Kukke: ಸಂಭ್ರಮದ ಚಂಪಾಷಷ್ಠಿ ಸಂಪನ್ನ
ಸಾಕ್ಷಿಯಾದ ಸಹಸ್ರಾರು ಭಕ್ತರು; ಇಂದು ನೌಕಾ ವಿಹಾರ; ಡಿ.12: ನೀರುಬಂಡಿ ಉತ್ಸವ,ದೈವಗಳ ನಡಾವಳಿ
Team Udayavani, Dec 8, 2024, 12:51 PM IST
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ರಾತ್ರಿ ಪಂಚಮಿ ರಥೋತ್ಸವ ಜರಗಿ ಶನಿವಾರ ಮುಂಜಾನೆ ಮಹಾ ರಥೋತ್ಸವ ಜರಗಿತು.
ಶುಕ್ರವಾರ ರಾತ್ರಿ ಮಹಾಪೂಜೆಯ ಬಳಿಕ ಹೊರಾಂಗಣ ಉತ್ಸವ ಆರಂಭ ವಾಯಿತು. ವಿಶೇಷ ಹೂವಿನ ಅಲಂಕಾರ ದೊಂದಿಗೆ ರಾರಾಜಿಸುತ್ತಿದ್ದ ಪಲ್ಲಕ್ಕಿಯಲ್ಲಿ ದೇವರ ಉತ್ಸವ ಮತ್ತು ಬಂಡಿ ಉತ್ಸವ ನೆರವೇರಿತು. ರಥಬೀದಿಗೆ ಆಗಮಿಸಿದ ದೇವರು ಪಂಚಮಿ ರಥದಲ್ಲಿ ಉತ್ಸವ ಸ್ವೀಕರಿಸಿದರು. ಪಾಸ್ ಇದ್ದವರಿಗೆ ಮಾತ್ರ ರಥ ಬೀದಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಸವಾರಿ ಮಂಟಪದ ಸವಾರಿ ಕಟ್ಟೆಯಲ್ಲಿ ಪೂಜೆ ನೆರವೇರಿತು. ಈ ಸಂದರ್ಭ ಕುಕ್ಕೆಬೆಡಿ ಬಾನಂಗಳದಲ್ಲಿ ಚಿತ್ತಾರ ಮೂಡಿಸಿತು.
ಚಂಪಾಷಷ್ಠಿ ಮಹೋತ್ಸವದ ವಿವಿಧ ಕೆಲಸ ಕಾರ್ಯಗಳಲ್ಲಿ ವಿವಿಧ ಸಂಘ- ಸಂಸ್ಥೆಗಳ ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಊರ ಪರ ಊರ ಭಕ್ತರ ಅನುಕೂಲಕ್ಕಾಗಿ ಸರಿಯಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.
ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ಮುಲ್ಲೆ„ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ದೇಗುಲದ ಆಡಳಿತಾಧಿಕಾರಿ ಹಾಗೂ ಪುತ್ತೂರು ಎಸಿ ಜುಬಿನ್ ಮೊಹಪಾತ್ರ, ಮಾಜಿ ಸಚಿವ ಬಿ.ರಮಾನಾಥ ರೈ, ಬ್ರಹ್ಮರಥ ದಾನಿ ಅಜಿತ್ ಶೆಟ್ಟಿ ಕಡಬ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ದೇಗುಲದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಪ್ರೊಬೆಷನರಿ ಐಎಎಸ್ ಅ ಧಿಕಾರಿ ಶ್ರವಣ್, ಪ್ರೊಬೆಷನರಿ ಐಪಿಎಸ್ ಅಧಿಕಾರಿ ಮನೀಶ, ಕಡಬ ತಹಶಿಲ್ದಾರ್ ಪ್ರಭಾಕರ ಖಜೂರೆ, ಸುಳ್ಯ ತಹಶಿಲ್ದಾರ್ ಮಂಜುಳಾ, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವಾಧ್ಯಕ್ಷ ಮೋಹನ್‌ರಾಂ.ಎಸ್.ಸುಳ್ಳಿ, ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಕೇನ್ಯ ರವೀಂದ್ರನಾಥ ಶೆಟ್ಟಿ, ಡಿವೈಎಸ್‌ಪಿ ಡಾ| ಅರುಣ್ ನಾಗೇಗೌಡ, ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ, ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್ ಕೆ., ಮಾಸ್ಟರ್ ಪ್ಲ್ರಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಅಚ್ಯುತ ಗೌಡ ಆಲ್ಕಬೆ, ದೇಗುಲದ ಅಭಿಯಂತರ ಉದಯಕುಮಾರ್, ಲೋಕೋಪಯೋಗಿ ಅಭಿಯಂತರ ಪ್ರಮೋದ್ ಕುಮಾರ್, ದೇಗುಲದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಹೆಬ್ಟಾರ್ ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ಎ.ಆರ್ ಅ ಧಿಕಾರಿಗಳು, ಜನಪ್ರತಿನಿಧಿಗಳು, ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.
ಇಂದು ಅವಭೃಥೋತ್ಸವ
ಡಿ.8ರಂದು ಬೆಳಗ್ಗೆ ದೇವಸ್ಥಾನದಿಂದ ಬಂಡಿರಥದಲ್ಲಿ ಉತ್ಸವಮೂರ್ತಿಯ ಅವಭೃಥೋತ್ಸವ ಸವಾರಿ ಹೊರಟು, ಬಿಲದ್ವಾರ ಕಟ್ಟೆಯಲ್ಲಿ ಪೂಜೆ ನಡೆದು. ಕುಮಾರಧಾರ ನದಿಯಲ್ಲಿ ದೇವರ ನೌಕಾವಿಹಾರ ಹಾಗೂ ಅವಭƒಥೋತ್ಸವ ಜರುಗಲಿದೆ. ಡಿ.12ರಂದು ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ ಉತ್ಸವ, ದೈವಗಳ ನಡಾವಳಿ ಜರಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.