Kukke Shree Subrahmanya Temple: ಸಂಭ್ರಮದ ಹೂತೇರು ಉತ್ಸವ
Team Udayavani, Dec 5, 2024, 11:54 PM IST
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಪ್ರಯುಕ್ತ ಮಾರ್ಗಶಿರ ಶುದ್ಧ ಚೌತಿಯ ದಿನವಾದ ಗುರುವಾರ ಪುಷ್ಪಾಲಂಕೃತ ರಥದಲ್ಲಿ ಶ್ರೀ ದೇವರ ಹೂವಿನ ತೇರಿನ ಉತ್ಸವವು ಭಕ್ತಿ ಸಡಗರದಿಂದ ನೆರವೇರಿತು.
ಮಹಾಪೂಜೆಯ ಬಳಿಕ ದೇಗುಲದ ಹೊರಾಂಗಣದಲ್ಲಿ ಬಂಡಿ ಉತ್ಸವ, ಪಾಲಕಿ ಉತ್ಸವ ಹಾಗೂ ಸಂಗೀತ, ಮಂಗಳವಾದ್ಯ, ನಾಗಸ್ವರ, ಬ್ಯಾಂಡ್ ಸುತ್ತುಗಳ ಬಳಿಕ ರಥಬೀದಿಗೆ ದೇವರ ಪ್ರವೇಶವಾಯಿತು. ಬಳಿಕ ಉತ್ತರಾಧಿ ಮಠದಲ್ಲಿ ಮಯೂರ ವಾಹನ ಸುಬ್ರಹ್ಮಣ್ಯ ದೇವರಿಗೆ ಪೂಜೆ ನೆರವೇರಿತು.
ಅನಂತರ ವಿವಿಧ ಹೂವುಗಳಿಂದ ಅಲಂಕೃತವಾದ ಮತ್ತು ಝಗಮಗಿಸುವ ವಿದ್ಯುದ್ದೀಪಾಲಂಕಾರದ ಸೊಬಗಿನ ಹೂವಿನ ತೇರಿನಲ್ಲಿ ಶ್ರೀ ದೇವರು ಕಾಶಿಕಟ್ಟೆಗೆ ತೆರಳಿದರು. ಆನೆ ಸಹಿತ ಬಿರುದಾವಳಿಗಳಾದ ತಂಬಿಲಾಲ, ಬಟ್ಟೆಯ ನಿಶಾನಿ, ಮಕರ ತೋರಣ, ಸತ್ತಿಗೆ, ಜಾಲರಿಕೊಡೆ, ಬೆಳ್ಳಿಯ ಪಂಚ ದೀವಟಿಕೆಗಳು ಉತ್ಸವಕ್ಕೆ ಹೆಚ್ಚಿನ ಮೆರುಗನ್ನು ನೀಡಿತು. ಸಹಸ್ರಾರು ಭಕ್ತರು ಶ್ರದ್ಧಾ ಭಕ್ತಿಯಿಂದ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಹೂವಿನ ತೇರಿನಲ್ಲಿ ಸುಬ್ರಹ್ಮಣ್ಯ ದೇವರು ಸಹೋದರ ಕಾಶಿಕಟ್ಟೆ ಮಹಾ ಗಣಪತಿಯ ಸನ್ನಿಧಿಗೆ ಆಗಮಿಸಿದರು. ಮಹಾಗಣಪತಿ ಸನ್ನಿಧಾನದಲ್ಲಿ ವಿಶೇಷ ಹೂ ಮತ್ತು ಹಣತೆಗಳ ಶೃಂಗಾರದ ನಡುವೆ ಮಹಾಗಣಪತಿಗೆ ರಂಗಪೂಜೆ ನೆರವೇರಿತು. ಬಳಿಕ ವಾಸುಕಿ ಛತ್ರದ ಕಟ್ಟೆಯಲ್ಲಿ ಕಟ್ಟೆಪೂಜೆ ನೆರವೇರಿತು. ಅನಂತರ ಶಿವರಾತ್ರಿ ಕಟ್ಟೆಯಲ್ಲಿ ಪೂಜೆ ನಡೆಯಿತು. ಬಳಿಕ ಮತ್ತು ಸವಾರಿ ಮಂಟಪದ ಅವಲಕ್ಕಿ ಕಟ್ಟೆಯಲ್ಲಿ ಕಟ್ಟೆಪೂಜೆ ನೆರವೇರಿತು.
ಎಡೆಸ್ನಾನ
ಚೌತಿಯ ದಿನವಾದ ಗುರುವಾರ 78 ಭಕ್ತರು ಸ್ವಯಂಪ್ರೇರಿತರಾಗಿ ಎಡೆಸ್ನಾನ ಸೇವೆ ನೆರವೇರಿಸಿದರು. ಪಂಚಮಿ ದಿನವಾರ ಶುಕ್ರವಾರ ಮತ್ತು ಷಷ್ಠಿ ದಿನವಾದ ಶನಿವಾರವೂ ಎಡೆಸ್ನಾನ ನೆರವೇರಲಿದೆ.
ಚಂಪಾಷಷ್ಠಿ: ಮುನ್ನೆಚ್ಚರಿಕೆ ಕ್ರಮ
ಮಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಜಾಡಿ ಬಳಿಯ ಮದ್ಯದಂಗಡಿಗಳನ್ನು ಡಿ. 6ರ ಬೆಳಗ್ಗೆ 6ರಿಂದ ಡಿ. 7ರ ಮಧ್ಯರಾತ್ರಿ 12 ಗಂಟೆ ತನಕ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್ ಫಿಕ್ಸ್
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.