Shankaranarayana: ಅಕ್ರಮ ಮರ ಸಾಗಾಣಿಕೆ; 40 ಲಕ್ಷ ರೂ.ಸೊತ್ತುಗಳು ವಶ
Team Udayavani, Dec 5, 2024, 10:24 PM IST
ಸಿದ್ದಾಪುರ: ಶಂಕರನಾರಾಯಣ ಗ್ರಾಮದ ಅಗ್ರಬೈಲು ಎನ್ನುವಲ್ಲಿ ಸರಕಾರಿ ಭೂಮಿಯಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಶಂಕರನಾರಾಯಣ ಅರಣ್ಯ ಇಲಾಖೆಯ ಅಧಿಕಾರಿಗಳು ಡಿ. 2ರಂದು ದಾಳಿ ಮಾಡಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಧೂಪ ಮತ್ತು ಮಾವಿನ ಮರಗಳ ಡಿಮ್ಮಿಗಳು, ಲಾರಿ, ಕ್ರೇನ್ ಮತ್ತು 2 ಬೈಕುಗಳನ್ನು ವಶಕ್ಕೆ ಪಡೆದಿದ್ದಾರೆ. ಸೊತ್ತುಗಳ ಒಟ್ಟು ಮೌಲ್ಯ 40 ಲಕ್ಷ ರೂ.ಎಂದು ಅಂದಾಜಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.
ಡಿಎಫ್‌ಓ ಗಣಪತಿ ಮತ್ತು ಎಸಿಎಫ್ ಪ್ರಕಾಶ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಜ್ಯೋತಿ, ಡಿಆರ್‌ಎಫ್‌ಓ ಕೆ.ಸಿ ಮ್ಯಾಥೋ, ಸಿಬಂದಿ ಝಹಿರ್ ಅಬ್ಟಾಸ್, ಪ್ರಶಾಂತ್, ಕೃಷ್ಣಮೂರ್ತಿ ಹೆಬ್ಬಾರ್, ರವಿ ಅಡಿಗ, ಶೇಖರ್ ಕುಲಾಲ, ಭಾಸ್ಕರ್ ಕೊಟ್ಟಾರಿ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಶಂಕರನಾರಾಯಣ ವಲಯ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!
Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್
Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.