BIMS: ಕಳಪೆ ಮಟ್ಟದ ಐವಿ ದ್ರಾವಣದಿಂದಲೇ ಬಾಣಂತಿಯರ ಸರಣಿ ಸಾವು: ಪ್ರಹ್ಲಾದ್‌ ಜೋಶಿ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಿಗೆ ಇಲಾಖೆ ಮೇಲೆ ಹಿಡಿತವಿಲ್ಲ: ಕೇಂದ್ರ ಸಚಿವ ಟೀಕೆ

Team Udayavani, Dec 7, 2024, 10:20 PM IST

Joshi

ಬೆಂಗಳೂರು: ಬಳ್ಳಾರಿಯ ಬಿಮ್ಸ್‌ ಆಸ್ಪತ್ರೆಯಲ್ಲಿ (BIMS Hospital) ಬಾಣಂತಿಯರ ಸರಣಿ ಸಾವಿನ ಪ್ರಕರಣ ವಿಚಾರವಾಗಿ ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಸಮರ ಸಾರಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪ್ರತಿಕ್ರಿಯಿಸಿ, ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ. ಆದರೆ ಕೇಂದ್ರದ ವಿರುದ್ಧ ಪದೇ ಪದೆ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಾಣಂತಿಯರ ಸಾವಿನ ಸಂಖ್ಯೆ ಹೆಚ್ಚಾಗಲು ಐವಿ ದ್ರಾವಣ ಕಾರಣವೆಂದು ಹೇಳಲಾಗುತ್ತಿದೆ ಐವಿ ದ್ರಾವಣ  ಮಾದರಿ ಪರೀಕ್ಷಿಸಿ​ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದರೂ ಪಕ್ಕದ ರಾಜ್ಯಗಳಲ್ಲಿ ಯಾಕೆ ಈ ರೀತಿಯ ಸಮಸ್ಯೆಯಾಗಲಿಲ್ಲ. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರವೇ ಇದೆಯಲ್ವಾ? ಅಲ್ಲಿ ಯಾಕೆ ಈ ರೀತಿಯ ಸಮಸ್ಯೆ ಆಗಿಲ್ಲ ಎಂದು ಜೋಶಿ ಪ್ರಶ್ನಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಿಗೆ ಇಲಾಖೆಗೆ ಮೇಲೆ ಹಿಡಿತವಿಲ್ಲ, ಸಂಪೂರ್ಣ ವಿಫಲರಾಗಿದ್ದಾರೆ. ಆರೋಗ್ಯ ಸಚಿವರು ಬರೀ ಮುಖ್ಯಮಂತ್ರಿ ಹಿಂದೆ ಓಡಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

ಸುಳ್ಳು ಹೇಳಿ ಜನರ ತಪ್ಪು ದಾರಿಗೆ ಎಳೆಯುತ್ತಿರುವ ಸಿಎಂ: 
ನಬಾರ್ಡ್​ನಿಂದ ರಾಜ್ಯಕ್ಕೆ ಹಣ ಕಡಿಮೆ ಮಾಡಿಲ್ಲ. ಈ ವಿಚಾರದಲ್ಲಿ ಸಿಎಂ ಸುಳ್ಳು ಹೇಳಿದ್ದಾರೆ. ಬ್ಯಾಂಕ್​ಗಳು ಕೃಷಿ ವಲಯಕ್ಕೆ ಉತ್ತಮವಾಗಿಯೇ ಸಾಲ ಕೊಡುತ್ತಿವೆ. ರಾಷ್ಟ್ರೀಯ ಬ್ಯಾಂಕ್​ಗಳು, ಸಹಕಾರ ಬ್ಯಾಂಕ್​ಗಳು ಶೇ.4 ಬಡ್ಡಿ ದರದಲ್ಲೇ ಸಾಲ ಕೊಡುವುದು. ಆದರೆ ಸಿಎಂ ಶೇ.7 ರಲ್ಲಿ ಸಾಲ ಕೊಡುತ್ತಿವೆ ಅಂತ ಸುಳ್ಳು ಹೇಳಿದ್ದಾರೆ. ಪ್ರಶ್ನೆ ಕೇಳಿದರೆ ಪತ್ರಕರ್ತರಿಗೆ ಸಿಎಂ ಬೆದರಿಸುತ್ತಾರೆ. ಜನರನ್ನು ತಪ್ಪು ದಾರಿಗೆ ಎಳೆಯುತ್ತಾರೆ. ಇವರು ಸುಳ್ಳುಗಾರ ಸಿದ್ದರಾಮಯ್ಯ. ಸುಳ್ಳು ಹೇಳುವುದರಲ್ಲಿ ಇವರಿಗೆ ನೊಬೆಲ್ ಸಿಗಬೇಕು. ಇಂತಹ ಸುಳ್ಳು ಹೇಳುವ ಸಿಎಂ ಅನ್ನು ರಾಜ್ಯ ಹಿಂದೆ ಕಂಡಿಲ್ಲ ಎಂದು ಕಿಡಿಕಾರಿದ್ದಾರೆ.

ಸಾಂವಿಧಾನಿಕ ಹುದ್ದೆಗೆ ಅಪಮಾನ: 
ರಾಜ್ಯಪಾಲರೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೂ ನೈತಿಕವಾಗಿ ಅವತ್ತೇ ರಾಜೀನಾಮೆ ಕೊಡಬೇಕಿತ್ತು. ರಾಜ್ಯಪಾಲರಿಗೆ, ಸಾಂವಿಧಾನಿಕ ಹುದ್ದೆಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ. ರಾಹುಲ್ ಗಾಂಧಿ ತಲೇನೂ ಖಾಲಿ, ಅವರು ಹಿಡಿದ ಸಂವಿಧಾನದ ಪುಸ್ತಕವೂ ಖಾಲಿ ಎಂದು ಜೋಶಿ ಹೇಳಿದ್ದಾರೆ.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.