Allu Arjun: ಪುಷ್ಪ 2 ಸಿನಿಮಾ ರಿಲೀಸ್ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ವಿರುದ್ಧ ಕೇಸ್

Team Udayavani, Dec 6, 2024, 8:53 AM IST

Allu Arjun: ಪುಷ್ಪ 2 ಸಿನಿಮಾ ರಿಲೀಸ್ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲು

ಹೈದರಾಬಾದ್: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ದೇಶದೆಲ್ಲೆಡೆ ಬುಧವಾರ ರಿಲೀಸ್ ಆಗಿದ್ದು ಇದರ ಬೆನ್ನಲೇ ನಟ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.

ಹೌದು ಬುಧವಾರ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಪ್ರದರ್ಶನಗೊಂಡಿದ್ದು ಈ ವೇಳೆ ಸಹಸ್ತ್ರ ಸಂಖ್ಯೆಯಲ್ಲಿ ನೆರೆದಿದ್ದ ಅಲ್ಲು ಅರ್ಜುನ್ ಅಭಿಮಾನಿಗಳು ಸೇರಿದ್ದು ಅದೇ ವೇಳೆ ಥಿಯೇಟರ್ ಗೆ ಆಗಮಿಸಿದ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ಹಿನ್ನೆಲೆಯಲ್ಲಿ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟು ಆಕೆಯ ಮಗ ಗಂಭೀರ ಗಾಯಗೊಂಡಿರುವ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಹಾಗೂ ಚಿತ್ರ ತಂಡ ಸೇರಿದಂತೆ ಥಿಯೇಟರ್ ಮಾಲೀಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105 ಮತ್ತು 118 (1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರ ವಲಯ ಡಿಸಿಪಿ ಆಕಾನ್ಶ್ ಯಾದವ್ ಖಚಿತಪಡಿಸಿದ್ದಾರೆ.

ಬುಧವಾರ ರಾತ್ರಿ ಸುಮಾರು 10:30ಕ್ಕೆ ಚಿತ್ರದ ಪ್ರೀಮಿಯರ್ ಶೋ ಪ್ರದರ್ಶನಗೊಂಡಿದ್ದು ಇದಕ್ಕೆ ದಿಲ್‌ಸುಖ್‌ನಗರದ ನಿವಾಸಿ ರೇವತಿ ಅವರು ತಮ್ಮ ಪತಿ ಭಾಸ್ಕರ್ ಮತ್ತು ಅವರ ಇಬ್ಬರು ಮಕ್ಕಳಾದ ಶ್ರೀ ತೇಜ್ (13) ಮತ್ತು ಸಾನ್ವಿಕಾ (7) ಅವರೊಂದಿಗೆ ಬಂದಿದ್ದರು. ಈ ವೇಳೆ ಥಿಯೇಟರ್ ಒಳಗೆ ನಟ ಅಲ್ಲು ಅರ್ಜುನ್ ಆಗಮಿಸಿದ ಹಿನ್ನೆಲೆಯಲ್ಲಿ ನಟನನ್ನು ನೋಡಲು ಅಭಿಮಾನಿಗಳು ನೂಕುನುಗ್ಗಲು ನಡೆಸಿದ ಪರಿಣಾಮ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಲಾಗಿದೆ ಬಳಿಕ ಪೊಲೀಸರು ಅಭಿಮಾನಿಗಳನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದು ಈ ವೇಳೆ ಓಡುವ ಭರದಲ್ಲಿ ಥಿಯೇಟರ್ ಗೇಟ್ ಮುರಿದಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದೆ ಎನ್ನಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ಬುಧವಾರ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವನ್ನು ಸಂಧ್ಯಾ ಥಿಯೇಟರ್ ನಲ್ಲಿ ನಡೆಸಲಾಗಿತ್ತು ಇದಕ್ಕಾಗಿ ಕೆಲ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು ಆದರೆ ನಟ ಅಲ್ಲು ಅರ್ಜುನ್ ಥಿಯೇಟರ್ ಗೆ ಭೇಟಿ ನೀಡುವ ಮಾಹಿತಿ ನಮಗೆ ನಿದಿರಲಿಲ್ಲ ಹಾಗಾಗಿ ಜನರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಒಂದು ವೇಳೆ ಥಿಯೇಟರ್ ಮಾಲೀಕರು, ಅಥವಾ ಚಿತ್ರ ತಂಡ ಮೊದಲೇ ಈ ವಿಚಾರ ನಮಗೆ ತಿಳಿಸುತಿದ್ದರೆ ಹೆಚ್ಚಿನ ಭದ್ರತೆ ಒದಗಿಸಿ ಅವಘಡ ನಡೆಯದಂತೆ ತಡೆಗಟ್ಟಬಹುದಿತ್ತು ಎಂದಿದ್ದಾರೆ.

ಇದನ್ನೂ ಓದಿ: Bangla Crisis: ಸಂಭಲ್‌, ಬಾಂಗ್ಲಾ ದಾಳಿಯಲ್ಲಿ ಬಾಬರ್‌ ಡಿಎನ್‌ಎ: ಯೋಗಿ ಆದಿತ್ಯನಾಥ್‌

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Pushpa 2: Allu Arjun meets the boy injured in the stampede

Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.