Bihar; ಬಿಜೆಪಿ ನಡೆಸೀತೇ ಮಹಾ ಪ್ರಯೋಗ?: ಜೆಡಿಯುಗೆ ಆತಂಕ
ಬಿಜೆಪಿ ಹೆಚ್ಚು ಸ್ಥಾನ ಗೆದ್ದರೆ ಸಿಎಂ ಹುದ್ದೆ ತ್ಯಜಿಸಬೇಕಾದ ಅನಿವಾರ್ಯತೆ
Team Udayavani, Dec 8, 2024, 7:15 AM IST
ಪಟ್ನಾ: ಮಹಾರಾಷ್ಟ್ರ ಚುನಾವಣೆಯಲ್ಲಿ ಮಾಡಿದ್ದ ಪ್ರಯೋಗವನ್ನೇ ಬಿಜೆಪಿ 2025ರ ಬಿಹಾರ ವಿಧಾನಸಭೆಯಲ್ಲೂ ನಡೆಸೀತೇ ಎಂಬ ಅಳುಕು ಈಗ ನಿತೀಶ್ ಕುಮಾರ್ ನೇತೃತ್ವದ ಜೆಡಿಯುಗೆ ಶುರುವಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ನೇತೃತ್ವ ದಲ್ಲಿ ಚುನಾವಣೆ ಎದುರಿಸಲಾಗುತ್ತದೆ ಎಂದು ಬಿಜೆಪಿ ಹೇಳಿದ್ದರಿಂದ ಶಿಂಧೆ ಸಿಎಂ ಆಗಿಯೇ ಮುಂದುವರಿಯುವ ನಿರೀಕ್ಷೆ ಹೊಂದಿದ್ದರು. ಆದರೆ ಗೆದ್ದ ಬಳಿಕ ಸಿಎಂ ಹುದ್ದೆ ಫಡ್ನವೀಸ್ ಪಾಲಾಯಿತು.
ಒಂದು ವೇಳೆ 243 ಕ್ಷೇತ್ರಗಳನ್ನು ಹೊಂದಿರುವ ಬಿಹಾರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ ಬೇಕಾಗುವ 122 ಕ್ಷೇತ್ರಗಳನ್ನು ಬಿಜೆಪಿ ಪಡೆದುಕೊಂಡರೆ ಸಿಎಂ ಹುದ್ದೆ ತನಗೇ ಬೇಕು ಎಂದು ಬಿಜೆಪಿ ಕೇಳಿಬಿಟ್ಟರೆ ಎಂಬ ಅಳುಕು ಜೆಡಿಯುನದ್ದು ಎಂದು ಮಾಧ್ಯಮ ವೊಂದು ವರದಿ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಸರು ಬಹಿರಂಗಪಡಿಸಲಿಚ್ಛಿಸದ ಜೆಡಿಯು ನಾಯಕ, ಬಿಹಾರ ಮಾದರಿ ಅಧಿಕಾರ ಹಂಚಿಕೆ ಜಾರಿ ಮಾಡಬೇಕು ಎಂಬ ಶಿಂಧೆ ಬೇಡಿಕೆಯನ್ನು ಬಿಜೆಪಿ ತಿರಸ್ಕರಿಸಿತ್ತು ಎಂದಿದ್ದಾರೆ. ಬಿಹಾರದಲ್ಲಿ ಸಿಎಂ ನಿತೀಶ್ ಪ್ರಭಾವವನ್ನು ಯಾರೂ ಅಲ್ಲಗಳೆಯುವಂತಿಲ್ಲ. ಮಹಾರಾಷ್ಟ್ರ ಫಲಿತಾಂಶದಿಂದ ಜೆಡಿಯುಗೆ ಆಘಾತವಾಗಿದ್ದರೂ, 2 ರಾಜ್ಯಗಳ ಪರಿಸ್ಥಿತಿ ಬೇರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.