BJP; ಮಹತ್ವದ ಕೋರ್ ಕಮಿಟಿ ಸಭೆ: ‘ವಿಜಯೇಂದ್ರ ಬದಲಾವಣೆ ಇಲ್ಲ’ ಎಂದು ಸ್ಪಷ್ಟ ಸಂದೇಶ
ಸೋಮಶೇಖರ್, ಹೆಬ್ಬಾರ್ ಅಮಾನತಿಗೆ ಶಿಫಾರಸು...
Team Udayavani, Dec 7, 2024, 5:33 PM IST
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ(ಡಿ7) ರಾಜ್ಯ ಬಿಜೆಪಿ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ನೇತೃತ್ವದಲ್ಲಿ ಕೋರ್ ಕಮಿಟಿಯ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ,ಡಿ.ವಿ.ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, , ಪ್ರತಿಪಕ್ಷ ನಾಯಕ ಆರ್.ಅಶೋಕ್,ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಸಂಸದ ಗೋವಿಂದ್ ಕಾರಜೋಳ, ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಉಪಸ್ಥಿತರಿದ್ದರು.
ಸಭೆಯಲ್ಲಿ, ಸದ್ಯ ಭಾರೀ ಗೊಂದಲ ಮೂಡಿಸಿರುವ ಬಂಡಾಯ, ಭಿನ್ನಮತ ಸೇರಿ ಅನೇಕ ವಿಚಾರಗಳನ್ನು ಚರ್ಚೆ ಮಾಡಿರುವುದಾಗಿ ತಿಳಿದು ಬಂದಿದೆ.
ಬದಲಾವಣೆ ಇಲ್ಲ
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್, ”ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಪ್ರಶ್ನೆ ಉದ್ಭವಿಸಿಲ್ಲ. ವಿಜೇಯೇಂದ್ರ ಅವರನ್ನು ಸಂಘಟನೆ ಬಲ ಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಸ್ಥಾನ ಬದಲಾವಣೆ ಮಾಡುವ ಸಾಮರ್ಥ್ಯ ಬಿಜೆಪಿಯಲ್ಲಿ ಕಾರ್ಯಕರ್ತರು ಮತ್ತು ಹೈಕಮಾಂಡ್ ಗೆ ಮಾತ್ರ ಇದೆ. ಯಾರೋ ಹೇಳಿದ ಕಾರಣಕ್ಕೆ ಬದಲಾವಣೆ ಸಾಧ್ಯ ಇಲ್ಲ” ಎಂದರು.
ಸೋಮಶೇಖರ್, ಹೆಬ್ಬಾರ್ ಅಮಾನತಿಗೆ ಶಿಫಾರಸು
ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯಿಂದ ಎರಡೂ ಕಾಲು ಹೊರಗಿಟ್ಟಿರುವ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಮತ್ತು ಯಶವಂತ ಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಪಕ್ಷದಿಂದ ಅಮಾನತು ಅಥವಾ ಉಚ್ಚಾಟನೆ ಮಾಡಲು ಸಭೆಯಲ್ಲಿ ಶಿಫಾರಸು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ಸತ್ಯಶೋಧನ ತಂಡ ರಚನೆ
3 ವಿಧಾನಸಭಾ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಸೋಲಿನ ಕುರಿತು ಸತ್ಯ ಅರಿಯಲು ಸತ್ಯಶೋಧನ ಸಮಿತಿ ರಚಿಸಿದೆ. ಹಿರಿಯರೂ ಆಗಿರುವ ಮಾಜಿ ಸಿಎಂ ಡಿ.ವಿ. ಸದಾ ನಂದ ಗೌಡ ಮತ್ತು ಮಾಜಿ ಸಚಿವ ಎನ್. ಮಹೇಶ್ ಅವರಿಗೆ ಸಮಿತಿಯ ಹೊಣೆ ಹೊರಿಸಲಾಗಿದೆ.
ಬಿ.ವೈ. ವಿಜಯೇಂದ್ರ ಮಾತನಾಡಿ ‘ಪಕ್ಷದ ಕೆಲವು ಬೆಳವಣಿಗೆಗಳಿಂದ ಕಾರ್ಯಕರ್ತರಿಗೂ ಬೇಸರ ಆಗಿದೆ. ಪಕ್ಷಕ್ಕೂ ಒಳ್ಳೆಯದಲ್ಲ. ಪಕ್ಷದ ಚೌಕಟ್ಟಿನಲ್ಲೇ ಮಾತನಾಡ ಬೇಕು. ಹಾದಿ-ಬೀದಿಯಲ್ಲಿ ಚರ್ಚೆ ಮಾಡುವವರ ವಿರುದ್ಧ ಕ್ರಮ ಆಗಬೇಕು. ಈ ಎಲ್ಲ ವಿಷಯಗಳೂ ಈಗ ವರಿಷ್ಠರ ಅಂಗಳದಲ್ಲಿದೆ. ಏನು ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡೋಣ’ ಎಂದರು.
ಕೋರ್ ಕಮಿಟಿ ಸಭೆಗೆ ನಾನು ಆಹ್ವಾನಿತನಲ್ಲ. ಹಾಗಾಗಿ ಹೋಗಿಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ನಮ್ಮ ಮೇಲೆ ಭಗವಂತನ ಕೃಪೆ ಇದೆ, ನಾಡಿನ ಜನರ ಶಕ್ತಿ ಇದೆ ಎಂದು ಬಸನ ಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.