Bengaluru: ಆಸ್ಪತ್ರೆಗಳಲ್ಲಿ ಅನ್ಯಭಾಷಿಕ ನರ್ಸ್‌ಗಳಿಗೆ ಕನ್ನಡ ಪಾಠ

ನರ್ಸಿಂಗ್‌ ಹೋಮ್‌ಗಳಲ್ಲಿ ಕನ್ನಡಿಗ ರೋಗಿಗಳಿಗೆ ಕಿರಿಕಿರಿ ತಪ್ಪಿಸಲು ಯೋಜನೆ

Team Udayavani, Dec 6, 2024, 3:51 PM IST

15-bng

ಸಾಂದರ್ಭಿಕ ಚಿತ್ರ

ಬೆಂಗಳೂರು: ಮದರಸಾಗಳಲ್ಲಿ ಕನ್ನಡ ಕಲಿಕಾ ತರಗತಿ ಆಯೋಜಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಇದೀಗ ರಾಜಧಾನಿಯ ವಿವಿಧ ಆಸ್ಪತ್ರೆಯಲ್ಲಿರುವ ಕನ್ನಡೇತರ ದಾದಿಯರಿಗೆ “ಕನ್ನಡ ಕಲಿಕೆ’ಗೆ ಒಲವು ತೋರಿದೆ.

ಸಿಲಿಕಾನ್‌ ಸಿಟಿಯ ಹಲವು ಖಾಸಗಿ ಆಸ್ಪತ್ರೆಯಲ್ಲಿ ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳನ್ನು ಮಾತನಾಡುವವರು ನರ್ಸ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಂತವರು ಆಸ್ಪತ್ರೆಗೆ ಭೇಟಿ ನೀಡುವ ಕನ್ನಡಿಗರೊಂದಿಗೆ ಸುಲಲಿತವಾಗಿ ಸಂವಹನ ನಡೆಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ “ಕನ್ನಡ ಕಲಿಕಾ’ ತರಗತಿಗಳನ್ನು ಆಯೋ ಜಿಸುತ್ತಿದೆ. ಅದರ ಪ್ರಾರಂಭಿಕ ಭಾಗವಾಗಿಯೇ ಕೇಂದ್ರ ಸರ್ಕಾರ ಸ್ವಾಮ್ಯದ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿರುವ ಕನ್ನಡೇತರ ಭಾಷೆಯ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕನ್ನಡ ತರಗತಿಗಳನ್ನು ಆರಂಭಿಸಿದೆ.

150 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ: ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಹಿಂದಿ, ಮಲಯಾಲಂ ಸೇರಿದಂತೆ ಹಲವು ಭಾಷೆಯ ವಿದ್ಯಾರ್ಥಿಗಳು ನರ್ಸಿಂಗ್‌ ಕಲಿಕೆಯಲ್ಲಿ ತೊಡಗಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಅಲ್ಲಿರುವ ನರ್ಸಿಂಗ್‌ ವಿದ್ಯಾರ್ಥಿಗಳು ಕೂಡ ಕನ್ನಡ ಕಲಿಕೆಗೆ ಆಸಕ್ತಿ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಿಮ್ಹಾನ್ಸ್‌ನ ನರ್ಸಿಂಗ್‌ ವಿದ್ಯಾರ್ಥಿಗಳಿಗಾಗಿ ಕನ್ನಡ ಕಲಿಕಾ ತರಗತಿಗಳನ್ನು ಪ್ರಾರಂಭಿಸಿದೆ. ಸುಮಾರು 150 ನರ್ಸಿಂಗ್‌ ವಿದ್ಯಾರ್ಥಿಗಳು ಕನ್ನಡ ಕಲಿಕೆಯಲ್ಲಿ ತೊಡಗಿದ್ದು, ಆಸಕ್ತಿಯಿಂದ ಕಲಿಯುತ್ತಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜಧಾನಿಯ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ನರ್ಸ್‌  ಗಳಿಗೆ ಮತ್ತು ವೈದ್ಯರಿಗೆ ಕನ್ನಡ ಭಾಷೆ ಬರುತ್ತಿಲ್ಲ. ಅಂತಹ ಆಸ್ಪತ್ರೆಗೆ ಆರೋಗ್ಯ ಸೇವೆ ಪಡೆಯಲು ಹೋದ ಕನ್ನಡಿಗರು ತೊಂದರೆ ಅನುಭವಿಸಿರುವ ಸನ್ನಿವೇಶಗಳಿವೆ. ಇತ್ತೀಚೆಗ ಕನ್ನಡದ ಹಿರಿಯ ಸಾಹಿತಿಯೊಬ್ಬರು ಅನಾರೋಗ್ಯದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಾದಾಗ ಕನ್ನಡ ಬಾರದ ದಾದಿಯರು ಮತ್ತು ವೈದ್ಯರು ಜತೆಗೆ ಸರಿಯಾಗಿ ಸಂಹವನ ನಡೆಸಲಾಗದೆ ತೊಂದರೆ ಅನುಭವಿಸಿದ್ದರು. ಜತೆಗೆ ಸಂವ ಹನ ನಡೆಸಲು ಸಾಧ್ಯವಾಗದೆ ಪರಿತಪಿಸಿದ ಸನ್ನಿವೇಶವನ್ನು ಪ್ರಾಧಿಕಾರದ ಗಮನಕ್ಕೂ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನೇಮಕಾತಿ ಮಾಡುವಾಗ ಶೇ.60ರಷ್ಟಾದರೂ ಕನ್ನಡರಿಗೆ ಆದ್ಯತೆ ನೀಡಬೇಕು ಎಂದು ಪ್ರಾಧಿಕಾರವು ಸರ್ಕಾರಕ್ಕೆ ಒತ್ತಾಯ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕನ್ನಡ ಕಲಿಸಿ: ಪ್ರಾಧಿಕಾರಕ್ಕೆ ಕೇರಳ ನರ್ಸ್‌ಗಳಿಂದ ಬೇಡಿಕೆ

