Govt’s Guarantee: ಕನಿಷ್ಠ ಬೆಂಬಲ ಬೆಲೆಗೆ ರೈತರ ಎಲ್ಲ ಕೃಷಿ ಉತ್ಪನ್ನಗಳ ಖರೀದಿ: ಕೇಂದ್ರ
ರಾಜ್ಯಸಭೆಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ
Team Udayavani, Dec 7, 2024, 7:20 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸರಕಾರವು ರೈತರ ಎಲ್ಲ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಶುಕ್ರವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ದಿಲ್ಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ಹೊತ್ತಿ ನಲ್ಲಿ ಈ ಭರವಸೆ ಹೊರ ಬಿದ್ದಿದೆ. ಪ್ರಶ್ನೋತ್ತರ ಅವಧಿಯಲ್ಲಿ ಪೂರಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವ ಚೌಹಾಣ್, ನಾನು ಈ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಮೋದಿ ಸರಕಾರವು ಎಲ್ಲ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಖರೀದಿಸಲಿದೆ. ಇದು ಮೋದಿ ಗ್ಯಾರಂಟಿ ಮತ್ತು ಈ ಗ್ಯಾರಂಟಿಯನ್ನು ನಾವು ಪೂರೈಸುತ್ತೇವೆ ಎಂದು ಹೇಳಿದರು.
“ಮೊದಲ ಬಾರಿ ರೈತ ಪ್ರತಿಭಟನೆ ನಡೆದಾಗ ಮೋದಿ ಸರಕಾರದ ನಿರ್ದಾಕ್ಷಿಣ್ಯ ಪ್ರವೃತ್ತಿಯಿಂದಾಗಿ 700ಕ್ಕೂ ಅಧಿಕ ರೈತರು ಹುತಾತ್ಮರಾಗಿದ್ದನ್ನು ದೇಶ ಮರೆತಿಲ್ಲ. ಈಗ ಮತ್ತೆ ಸಮಸ್ಯೆ ಹೇಳಿಕೊಳ್ಳಲು ಬರುತ್ತಿದ್ದ ರೈತರನ್ನು ಅಶ್ರುವಾಯು ಪ್ರಯೋಗಿಸಿ ನಿಲ್ಲಿಸಲಾಗಿದೆ. ಇದು ಖಂಡನೀಯ. ಸರಕಾರ ರೈತರ ಮನವಿಯನ್ನು ಗಂಭೀರವಾಗಿ ಆಲಿಸಬೇಕು.” – ರಾಹುಲ್ ಗಾಂಧಿ, ಲೋಕಸಭೆ ವಿಪಕ್ಷ ನಾಯಕ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.