Rain: ಕರಾವಳಿಯಲ್ಲಿ ಗುಡುಗು ಸಹಿತ ಉತ್ತಮ ಮಳೆ
Team Udayavani, Dec 5, 2024, 11:47 PM IST
ಮಂಗಳೂರು: ಫೈಂಜಾಲ್ ಚಂಡಮಾರುತದ ಅಬ್ಬರ ಕಡಿಮೆಯಾಗಿದೆ. ಆದರೆ ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡ ನಿರ್ಮಾಣಗೊಂಡ ಪರಿಣಾಮ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಗುರುವಾರ ಮಧ್ಯಾಹ್ನ ಬಳಿಕ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಬೆಳ್ತಂಗಡಿ, ಉಜಿರೆ, ಮಡಂತ್ಯಾರು, ಪುಂಜಾಲಕಟ್ಟೆ, ವೇಣೂರು, ಕಡಿರುದ್ಯಾವರ, ಬಂದಾರು, ಪುತ್ತೂರು, ಬಂಟ್ವಾಳ ಸಹಿತ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆ ಸುರಿದಿದೆ.
ಮಂಗಳೂರು ನಗರದಲ್ಲಿ ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಸದ್ಯ ಯಾವುದೇ ಅಲರ್ಟ್ ಘೋಷಣೆ ಮಾಡಲಾಗಿಲ್ಲ. ಆದರೆ ನಿಮ್ನ ಒತ್ತಡದ ಪರಿಣಾಮ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ.
ಸಿದ್ದಾಪುರ: ಗುಡುಗು ಸಿಡಿಲು ಸಹಿತ ಭಾರೀ ಮಳೆ
ಸಿದ್ದಾಪುರ: ಸಿದ್ದಾಪುರ ಪರಿಸರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಅಪರಾಹ್ನ 4ರ ತನಕ ಬಿಸಿಲಿನ ವಾತಾವರಣವಿದ್ದು, ಬಳಿಕ ಒಮ್ಮೆಲೇ ಮೋಡ ಕವಿದು, ಮಳೆ ಆರಂಭವಾಯಿತು. ಸುಮಾರು ಒಂದೂವರೆ ತಾಸು ನಿರಂತರವಾಗಿ ಮಳೆ ಸುರಿಯಿತು. ಮಳೆಯಿಂದಾಗಿ ಕಡ್ರಿ ಕಂಬಳವು ಅಸ್ತವ್ಯಸ್ತಗೊಂಡಿತ್ತು. ಕೋಣಗಳ ಮಾಲಕರು, ಕಂಬಳ ಅಭಿಮಾನಿಗಳು, ವ್ಯಾಪಾರಿಗಳು ತೀವ್ರ ತೊಂದರೆಗೆ ಒಳಗಾದರು.
ಸಿದ್ದಾಪುರ, ಹೊಸಂಗಡಿ, ಯಡಮೊಗೆ, ಆಜ್ರಿ, ಕೊಡ್ಲಾಡಿ, ಆಂಪಾರು, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ, ಮಡಾಮಕ್ಕಿ, ಹೆಂಗವಳ್ಳಿ, ಅಮಾಸೆಬೈಲು, ಉಳ್ಳೂರು-74 ಪರಿಸರದಲ್ಲೂ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.