Mangaluru: ಮಹಿಳೆಯನ್ನು ಕಾರಿನಲ್ಲಿ ಹಿಂಬಾಲಿಸಿ ಭಯ ಹುಟ್ಟಿಸಲು ಯತ್ನ; ಪ್ರಕರಣ ದಾಖಲು
ಇಬ್ಬರು ಅಪರಿಚಿತ ಯುವಕರಿಂದ ಕೃತ್ಯ
Team Udayavani, Dec 5, 2024, 9:30 PM IST
ಮಂಗಳೂರು: ಮಂಗಳೂರು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಮಹಿಳೆಯೊಬ್ಬರನ್ನು ಇಬ್ಬರು ಯುವಕರು ಕಾರಿನಲ್ಲಿ ಹಿಂಬಾಲಿಸಿ ಬೆದರಿಸಿ, ಭಯ ಹುಟ್ಟಿಸಲು ಯತ್ನಿಸಿದ ಕುರಿತು ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರೆ ಮುಂಬಯಿ ನಿವಾಸಿಯಾಗಿದ್ದು, ಫಳ್ನೀರ್ನ ನಿವಾಸಿಯೊಬ್ಬರನ್ನು 2020ರಲ್ಲಿ ಮದುವೆಯಾಗಿದ್ದರು. ಬಳಿಕ ಮನಸ್ತಾಪ ಉಂಟಾದ ಕಾರಣ ವಿಚ್ಛೇದನದವರೆಗೆ ತಲುಪಿದ್ದು, ಇದೇ ಕಾರಣಕ್ಕಾಗಿ ನ. 19ರಂದು ಬೆಳಗ್ಗೆ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ನ್ಯಾಯಾಲಯದಲ್ಲಿ ಕುಳಿತಿರುವಾಗ ಇಬ್ಬರು ಯುವಕರು ಮಹಿಳೆಯನ್ನು ನೋಡಿ ಅಸಭ್ಯ ರೀತಿಯಲ್ಲಿ ನೋಡುತ್ತಿದ್ದು, ಮೊಬೈಲ್ನಿಂದ ಫೋಟೋ ತೆಗೆದಿದ್ದಾರೆ.
ವಿಚಾರಣೆ ಬಳಿಕ ಮಹಿಳೆ ಹೊರಬಂದಾಗ ಹಿಂದಿನಿಂದ ಯುವಕರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬಂದಿದ್ದರು. ಬಳಿಕ ಮಹಿಳೆ ಆಟೋದಲ್ಲಿ ತೆರಳುವಾಗ ಮತ್ತೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.