Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ


Team Udayavani, Dec 7, 2024, 6:10 AM IST

1-sswewqewq

ಚನ್ನರಾಯಪಟ್ಟಣ: ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲೆಸಬೇಕಾದರೆ ಅಹಿಂಸಾ ಮಾರ್ಗದಿಂದ ಮಾತ್ರ ಸಾಧ್ಯ ಎನ್ನುವುದನ್ನು ಮನುಕುಲಕ್ಕೆ ಸಾರಿದವರು ಜೈನರು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದರು.

ಶ್ರವಬೆಳಗೊಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತ ನಾಡಿ, ಅಹಿಂಸಾ ವ್ರತ ಪಾಲನೆ ಮಾಡಿದರೆ ಸಾಲದು, ಅದನ್ನು ವಿಶ್ವಕ್ಕೆ ಸಾರಬೇಕು ಎಂದು ಸಾಕಷ್ಟು ಮಂದಿ ತ್ಯಾಗಿಗಳು ವಿಶ್ವ ಪರ್ಯಟನೆ ಮಾಡುತ್ತಿದ್ದಾರೆ. ಅಹಿಂಸೆ ಎಂದರೆ ಕಾರ್ಯದಿಂದ, ಮಾತಿನಿಂದಲೂ ಯಾರನ್ನೂ ಹಿಂಸೆ ಮಾಡಬಾರದು. ಆಗ ಮಾತ್ರ ಶಾಂತಿ ನೆಲೆಸಲಿದೆ. ನಮ್ಮ ನಡೆ- ನುಡಿ ಸಮಾಜಕ್ಕೆ ಆದರ್ಶವಾಗಿರಬೇಕು ಹೊರತು, ಒಂದು ಜಾತಿಗೆ ಆದರ್ಶವಾಗಿದ್ದು, ಮತ್ತೂಂದು ಜಾತಿಗೆ ನೋವು ಉಂಟು ಮಾಡುವಂತೆ ಇರಬಾರದು ಎಂದರು.

ಪೇಜಾವರ ಮಠದ ಈ ಹಿಂದಿನ ಶ್ರೀಗಳು ಹಾಗೂ ಜೈನ ಮಠದ ಈ ಹಿಂದಿನ ಶ್ರೀಗಳ ಸಂಬಂಧ ಉತ್ತಮವಾಗಿತ್ತು. ಅವರು ನಡೆದ ಹಾದಿಯಲ್ಲಿ ನಾವು ಸಾಗೋಣ. ಯಾವ ಸಮಯದಲ್ಲಿ ಬೇಕಾದರು ಪೇಜಾವರ ಮಠ ಜೈನ ಮಠದ ಆಗು ಹೋಗುಗಳಿಗೆ ಜತೆಯಾಗಿ ನಿಲ್ಲುತ್ತದೆ ಎಂದರು.

ಹೋಲಿಕೆ ಸಾಧ್ಯವಿಲ್ಲ
ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಮಾತನಾಡಿ, ದೊಡ್ಡ ನಗರಗಳಲ್ಲಿ ಮಠಗಳನ್ನು ಮಾಡಿ ಸಮಾಜದ ಏಳಿಗೆಗೆ ಶ್ರಮಿಸುವುದಲ್ಲ, ಪುಟ್ಟ ಗ್ರಾಮದಲ್ಲಿಯೂ ಮಠವನ್ನು ಹೊಂದಿ ಸಮಾಜದ ಏಳಿಗೆ ಶ್ರಮಿಸಬಹುದು ಎನ್ನುವುದನ್ನು ಜೈನ ಮಠ ನಿರೂಪಿಸಿದೆ. ಜೈನ ಧರ್ಮದ ಕೀರ್ತಿಯನ್ನು ಬಹು ಎತ್ತರಕ್ಕೆ ಬೆಳೆಸಿದ ಚಾರುಶ್ರೀಗಳು ತಮ್ಮ ಜೀವಿತಾವಧಿಯನ್ನು ಪುಟ್ಟ ಗ್ರಾಮದಲ್ಲಿನ ಮಠದಲ್ಲಿ ಕಳೆದಿದ್ದಾರೆ. ಚಾರುಶ್ರೀಗಳಿಗೆ ಚಾರುಶ್ರೀಗಳೇ ಸಾಟಿ ಅವರನ್ನು ಇತರರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ ಎಂದರು.

ಕಾರ್ಕಳದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಕನಕಗಿರಿಯ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಹಂತಗಿರಿಯ ಧವಲಕೀರ್ತಿ ಭಟ್ಟರಕ ಸ್ವಾಮೀಜಿ, ಕಂಬದಹಳ್ಳಿಯ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಮೂಡುಬಿದಿರೆಯ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ, ತಮಿಳುನಾಡಿನ ಮೇಲ್‌ ಚಿತ್ತಮೂರಿನ ಭಟ್ಟಾರಕ ಸ್ವಾಮೀಜಿ, ವರೂರಿನ ಧರ್ಮಸೇನ ಭಟ್ಟಾರಕ ಸ್ವಾಮೀಜಿ, ಹೊಂಬುಜದ ದೇವೇಂದ್ರ ಭಟ್ಟಾರಕ ಸ್ವಾಮೀಜಿ, ಸೋಂದಾದ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ, ನರಸಿಂಹರಾಜಪುರದ ಲಕ್ಷ್ಮೀಸೇನಾ ಭಟ್ಟಾರಕ ಸ್ವಾಮೀಜಿ, ಲಕ್ಕವಳ್ಳಿಯ ವೃಷಭಸೇನಾ ಭಟ್ಟಾರಕ ಸ್ವಾಮೀಜಿ, ನಾಂದಣಿಯ ಜಿನಸೇನ ಭಟ್ಟಾರಕ ಸ್ವಾಮೀಜಿ, ಆರತಿಪುರದ ಸಿದ್ಧಾಂತಕೀರ್ತಿ ಭಟ್ಟಾರಕ ಸ್ವಾಮೀಜಿ, ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ, ವಿಚಾರಪಟ್ಟ ಕ್ಷುಲ್ಲಕಶ್ರೀ ಪ್ರಮೆಯಸಾಗರ ಸ್ವಾಮೀಜಿ, ರಾಜ್ಯಸಭಾ ಸದಸ್ಯರಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಉಪಸ್ಥಿತ ರಿದ್ದರು.

ಟಾಪ್ ನ್ಯೂಸ್

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.