Udupi: ಹೊಟೇಲ್ ಕಾರ್ಮಿಕ ಕುಸಿದು ಸಾವು
Team Udayavani, Dec 7, 2024, 12:13 AM IST
ಉಡುಪಿ: ಕೆಲಸ ನಿರ್ವಹಿಸುತ್ತಿದ್ದ ವೇಳೆ ಕುಸಿದು ಬಿದ್ದು ಹೊಟೇಲ್ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ.
ಉಡುಪಿಯ ರೆಸ್ಟೋರೆಂಟ್ವೊಂದರಲ್ಲಿ ಕ್ಲೀನರ್ ಆಗಿದ್ದ ಲವ (60) ಮೃತರು. ಡಿ. 4ರಂದು ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು.
ಕೂಡಲೇ ಅವರನ್ನು ಹೊಟೇಲ್ ಮಾಲಕ ಶೇಖರ್ ಅವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರುಂಡ-ಮುಂಡ ಬೇರ್ಪಟ್ಟ ಶವ ಪತ್ತೆ
ಉಡುಪಿ: ಪರ್ಕಳ ಹೈಸ್ಕೂಲ್ನ ಹಿಂಭಾಗದ ಪಾಳುಬಿದ್ದ ಹಾಡಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿದೆ. ಮೇಲ್ನೋಟಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿದ್ದು, ಸುಮಾರು 10 ದಿನ ಕಳೆದಿರಬಹುದು ಎಂದು ತಿಳಿದುಬಂದಿದೆ.
ಕೆಟ್ಟ ವಾಸನೆ ಬರುತ್ತಿದ್ದುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.