Chief Minister; ಅಧಿಕಾರ ಹಸ್ತಾಂತರ ಸದ್ಯಕ್ಕೆ ಇಲ್ಲ: ಡಿಕೆಶಿ ತೇಪೆ ಹಚ್ಚುವ ಪ್ರಯತ್ನ
Team Udayavani, Dec 6, 2024, 6:45 AM IST
ಬೆಂಗಳೂರು: ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನ ಹೇಳಿಕೆಗಳು ಕೇಳಿಬರುತ್ತಿರುವ ಬೆನ್ನಲ್ಲೇ “ಸದ್ಯಕ್ಕೆ ಅಧಿಕಾರ ಹಸ್ತಾಂತರದ ಪ್ರಸ್ತಾವವೇ ಇಲ್ಲ; ಯಾವುದೇ ಸಮಸ್ಯೆ ಇಲ್ಲದೆ ಸರಕಾರದ ಅವಧಿ ಪೂರ್ಣಗೊಳಿಸುತ್ತೇವೆ’ ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಪಸ್ವರಗಳಿಗೆ ತೇಪೆ ಹಚ್ಚುವ ಪ್ರಯತ್ನ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ನಿಮ್ಮ (ಮಾಧ್ಯಮ ಪ್ರತಿನಿಧಿಗಳ) ಮುಂದೆ ಏನೂ ಮಾತನಾಡಿಲ್ಲ. ಗೃಹ ಸಚಿವ ಪರಮೇಶ್ವರ್ ಹಾಗೂ ಇತರರ ಜತೆಗೂ ಮಾತನಾಡಿಲ್ಲ. ವಾಹಿನಿಯೊಂದರಲ್ಲಿ ನನ್ನದೇ ಆದ ವಿಚಾರ ಪ್ರಸ್ತಾವ ಮಾಡಿದ್ದೆ. ಅದನ್ನು ನಿಮ್ಮ ಮುಂದೆ ಹೇಳಲು ಸಾಧ್ಯವೇ? ಈ ವಿಚಾರವಾಗಿ ಮುಖ್ಯಮಂತ್ರಿಗಳು ನಿನ್ನೆ ಯಾವುದೇ ಚರ್ಚೆ ಇಲ್ಲ ಎಂದು ಹೇಳಿದ್ದಾರೆ. ನಾನೂ ಚರ್ಚೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದೇನೆ. ಅವರ ಮಾತನ್ನು ನಾನು ಒಪ್ಪುತ್ತೇನೆ ಎಂದರು.
ಸಮಾವೇಶದ ಮೂಲಕ ಬಲಪ್ರದರ್ಶನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ನಮಗೆ ಬಲಪ್ರದರ್ಶನದ ಅಗತ್ಯವಿಲ್ಲ. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ಮಾಡಿದರೆ ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಏಕೆ ಹೊಟ್ಟೆಯುರಿಯುತ್ತದೆ ಎಂದು ಕೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.