Chikkamagaluru: ಪತಿಯ ಜೊತೆ ತೆರಳಿದ್ದಕ್ಕೆ ಮಹಿಳೆ ಕೊಲೆ ಪ್ರಕರಣ; ಪ್ರಿಯಕರನ ಬಂಧನ
ಹತ್ಯೆಗೈದು ಕಾಡಿನಲ್ಲಿ ಅವಿತಿದ್ದ ಆರೋಪಿಯ ಸೆರೆ ಹಿಡಿದ ಖಾಕಿ ಪಡೆ
Team Udayavani, Dec 7, 2024, 9:05 PM IST
ಚಿಕ್ಕಮಗಳೂರು: ತನ್ನ ಬಿಟ್ಟು ಪತಿಯ ಜತೆ ತೆರಳಿದ್ದಕ್ಕೆ ಮಕ್ಕಳ ಎದುರಲ್ಲೇ ಮಹಿಳೆಯ ಪ್ರಿಯಕರ ಹತ್ಯೆಗೈದಿದ್ದ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿತ್ತು. ಈಗ ಈ ಘಟನೆಗೆ ಸಂಬಂಧಿಸಿ ಹತ್ಯೆಗೈದ ಆರೋಪಿಯ 5 ಗಂಟೆ ಅವಧಿಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಾಕುವಿನಿಂದ ಇರಿದು ಹತ್ಯೆಗೈದಿದ್ದ ತೃಪ್ತಿ (25 ವರ್ಷ)ಯ ಶವವನ್ನು ಪ್ರಿಯಕರ ಚಿರಂಜೀವಿ ಕೃಷಿ ಹೊಂಡಕ್ಕೆ ಎಸೆದು ಪರಾರಿಯಾಗಿದ್ದ. ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸಿದ ಬಾಳೆಹೊನ್ನೂರು ಪೊಲೀಸರು ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದಾಗ ಆರೋಪಿ ಚಿರಂಜೀವಿ ಕಾಡಿನೊಳಗೆ ಅವಿತಿರುವ ಮಾಹಿತಿ ಆಧಾರದಲ್ಲಿ ಘಟನೆ ನಡೆದ ಸ್ಥಳದಿಂದ 6 ಕಿ.ಮೀ. ದೂರದಲ್ಲಿನ ಬಾಳೆಹೊನ್ನೂರಿನ ಗಡಿಗೇಶ್ವರ ಬಳಿ ಆರೋಪಿ ಚಿರಂಜೀವಿಯ ಪೊಲೀಸರು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ:
ತೃಪ್ತಿ ಮತ್ತು ಚಿರಂಜೀವಿ ಫೇಸ್ಬುಕ್ ಮೂಲಕ ಪರಿಚಯವಾಗಿ ಬಳಿಕ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಒಂದು ತಿಂಗಳ ಹಿಂದೆ ಪತಿ ರಾಜು ಬಿಟ್ಟು ಪ್ರಿಯಕರನ ಜೊತೆ ತೃಪ್ತಿ ನಾಪತ್ತೆಯಾಗಿದ್ದರು. ಈ ಬಗ್ಗೆ ಬಾಳೆಹೊನ್ನೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು. ವಿಜಯಪುರದಲ್ಲಿ ತಲೆಮರೆಸಿಕೊಂಡಿದ್ದ ತೃಪ್ತಿ ಮತ್ತು ಪ್ರಿಯಕರ ಚಿರಂಜೀವಿಯ ಪೊಲೀಸರು ಹುಡುಕಿ ಕರೆತಂದಿದ್ದರು. ಪೋಷಕರ ಸಂಧಾನದ ಬಳಿಕ ಪತಿ ರಾಜುವಿನ ಜೊತೆ ತೃಪ್ತಿ ತೆರಳಿದ್ದಾರೆ. ಇದರಿಂದ ಕುಪಿತಗೊಂಡ ಚಿರಂಜೀವಿ ತೃಪ್ತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.