Karnataka; ಪ್ರತಿ ಜಿಲ್ಲೆಯಲ್ಲೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸಿದ್ಧರಾಮಯ್ಯ
Team Udayavani, Dec 8, 2024, 6:30 AM IST
ಯಳಂದೂರು: ಪ್ರತಿ ಗ್ರಾಮೀಣರೂ, ಬಡವರು, ನಿರ್ಗತಿಕರಿಗೆ ಉತ್ತಮ ಆರೋಗ್ಯ ಸೇವೆಗಳು ಸಿಗಬೇಕೆಂಬ ಉದ್ದೇಶ ನಮ್ಮ ಸರಕಾರದ್ದಾಗಿದೆ. ಉತ್ತಮ ಆರೋಗ್ಯ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಲು ನಮ್ಮ ಸರಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದರು.
ಯಳಂದೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿ, ಕುಡಿತ ಒಂದು ಚಟವಾಗಿದೆ. ಇದನ್ನು ಬಿಡಬೇಕು. ಇದರಿಂದ ಆರೋಗ್ಯ ಹಾಳಾಗುತ್ತದೆ. ಇದನ್ನು ಬಿಟ್ಟರೆ ನಾವು ಕೂಡ ಮದ್ಯ ಮಾರಾಟವನ್ನು ನಿಲ್ಲಿಸುತ್ತೇವೆ. ಈ ಬಾರಿ ಅಬಕಾರಿ ಇಲಾಖೆಯಿಂದ ಸರಕಾರಕ್ಕೆ 38,525 ಕೋಟಿ ರೂ. ಆದಾಯದ ನಿರೀಕ್ಷೆ ಇದೆ. ಇದು ಬರುತ್ತದೆ ಎಂಬ ನಂಬಿಕೆಯೂ ಇದೆ. ಏಕೆಂದರೆ ಕುಡಿಯುವರ ಸಂಖ್ಯೆ ದಿನೇದಿನೆ ಹೆಚ್ಚುತ್ತದೆ. ಇದರಿಂದ ಆರೋಗ್ಯ ಹಾಳಾಗುತ್ತದೆ. ಹಾಗಾಗಿ ಕುಡಿಯುವುದನ್ನು ನಿಲ್ಲಿಸಿ ಎಂದು ಸಲಹೆ ನೀಡಿದರು.
ಜನವರಿ ಅಥವಾ ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ
2025ರ ಜನವರಿ ಅಥವಾ ಫೆಬ್ರವರಿಯಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದೆ. ಆಗಲೂ ಸಹ ನೀವು ಈಗ ನೀಡುತ್ತಿರುವ ಬೆಂಬಲವನ್ನು ನಮಗೆ ನೀಡಬೇಕು. ನಾವು ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರವನ್ನು ಗೆದ್ದಿದ್ದೇವೆ, ಇದನ್ನು ಮತ್ತಷ್ಟು ಬಲಗೊಳಿಸುವ ಕೆಲಸವನ್ನು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.