Kasaragod: ಉದ್ಯಮಿ ಗಫೂರ್‌ ಹಾಜಿ ಕೊ*ಲೆ: ಮಂತ್ರವಾದಿ ಮಹಿಳೆ ಸಹಿತ ನಾಲ್ವರ ಬಂಧನ

Team Udayavani, Dec 6, 2024, 12:32 AM IST

Kasaragod: ಉದ್ಯಮಿ ಗಫೂರ್‌ ಹಾಜಿ ಕೊ*ಲೆ: ಮಂತ್ರವಾದಿ ಮಹಿಳೆ ಸಹಿತ ನಾಲ್ವರ ಬಂಧನ

ಕಾಸರಗೋಡು: ಪಳ್ಳಿಕೆರೆ ಪೂಚಕ್ಕಾಡಿನ ಫಾರೂಕ್‌ ಮಸೀದಿ ಸಮೀಪದ ನಿವಾಸಿ ಅನಿವಾಸಿ ಉದ್ಯಮಿ ಅಬ್ದುಲ್‌ ಗಫೂರ್‌ ಹಾಜಿ (53) ಅವರ ಸಾವು ಕೊಲೆಯೆಂದು ಸಾಬೀತುಗೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ.

ಜಿನ್ನುಮ್ಮ ಯಾನೆ ಶಮೀಮ, ಈಕೆಯ ಪತಿ ಉಬೈಸ್‌, ಸಹಾಯಕರಾದ ಪೂಚಕ್ಕಾಡ್‌ನ‌ ಅಸ್ನೀಫ, ಮಧೂರು ನಿವಾಸಿ ಆಯಿಶಾಳನ್ನು ಡಿಸಿಆರ್‌ಬಿ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರತ್ಯೇಕ ತಂಡ ಬಂಧಿಸಿದೆ.

2023ರ ಎಪ್ರಿಲ್‌ 14ರಂದು ಮುಂಜಾನೆ ಅಬ್ದುಲ್‌ ಗಫೂರ್‌ ನಿಗೂಢ ರೀತಿಯಲ್ಲಿ ಮನೆಯೊಳಗೆ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸಹಜ ಸಾವೆಂಬ ನೆಲೆಯಲ್ಲಿ ದಫನ ಮಾಡಿದ ಮೃತದೇಹವನ್ನು ಬಳಿಕ ಪುತ್ರನ ದೂರಿನ ಹಿನ್ನೆಲೆಯಲ್ಲಿ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.

ತಲೆಗೆ ಉಂಟಾದ ಗಂಭೀರ ಹೊಡತವೇ ಸಾವಿಗೆ ಕಾರಣವಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿತ್ತು. ಗಫೂರ್‌ ಹಾಜಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ನಡೆಸಿದ ತನಿಖೆಯಲ್ಲಿ ಮನೆಯಿಂದ 612 ಪವನ್‌ ಚಿನ್ನಾಭರಣ ಕಳವು ಗೈದಿರುವುದು ತಿಳಿದು ಬಂದಿತ್ತು.

ಗಫೂರ್‌ ಹಾಜಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ದಿನದ ಹಿಂದಿನ ದಿನ ಪತ್ನಿ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದರು. ಇದರಿಂದ ಗಫೂರ್‌ ಹಾಜಿ ಮಾತ್ರವೇ ಮನೆಯಲ್ಲಿದ್ದರು. ಎ. 14ರಂದು ಮುಂಜಾನೆ ಮನೆಯಲ್ಲಿ ಯಾರೂ ಕಂಡು ಬಾರದ ಹಿನ್ನೆಲೆಯಲ್ಲಿ ನೆರೆಮನೆಯವರು ಹೋಗಿ ನೋಡಿದಾಗ ಗಫೂರ್‌ ಹಾಜಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಚಿನ್ನಾಭರಣ ದೋಚುವ ಉದ್ದೇಶದಿಂದ ಗಫೂರ್‌ ಹಾಜಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿತ್ತು.

ಅಲ್ಲದೆ ಗಫೂರ್‌ ಹಾಜಿ ಮೃತಪಟ್ಟ ದಿನ ಮಂತ್ರವಾದಿ ಮಹಿಳೆ ಆ ಮನೆಗೆ ಹೋಗಿದ್ದು, ಇದು ಸಂಶಯಕ್ಕೆ ಎಡೆಮಾಡಿಕೊಟ್ಟಿತ್ತು. ಮೊದಲು ಬೇಕಲ ಪೊಲೀಸರು ತನಿಖೆ ನಡೆಸಿದ ಈ ಪ್ರಕರಣವನ್ನು ಆ ಬಳಿಕ ಡಿಸಿಆರ್‌ಬಿಗೆ ಹಸ್ತಾಂತರಿಸಲಾಗಿತ್ತು. ಪೊಲೀಸರ ಸಮಗ್ರ ತನಿಖೆಯಲ್ಲಿ ಇದೀಗ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಗಫೂರ್‌ ಹಾಜಿ ಹಾಗೂ ಸಹೋದರರಿಗೆ ಶಾರ್ಜಾ ಹಾಗು ದುಬೈಯಲ್ಲಿ ನಾಲ್ಕರಷ್ಟು ಸೂಪರ್‌ ಮಾರ್ಕೆಟ್‌ಗಳಿವೆ.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.