Pocso: ಬಾಲಕಿಯ ಅತ್ಯಾಚಾರ, ಕೊಲೆ: 61 ದಿನಗಳಲ್ಲೇ ಗಲ್ಲು ವಿಧಿಸಿದ ಕೋರ್ಟ್
Team Udayavani, Dec 7, 2024, 1:56 AM IST
ಕೋಲ್ಕತಾ: 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ 19 ವರ್ಷದ ಯುವಕನಿಗೆ ಅಪರಾಧ ನಡೆದ ಕೇವಲ 61 ದಿನಗಳಲ್ಲೇ ಪಶ್ಚಿಮ ಬಂಗಾಳದ ಬರೂಯಿಪುರ್ ಪೋಕ್ಸೋ ಕೋರ್ಟ್ ಮರಣದಂಡನೆ ವಿಧಿಸಿದೆ.
24 ಪರಗಣ ಜಿಲ್ಲೆಯ ಜಯನಗರದಲ್ಲಿ ಅ.4ರಂದು ಟ್ಯೂಶನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಮುಸ್ತಾಕೀನ್ ಸರ್ದಾರ್ ಎಂಬಾತ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಆತನನ್ನು ಕೇವಲ 2.5 ಗಂಟೆಗಳಲ್ಲಿ ಬಂಧಿಸಿದ್ದ ಪೊಲೀಸರು 25 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ, ಅ.30ರಂದು ಚಾರ್ಜ್ಶೀಟ್ ಸಲ್ಲಿಸಿದ್ದರು.
ಬಳಿಕ ವಿಚಾರಣೆ ಆರಂಭಿಸಿದ್ದ ಕೋರ್ಟ್, ಆರೋಪಿಗೆ ಮರಣದಂಡನೆಯೊಂದಿಗೆ, ಸಂತ್ರಸ್ತೆಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಕೋಲ್ಕತಾದ ಟ್ರೈನಿ ವೈದ್ಯೆ ಅತ್ಯಾಚಾರ ವಿರೋಧಿ ಪ್ರತಿಭಟನೆಗಳ ನಡುವೆಯೇ ನಡೆದಿದ್ದ ಈ ಘಟನೆಯು ರಾಜ್ಯವ್ಯಾಪಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.