Belagavi ಕಾರಾಗೃಹದಲ್ಲಿದ್ದ ಬನ್ನಂಜೆ ರಾಜಾ ಸಹಚರ ಇಸ್ಮಾಯಿಲ್ ಸಾ*ವು
Team Udayavani, Dec 7, 2024, 10:57 PM IST
ಬೆಳಗಾವಿ: ಜೀವಾವಧಿ ಶಿಕ್ಷೆಗೊಳಗಾಗಿ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜಾನ ಸಹಚರ, ಕೇರಳ ಮೂಲದ ಇಸ್ಮಾಯಿಲ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಉತ್ತರಕನ್ನಡ ಜಿಲ್ಲೆ ಅಂಕೋಲಾದ ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣದ ಆರೋಪಿಯಾಗಿದ್ದ ಇಸ್ಮಾಯಿಲ್ ಕಳೆದ 9 ವರ್ಷಗಳಿಂದ ಕೋಕಾ ಕಾಯ್ದೆಯಡಿ ಜೈಲಿನಲ್ಲಿದ್ದು, ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಇದೇ ಪ್ರಕರಣದಲ್ಲಿ ಬನ್ನಂಜೆ ರಾಜಾ ಕೂಡ ಹಿಂಡಲಗಾ ಜೈಲಿನಲ್ಲಿಯೇ ಇದ್ದಾನೆ.
ಇಸ್ಮಾಯಿಲ್‌ಗೆ ಶುಕ್ರವಾರ ರಾತ್ರಿ ಹೃದಯಾಘಾತವಾಗಿತ್ತು. ಕೂಡಲೇ ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಈ ಹಿಂದೆ ಎರಡು ಬಾರಿ ಈತನಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರು ಕೇರಳದ ಕಾಸರಗೋಡಿಗೆ ಮೃತದೇಹವನ್ನು ತೆಗೆದುಕೊಂಡು ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.