನ್ನ ವಾಪಸ್‌ ಕೊಡದೆ ಪೀಡಿಸುತ್ತಿದ್ದ. ಮಾನಸಿಕ ಕಿರುಕುಳ ನೀಡುತ್ತಿದ್ದ. ನನ್ನ  ಸಾವಿಗೆ ದಿಗಂತ್‌ ಕಾರಣ’ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖೀಸಿದ್ದಾರೆ ಎಂದು ಮೃತ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖೀಸಿದ್ದರು.

ತಂದೆ ಚಿನ್ನದ ವ್ಯಾಪಾರಿ ಆಗಿದ್ದಕ್ಕೆ ಪುತ್ರಿ ಜತೆಗೆ ಸ್ನೇಹ ಮಾಡಿದ ದಿಗಂತ್‌:

ಮೃತ ಯುವತಿಯ ತಂದೆ ಚಿನ್ನದ ವ್ಯಾಪಾರಿ ಆಗಿದ್ದಾರೆ. ಇದನ್ನು ತಿಳಿದುಕೊಂಡೇ ದಿಗಂತ್‌ ಆಕೆಯ ಸ್ನೇಹ ಮಾಡಿದ್ದ. ಕ್ಯಾಸಿನೋದಲ್ಲಿ ಹಣ ಹೂಡಿ, ದುಪ್ಪಟ್ಟು ಸಂಪಾದಿಸಿ ಕೊಡುವುದಾಗಿ ಆತ ಆಮಿಷವೊಡ್ಡಿದ್ದ. ಇದನ್ನು ನಂಬಿ ಮನೆಯಲ್ಲಿ ಯಾರಿಗೂ ತಿಳಿಯದಂತೆ ಚಿನ್ನಾಭರಣಗಳನ್ನು ದಿಗಂತನಿಗೆ ನೀಡಿದ್ದಳು ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

 

ಟಾಪ್ ನ್ಯೂಸ್

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.