Transport ನೌಕರರ ಬೇಡಿಕೆ ಈಡೇರಿಸಲು ಪ್ರಯತ್ನ: ಸಚಿವ ರಾಮಲಿಂಗಾ ರೆಡ್ಡಿ
Team Udayavani, Dec 8, 2024, 6:30 AM IST
ಬೆಂಗಳೂರು: ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ ಕುರಿತಂತೆ ಈಗಾಗಲೇ ವಿವಿಧ ನೌಕರರ ಸಂಘಟನೆಗಳ ಮುಖಂಡರ ಜತೆಗೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂ ಚರ್ಚೆ ಆಗಿದೆ. ನೌಕರರ ಬೇಡಿಕೆ ಈಡೇರಿಕೆಗೆ ಸರಕಾರ ಪ್ರಯತ್ನ ನಡೆಸಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.
ಬೆಳಗಾವಿ ಅಧಿವೇಶನದ ವೇಳೆ ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ ನಡೆಸುತ್ತಿರುವ ಕುರಿತಂತೆ ಸುದ್ದಿಗಾರರ ಜತೆ ಮಾತನಾಡಿ, ಸಂಸ್ಥೆಯಲ್ಲಿ ಹಲವು ನೌಕರರ ಸಂಘಟನೆಗಳಿವೆ. ಇದರಲ್ಲಿ ಕೆಲವು ಮುಖಂಡರುಗಳ ಜತೆ ಮಾತುಕತೆ ಕೂಡ ಆಗಿದೆ. ಸಂಸ್ಥೆಯ ಆರ್ಥಿಕ ಸ್ಥಿತಿಯ ವಾಸ್ತವತೆ ಅವರಿಗೂ ತಿಳಿದಿದೆ. ಬಿಜೆಪಿ ಸರಕಾರ ಅಧಿಕಾರ ಬಿಟ್ಟಕೊಟ್ಟಾಗ 5,900 ಕೋಟಿ ರೂ .ಸಾಲ ಇಟ್ಟು ಹೋಗಿದ್ದಾರೆ. 2022ರ ಒಪ್ಪಂದದಂತೆೆ ಬಿಜೆಪಿ ಸರಕಾರದ ಆಡಳಿತ ಅವಧಿಯಲ್ಲಿ 8 ತಿಂಗಳ ಬಾಕಿ ನೀಡಬೇಕಾಗಿದೆ. ಇವೆಲ್ಲ ಅವರಿಗೆ ಗೊತ್ತಿದೆ. ನೌಕರರ ಬೇಡಿಕೆಗಳನ್ನು ಸರಕಾರ ಈಡೇರಿಸಲಿದೆ ಎಂದು ಹೇಳಿದರು.
ಬಿಜೆಪಿ ಸರಕಾರ ಪಿಎಫ್ ಹಣ ಕಟ್ಟಿಲ್ಲ
2018ರಲ್ಲಿ ನಮ್ಮ ಸರಕಾರ ಹೋಗಿ ಬಿಜೆಪಿ ಸರಕಾರ ಬಂದಾಗ ಪಿಎಫ್ ಹಣ 13 ಕೋಟಿ 71 ಲಕ್ಷ ರೂ. ಮಾತ್ರ ಬಾಕಿ ಇತ್ತು. ಆದರೆ 5 ವರ್ಷಗಳ ಅವಧಿಯಲ್ಲಿ ಬಿಜೆಪಿ ಸರಕಾರ ಪಿಎಫ್ ಹಣ ಕಟ್ಟಿಲ್ಲ. 1,380 ಕೋಟಿ ಪಿಎಫ್ ಹಣವನ್ನೇ ಬಿಜೆಪಿ ಅವರು ಬಿಟ್ಟು ಹೋಗಿದ್ದಾರೆ. ನಮ್ಮ ಸರಕಾರದ ಬಜೆಟ್‌ನಲ್ಲಿ ಕೂಡ ಬಾಕಿ ಉಳಿದಿದೆ. ಪಿಎಫ್ ಹಣ ಪಾವತಿಸಬೇಕಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.