BPL Card; ಬಿಜೆಪಿ ಶಾಸಕರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ: ಐವನ್ ಡಿಸೋಜಾ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 340 ಮಾತ್ರ...
Team Udayavani, Dec 7, 2024, 9:45 PM IST
ಮಂಗಳೂರು: ರಾಜ್ಯ ಸರಕಾರ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದೆ ಎಂದು ಬಿಜೆಪಿ ಶಾಸಕರು ರಾಜಕೀಯ ಪ್ರೇರಿತ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಅರ್ಹತೆ ಇದ್ದವರ ಕಾರ್ಡ್ ಎಂದೂ ರದ್ದಾಗುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 340 ಬಿಪಿಎಲ್ ಪಡಿತರ ಚೀಟಿಗಳು ಮಾತ್ರ ಹಿಂಪಡೆಯಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ಕಾಂಗ್ರೆಸ್ ಭವನದಲ್ಲಿ ಶನಿವಾರ(ಡಿ7) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ4.59 ಲಕ್ಷ ಕುಟುಂಬಗಳು ಪಡಿತರ ಚೀಟಿ ಹೊಂದಿವೆ. ಇದರಲ್ಲಿ2,77,744 ಬಿಪಿಎಲ್ ಕಾರ್ಡ್‌ಗಳಿದ್ದು, ಈ ಪೈಕಿ 5456 ಸಂಶಯಾಸ್ಪದ ಬಿಪಿಎಲ್ ಕಾರ್ಡ್‌ಗಳನ್ನು ಗುರುತಿಸಲಾಗಿತ್ತು. ಅದರಲ್ಲಿ 5116 ಮಂದಿಯ ಕಾರ್ಡ್‌ಗಳನ್ನು ಬಿಪಿಎಲ್ ಆಗಿಯೇ ಉಳಿಸಲಾಗಿದ್ದು, ಕೇವಲ 340 ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದುಗೊಳಿಸಲಾಗಿದೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರಲ್ಲ ಎಂಬ ದಾಖಲೆ ನೀಡಲು ವಿಫಲರಾದವರ ಬಿಪಿಎಲ್ ಕಾರ್ಡ್ ಮಾತ್ರವೇ ಹಿಂಪಡೆಯಲಾಗಿದೆ. ಬಡವರಿಗೆ ಯಾವ ಕಾರಣಕ್ಕೂ ಅನ್ಯಾಯ ಆಗಿಲ್ಲ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.