Dilli Chalo: ರೈತರಿಂದ ದೆಹಲಿ ಚಲೋ.. ಗಡಿಯಲ್ಲಿ ಬಿಗಿ ಭದ್ರತೆ, ಮತ್ತೆ ಟ್ರಾಫಿಕ್ ಜಾಮ್ ಭೀತಿ
Team Udayavani, Dec 6, 2024, 10:49 AM IST
ನವದೆಹಲಿ: ಕಳೆದ ಎಂಟು ತಿಂಗಳಿಂದ ಪಂಜಾಬ್ ಹರಿಯಾಣ ಗಡಿಯ ಶಂಭು ಗಡಿಯಲ್ಲಿ ಬೀಡುಬಿಟ್ಟಿರುವ ರೈತರು ಇಂದು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಇಂದು(ಶುಕ್ರವಾರ) ಮಧ್ಯಾಹ್ನ ದೆಹಲಿ ಚಲೋ ಮೆರವಣಿಗೆ ನಡೆಸಲಿದ್ದು ಅದರಂತೆ ಗಡಿಯಲ್ಲಿ ಹೆಚ್ಚಿನ ಭದ್ರತೆ ಏರ್ಪಡಿಸಲಾಗಿದೆ.
ಶಂಭು ಗಡಿಯಿಂದ ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುವ ಮೆರವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಇರಿಸಿ ಹೆಚ್ಚಿನ ಭದ್ರತೆ ಏರ್ಪಡಿಸಲಾಗಿದೆ ಅಷ್ಟು ಮಾತ್ರವಲ್ಲದೆ ಅಂಬಾಲಾ ಜಿಲ್ಲಾಡಳಿತವು ಭಾರತೀಯ ನಾಗರಿಕ ಭದ್ರತಾ ಸಂಹಿತೆಯ ಸೆಕ್ಷನ್ 163 ರ ಅಡಿಯಲ್ಲಿ ಜಿಲ್ಲೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿ ಸೇರಿ ಯಾವುದೇ ಕಾನೂನುಬಾಹಿರ ಸಭೆಯನ್ನು ನಡೆಸದಂತೆ ನಿಷೇಧಿಸುವ ಆದೇಶವನ್ನು ಹೊರಡಿಸಿದೆ.
ಟ್ರಾಫಿಕ್ ಜಾಮ್ ಭೀತಿ:
ರೈತರು ಪ್ರತಿಭಟನೆ ಮೆರವಣಿಗೆ ನಡೆಸುವ ನಿಟ್ಟಿನಲ್ಲಿ ಶಂಭು ಗಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾರಿಕೇಡ್ ಇಟ್ಟು ವಾಹನಗಳನ್ನು ತಪಾಸಣೆ ನಡೆಸಿ ಬಿಡುವ ಕಾರ್ಯವನ್ನು ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದು ಹಾಗಾಗಿ ದೆಹಲಿ ಮಾರ್ಗದಲ್ಲಿ ಇಂದೂ ಕೂಡ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
#BigBreaking | In Focus | Farmers’ ‘Dilli Chalo’ March Towards Parliament Today; Delhi Yet Again Braces for Heavy Traffic
Farmers camping at Punjab-Haryana borders for over nine months will resume their protest march to Parliament on Friday, demanding a legal guarantee for… pic.twitter.com/HMUF9aGdLT
— Ritam English (@EnglishRitam) December 6, 2024
ದೆಹಲಿಯ ಸಂಸತ್ ವರೆಗೆ ಪ್ರತಿಭಟನೆ ನಡೆಸಲಿರುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ವಾಹನಗಳನ್ನು ತಡೆಯುವ ನಿಟ್ಟಿನಲ್ಲಿ ಕಾಲ್ನಡಿಗೆಯ ಮೂಲಕವೇ ದೆಹಲಿಗೆ ಪ್ರವೇಶಿಸುವ ನಿರ್ಧಾರ ರೈತರು ಮಾಡಿದ್ದು ಈ ನಡುವೆ ಪೊಲೀಸರು ಪ್ರತಿಭಟನಾ ಮೆರವಣಿಗೆ ತಡೆಯುವ ಎಲ್ಲ ತಯಾರಿಯನ್ನೂ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.