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೇರಳಿಗರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಚಹಾ ಮಾರಾಟದಿಂದ ಉದ್ಯಮದ ವಲಯದಲ್ಲಿ ತೊಡಗಿ ಸಿಕೊಂಡಿದ್ದಾರೆ. ಜತೆಗೆ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ನರ್ಸ್‌ಗಳಾಗಿ ಹಲ ವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೇರಳಿಗರು ಕನ್ನಡ ಭಾಷೆ ಕಲಿಕೆಗೆ ಆಸಕ್ತಿ ಹೊಂದಿದ್ದು, ಕನ್ನಡ ಕಲಿಕಾ ತರಗತಿ ಆರಂಭಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ದಾರೆ ಎಂದು ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಈಗಾಗಲೇ ಮಾಗಡಿ ರಸ್ತೆಯ ಖಾಸಗಿ ನರ್ಸಿಂಗ್‌ ಹೋಮ್‌ ನಲ್ಲಿ 150 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕಾ ತರಗತಿಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು ಆಸಕ್ತಿಯಿಂದ ಕನ್ನಡ ಕಲಿಯು ತ್ತಿದ್ದಾರೆ. ಬೆಂಗಳೂರಿನ ಕೇರಳ ಸಮಾಜದವರು ಕೂಡ ಕನ್ನಡ ಕಲಿಕಾ ತರಗತಿಗಳನ್ನು ಮತ್ತಷ್ಟು ನಡೆಸುವಂತೆ ಮನವಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಲಯಾಳಂ ಮತ್ತು ಕನ್ನಡ ಭಾಷೆ ಬಲ್ಲ 25 ಮಂದಿಯನ್ನು ಆಯ್ಕೆ ಮಾಡಿ ಅವರಿಗೆ ಕನ್ನಡ ಕಲಿತಾ ತರಗತಿಗಳನ್ನು ನಡೆಸುವ ಬಗ್ಗೆ ತರಬೇತಿ ನೀಡಲಾಗಿದೆ. ಕೆಲವು ಖಾಸಗಿ ಬ್ಯಾಂಕ್‌ಗಳು ಕೂಡ ನಮ್ಮ ಸಂಸ್ಥೆಯ ಸಿಬ್ಬಂದಿಗೆ ಕನ್ನಡ ಕಲಿಕಾ ತರಗತಿ ಆರಂಭಿಸಿ ಎಂದು ಮನವಿ ಮಾಡಿವೆ ಎಂದು ತಿಳಿಸಿದ್ದಾರೆ.

ನಗರದ ಹಲವು ಖಾಸಗಿ ಆಸ್ಪತ್ರೆ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾದಿಯರು ಕಾರ್ಯ ನಿರ್ವಹಿಸು ತ್ತಿದ್ದಾರೆ. ಅಂತಹ ಆಸ್ಪತ್ರೆಗಳಿಗೆ ಆರೋಗ್ಯ ಸೇವೆಗಾಗಿ ಭೇಟಿ ನೀಡುವ ಕನ್ನಡಿಗರ ಜತೆಗೆ ಸುಲಭವಾಗಿ ಸಂವಹನಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪ್ರಾಧಿಕಾರವು ಕನ್ನಡ ಕಲಿಕಾ ಆಸಕ್ತಿ ಹೊಂದಿದ ನರ್ಸಿಂಗ್‌ ಹೋಮ್‌ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕಾ ತರಗತಿಗಳನ್ನು ಉಚಿತವಾಗಿ ನಡೆಸಲಿದೆ. ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿರುವ ಕನ್ನಡೇತರ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕಾ ತರಗತಿ ಆರಂಭಿಸಲಾಗಿದೆ. ●ಡಾ.ಪುರುಷೋತ್ತಮ ಬಿಳಿಮಲೆ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ

■ ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.