Davanagere: ಸಿದ್ದರಾಮಯ್ಯ ಸರ್ಕಾರ ಐಸಿಯು ವಾರ್ಡ್ ನಲ್ಲಿದೆ: ರೇಣುಕಾಚಾರ್ಯ
Team Udayavani, Dec 8, 2024, 2:21 PM IST
ದಾವಣಗೆರೆ: ಸಿದ್ದರಾಮಯ್ಯ ಸರ್ಕಾರ ಐಸಿಯು ವಾರ್ಡ್ ನಲ್ಲಿದ್ದು ಯಾವುದೇ ಸಂದರ್ಭದಲ್ಲಿಯೂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ವಜಾ ಗೊಳಿಸಬೇಕು ಹಾಗೂ ಈ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಿದರು.
ಬಾಣಂತಿಯವರ ಸಾವು ಪ್ರಕರಣದಲ್ಲಿ ನಕಲಿ ಔಷಧಿ ಪೂರೈಕೆಯೇ ಕಾರಣವಾಗಿದ್ದು, ಇದು ಸಂಪೂರ್ಣ ತನಿಖೆಯಾಗಬೇಕು. ಕೋವಿಡ್ ಸಂದರ್ಭದಲ್ಲಿ ಭ್ರಷ್ಟಚಾರ ನಡೆದಿದೆ ಎನ್ನುವ ನೀವು ನಕಲಿ ಔಷಧ ಪೂರೈಸುವ ಕಂಪನಿಯಿಂದ ಎಷ್ಟು ಪರ್ಸಂಟೇಜ್ ಪಡೆದಿದ್ದೀರಿ? ಮುಡಾ ಸೇರಿದಂತೆ ಇನ್ನಿತರ ಹಗರಣಗಳು ಅವರಿಗೆ ಸುತ್ತಿಕೊಂಡಿದ್ದು ಈ ವಿಚಾರವಾಗಿ ಇಡಿ ನೊಟೀಸ್ ನೀಡಿದೆ. ಸಿದ್ದರಾಮಯ್ಯ ಆತ್ಮಸ್ಥೈರ್ಯ ಕಳೆದುಕೊಂಡಿದ್ದಾರೆ. ಹಾಗಾಗಿಯೇ ಅವರು ಚಾಮರಾಜನಗರದಲ್ಲಿ ಇದು ತಮ್ಮ ಅಧಿಕಾರದ ಕೊನೆಯ ದಿನಗಳೆಂದು ಹೇಳಿದ್ದು ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಖಚಿತ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರ ವಿಚಾರವಾಗಿ ಯಾರೂ ಪರ-ವಿರೋಧ ಚರ್ಚೆ, ಹೇಳಿಕೆ ಕೊಡಬಾರದು ಎಂದು ರಾಷ್ಟ್ರೀಯ ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡ ಭಾವನೆಯನ್ನು ಈಗಾಗಲೇ ಮುಖಂಡರ ಎದುರು ವ್ಯಕ್ತಪಡಿಸಿದ್ದೇವೆ. ಹಾಗಾಗಿ ನಾವು ಈಗ ಅದರ ಬಗ್ಗೆ ಏನೂ ಮಾತನಾಡುವುದಿಲ್ಲ. ಪಕ್ಷದಲ್ಲಿನ ಯಾವುದೇ ಗೊಂದಲ ಇದ್ದರೂ ಅದಕ್ಕೆ ರಾಷ್ಟ್ರೀಯ ಮುಖಂಡರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ರೇಣುಕಾಚಾರ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.