Bengaluru: ನಾಯಿಗಳಿಗೆ ಹೊಡೆಯುವುದನ್ನು ಪ್ರಶ್ನಿಸಿದ್ದಕ್ಕೆ ನಿಂದನೆ: ಕೇಸ್ ದಾಖಲು
Team Udayavani, Dec 6, 2024, 3:18 PM IST
ಬೆಂಗಳೂರು: ಬೀದಿ ನಾಯಿಗಳ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ.3ರಂದು ಬೆಳಗ್ಗೆ ಇಬ್ಬಲೂರಿನ ಸನ್ ಸಿಟಿ ಅಪಾರ್ಟ್‌ಮೆಂಟ್‌ನ ಬ್ಲಾಕ್-6 ನೆಲಮಹಡಿ ಹಿಂಭಾ ಗದ ಜಿಮ್ ಬಳಿ ಈ ಘಟನೆ ನಡೆದಿದೆ. ಈ ಸಂಬಂಧ ಇಬ್ಬಲೂರು ಸನ್‌ಸಿಟಿ ಅಪಾರ್ಟ್‌ಮೆಂಟ್ ನಿವಾಸಿ ಮಿನು ಸಿಂಗ್ ಎಂಬುವರು ನೀಡಿದ ದೂರಿನ ಮೇರೆಗೆ ಅಪರಿಚಿತನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಏನಿದು ಘಟನೆ?: ದೂರುದಾರ ಮಿನು ಸಿಂಗ್ ಡಿ.3ರಂದು ಬೆಳಗ್ಗೆ 8.30ಕ್ಕೆ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿದ್ದರು. ಈ ವೇಳೆ ಬೀದಿ ನಾಯಿಗಳು ಚೀರಾಡುವ ಶಬ್ದ ಕೇಳಿಸಿಕೊಂಡು ಹೊರಗೆ ಬಂದಿದ್ದಾರೆ. ಆಗ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿ ಬೀದಿ ನಾಯಿಗಳ ಮೇಲೆ ಹಲ್ಲೆ ಮಾಡುತ್ತಿರುವುದು ಕಂಡು ಬಂದಿದೆ. ಕೂಡಲೇ ಮಿನು ಸಿಂಗ್ ಹೀಗೇಕೆ ಮಾಡುತ್ತಿರುವೆ ಎಂದು ಆ ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಅಷ್ಟಕ್ಕೆ ಆ ವ್ಯಕ್ತಿ ಅವಾಚ್ಯ ಶಬ್ದಗಳಿಂದ ದೂರುದಾರ ಮಿನು ಸಿಂಗ್‌ಗೆ ನಿಂದಿಸಿಕೊಂಡು ಹತ್ತಿರಕ್ಕೆ ಬಂದಿದ್ದಾನೆ. ಗಾಬರಿಗೊಂಡ ಮಿನುಸಿಂಗ್ ಸ್ಥಳೀಯರನ್ನು ಕೂಗಿದಾಗ ಆ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಬೀದಿ ನಾಯಿಗಳ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ನಿಂದಿಸಿದ ಆ ಅಪರಿಚಿತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಿನು ಸಿಂಗ್ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಈ ಸಂಬಧ ಬೆಳ್ಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.