Tollywood: ಆಸ್ತಿ ವಿವಾದ; ತಂದೆ ವಿರುದ್ದವೇ ಹಲ್ಲೆ ಆರೋಪ ಮಾಡಿ ದೂರು ದಾಖಲಿಸಿದ ಖ್ಯಾತ ನಟ

Team Udayavani, Dec 8, 2024, 3:40 PM IST

Tollywood: ಆಸ್ತಿ ವಿವಾದ; ತಂದೆ ವಿರುದ್ದವೇ ಹಲ್ಲೆ ಆರೋಪ ಮಾಡಿ ದೂರು ದಾಖಲಿಸಿದ ಖ್ಯಾತ ನಟ

ಹೈದರಾಬಾದ್:‌ ತೆಲುಗು ಚಿತ್ರರಂಗದ (Tollywood) ಖ್ಯಾತ ನಟರೊಬ್ಬರ ಕೌಟುಂಬಿಕ ಹಾಗೂ ಆಸ್ತಿ ವಿಚಾರದ ವಿವಾದ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ.

ತೆಲುಗು ಚಿತ್ರರಂಗದ ಖ್ಯಾತ ನಟ ಮೋಹನ್ ಬಾಬು – ಪುತ್ರ ಮನೋಜ್‌ ಮಂಚು (Manchu Manoj) ನಡುವಿನ ಜಗಳ ತಾರಕಕ್ಕೇರಿ ಇಬ್ಬರು ಪೊಲೀಸ್‌ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಿಸಿದ್ದಾರೆ ಎಂದು ತೆಲುಗು ವಾಹಿನಿಗಳು ವರದಿ ಮಾಡಿವೆ.

ತಂದೆ ಮೋಹನ್‌ ಬಾಬು (Mohan Babu) ನನ್ನ ಹಾಗೂ ನನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮನೋಜ್‌ ಮಂಚು ಗಾಯದ ಗುರುತುಗಳನ್ನು ಪೊಲೀಸರಿಗೆ ತೋರಿಸಿ ದೂರು ದಾಖಲಿಸಿದ್ದಾರೆ. ಇದಾದ ಬಳಿ ಮೋಹನ್‌ ಬಾಬು ಅವರು ತನ್ನ ಪುತ್ರ ಮನೋಜ್‌ ವಿರುದ್ದ ಪ್ರತಿ ದೂರು ದಾಖಲಿಸಿದ್ದಾರೆ. ಆತನೇ ತನ್ನ ಮೇಲೆ ಮೊದಲು ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಅವರು ಹೇಳಿರುವುದಾಗಿ ವರದಿ ತಿಳಿಸಿದೆ.

ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಕುಟುಂಬದೊಳಗಿರುವ ಆಸ್ತಿ ವಿವಾದಕ್ಕೆ ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

ಒಂದು ಕಾಲದಲ್ಲಿ ಖಳನಟನಾಗಿ ಟಾಲಿವುಡ್‌ನಲ್ಲಿ ಮೆರೆದಾಡಿದ ಮೋಹನ್‌ ಬಾಬು ಅಪಾರ ಅಭಿಮಾನಿಗಳ ಪ್ರೀತಿ – ಪ್ರೋತ್ಸಾಹವನ್ನು ಸಂಪಾದಿಸಿದ್ದಾರೆ.  ಅವರಿಗೆ ವಿಷ್ಣು, ಮನೋಜ್‌ ಹಾಗೂ ಒಬ್ಬ ಹೆಣ್ಣು ಮಗಳು ಇದ್ದಾಳೆ. ಆದರೆ ತಂದೆಯ ಆಸ್ತಿ ವಿಚಾರ ಮಕ್ಕಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Allu Arjun: ಮಾಲಿವುಡ್‌ನ ಹಿಟ್‌ ನಿರ್ದೇಶಕನ ಜತೆ ಅಲ್ಲು ಅರ್ಜುನ್‌ ಸಿನಿಮಾ- ವರದಿ

ಈ ಹಿಂದೆ ವಿಷ್ಣು – ಮನೋಜ್‌ ನಡುವೆ ಜಗಳ ಉಂಟಾಗಿ ಅದು ದೈಹಿಕ ಹಲ್ಲೆವರೆಗೂ ಹೋಗಿತ್ತು. ಈ ಸಂಬಂಧ ವಿಡಿಯೋ ಕೂಡ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು.

ಮನೋಜ್‌ 2023ರಲ್ಲಿ ಭೂಮಾ ಮೌನಿಕಾ ರೆಡ್ಡಿ ಎನ್ನವಾಕೆಯ ಜತೆ ಎರಡನೇ ಮದುವೆ ಆಗಿದ್ದರು. ಇದು ವಿಷ್ಣುಗೆ ಇಷ್ಟವಿರಲಿಲ್ಲ. ಇದೇ ಕಾರಣವಾಗಿ ಇಬ್ಬರ ನಡುವೆ ಜಗಳವಾಗಿತ್ತು. ಅಲ್ಲಿಂದಲೇ ಕುಟುಂಬದೊಳಗೆ ಒಂದಲ್ಲ ಒಂದು ವಿಚಾರಕ್ಕೆ ಜಗಳ ಶುರುವಾಗಿತ್ತು.

ಸದ್ಯ ತಂದೆ – ಮಗನ ನಡುವೆ ಹಲ್ಲೆ ನಡೆದಿದೆ ಎನ್ನುವ ವಿಚಾರ ಮಂಚು ಅವರ ಫ್ಯಾಮಿಲಿ ಪಿಆರ್‌ ಇದೆಲ್ಲ ಸುಳ್ಳೆಂದು ಹೇಳಿದ್ದಾರೆ. ಇಬ್ಬರು ಪೊಲೀಸ್ ಠಾಣೆಗೆ ತೆರಳಿ ದೂರು ಕೊಟ್ಟಿಲ್ಲ, ಬದಲಿಗೆ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಪಿಆರ್‌ ಹೇಳಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.