Maharashtra; ಡಿ.11 ಅಥವಾ 12 ರಂದು ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ
ಹಣಕಾಸು, ಗೃಹ ಖಾತೆಗೆ ತೀವ್ರ ಲಾಬಿ.. ಹೆಚ್ಚಿನ ಸ್ಥಾನಗಳು ಬಿಜೆಪಿ ಪಾಲಿಗೆ ಸಿಗುವ ಸಾಧ್ಯತೆ
Team Udayavani, Dec 6, 2024, 5:56 PM IST
ಮುಂಬಯಿ: ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರಕಾರದ ಸಂಪುಟ ವಿಸ್ತರಣೆ ಡಿಸೆಂಬರ್ 11 ಅಥವಾ 12 ರಂದು ನಡೆಯಲಿದೆ ಎಂದು ಮೂಲಗಳು ಶುಕ್ರವಾರ(ಡಿ6) ತಿಳಿಸಿವೆ.
ಹಿಂದಿನ ಏಕನಾಥ್ ಶಿಂಧೆ ನೇತೃತ್ವದ ಸರಕಾರದಂತೆಯೇ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಹಣಕಾಸು, ಬಿಜೆಪಿ ಗೃಹ ಖಾತೆಯನ್ನು ಉಳಿಸಿಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.
ಶಿಂಧೆ ನೇತೃತ್ವದ ಶಿವಸೇನೆಯ ಮೂಲಗಳನ್ನು ನಂಬುವುದಾದರೆ ನಗರಾಭಿವೃದ್ಧಿ ಖಾತೆ ಉಳಿಸಿಕೊಳ್ಳಬಹುದು.ಮಹಾರಾಷ್ಟ್ರದ ಕ್ಯಾಬಿನೆಟ್ ನಲ್ಲಿ ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 43 ಮಂದಿ ಮಂತ್ರಿಗಳಾಗಬಹುದು.
ಮಹಾಯುತಿ ಮೈತ್ರಿಕೂಟದ ಅತಿದೊಡ್ಡ ಪಕ್ಷ ಬಿಜೆಪಿಗೆ 21-22 ಸಚಿವ ಸ್ಥಾನಗಳು ಸಿಗುವ ನಿರೀಕ್ಷೆಯಿದೆ. ಶಿವಸೇನೆ 11 ರಿಂದ 12 ಸಚಿವ ಸ್ಥಾನಗಳು ಮತ್ತು ಎನ್‌ಸಿಪಿಗೆ 9 ರಿಂದ 10 ಸ್ಥಾನಗಳನ್ನು ಪಡೆಯಬಹುದು ಎಂದು ಮೂಲಗಳು ತಿಳಿಸಿವೆ.
ಪ್ರಮಾಣ ವಚನ ಸ್ವೀಕರಿಸುವ ಸಚಿವರ ಸಂಖ್ಯೆ ಇನ್ನೆರಡು ದಿನದಲ್ಲಿ ಅಂತಿಮ ನಿರ್ಧಾರವಾಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಶನಿವಾರದಿಂದ ಆರಂಭವಾಗಲಿರುವ ಮೂರು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ಅವರು ನೂತನವಾಗಿ ಆಯ್ಕೆಯಾದ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಸ್ಪೀಕರ್ ಚುನಾವಣೆ ಸೋಮವಾರ(ಡಿ) ನಡೆಯಲಿದೆ, ನಂತರ ನೂತನ ಸರಕಾರ ವಿಶ್ವಾಸ ಮತ ಮತ್ತು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
ಡಿಸೆಂಬರ್ 16 ರಿಂದ ರಾಜ್ಯದ ಎರಡನೇ ರಾಜಧಾನಿ ನಾಗ್ಪುರದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.