Hunchadakatte: ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ನೊಂದ ಮನಸ್ಸುಗಳಿಗೆ ಧಾರ್ಮಿಕ ಕ್ಷೇತ್ರಗಳಿಂದ ಬದುಕುವ ಪ್ರೇರಣೆ: ಧಾರ್ಮಿಕ ಸಭೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ

Team Udayavani, Dec 8, 2024, 8:15 PM IST

THA-Araga

ತೀರ್ಥಹಳ್ಳಿ: ತಾಲೂಕಿನ ಹುಂಚದಕಟ್ಟೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ ಶ್ರೀನರಸಿಂಹತೀರ್ಥ ಸಂಸ್ಥಾನ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಅರಸೀಕೆರೆ ಶ್ರೀ ಲಕ್ಷ್ಮೀ ನರಸಿಂಹ ಪಂಚಾಯತನ ಕ್ಷೇತ್ರದ ಅವಧೂತ ಶ್ರೀಸತೀಶ ಶರ್ಮ ಅವರ ಪಾದಪೂಜೆ ಹಾಗೂ ಆಶೀರ್ವಚನ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನದ ವೇಳೆಗೆ ಶ್ರೀಕ್ಷೇತ್ರ ಆವರಣದಿಂದ ಹುಂಚದಕಟ್ಟೆ ಗರ್ತಿಕೆರೆ ಮಾರ್ಗದಲ್ಲಿ ವಿವಿಧ ಕಲಾತಂಡಗಳ ಕಲಾ ಪ್ರದರ್ಶನದೊಂದಿಗೆ ರಾಜಬೀದಿ ಉತ್ಸವ ನಡೆಯಿತು. ಸಂಜೆ ಪೂಜಾ ವಿಧಾನಗಳೊಂದಿಗೆ ದೀಪೋತ್ಸವ ನೆರವೇರಿತು. ದೀಪೋತ್ಸವ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಿಂದ ನಡೆದ ಐದು ಮೇಳಗಳ ಕೂಡಾಟ ಯಕ್ಷಗಾನ ಪ್ರದರ್ಶನ ನೆರೆದಿದ್ದ ಭಕ್ತರ ಗಮನ ಸೆಳೆಯಿತು.



ಬದುಕಿಗೆ ಚೈತನ್ಯ ತುಂಬುವ ಕ್ಷೇತ್ರ:

ಮಾಜಿ ಗೃಹಸಚಿವ, ಶಾಸಕ ಆರಗ ಜ್ಞಾನೇಂದ್ರ ಧಾರ್ಮಿಕ ಸಭೆಯ ಉದ್ಘಾಟಿಸಿ ಮಾತನಾಡಿ, ನೊಂದ ಮನಸ್ಸುಗಳಿಗೆ ಧಾರ್ಮಿಕ ಕ್ಷೇತ್ರಗಳು ಬದುಕುವ ಪ್ರೇರಣೆ ನೀಡುತ್ತವೆ. ಶ್ರೀ ಕ್ಷೇತ್ರ ರಾಮನಸರ ಸಾವಿರಾರು ಜನರ ಬದುಕಿಗೆ ಚೈತನ್ಯ ತುಂಬಿದೆ ಎಂದು ಬಣ್ಣಿಸಿದರು. ಶ್ರೀ ಕ್ಷೇತ್ರ ರಾಮನಸರ ಪವಾಡ ಸದೃಶ್ಯವಾಗಿ ಸಾಕಷ್ಟು ಬದಲಾವಣೆ ಕಂಡಿದ್ದು, ಜನರಲ್ಲಿರುವ ನೋವುಗಳ ನಿವಾರಿಸಿ ಬದುಕುವ ಹುಮ್ಮಸ್ಸು ಶ್ರೀಕ್ಷೇತ್ರ ನೀಡುತ್ತಿದೆ. ಜತೆಗೆ ಕಲೆ, ಸಾಹಿತ್ಯ, ಸಂಸ್ಕೃತಿ ಬೆಳೆಸುವ ಕಾರ್ಯವನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಆಶೀರ್ವಚನ ನೀಡಿದರು. ದೇವಸ್ಥಾನ ಮುಖ್ಯಸ್ಥರಾದ ಸುನಂದಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮದರ್ಶಿಗಳಾದ ಎನ್.ಕೆ.ನಾಗರಾಜ್, ಚಂದ್ರಶೇಖರ್ (ಪುಟ್ಟಣ್ಣ), ಹುಂಚದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಆರ್.ವೆಂಕಟೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಸ್.ಮಹೇಶ್, ಪ್ರಧಾನ ಅರ್ಚಕ ಸುರೇಶ್ ಭಟ್, ಸಂಚಾಲಕರಾದ ಗಣೇಶ್, ಪೊಲೀಸ್ ಸಬ್ ಇನ್ಸ್‌ಪೆ ಕ್ಟರ್ ಶ್ರೀನಿವಾಸ್ ಸೇರಿ ಅನೇಕರಿದ್ದರು. ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕೆ.ವಿ.ಅರವಿಂದ್, ರಾಷ್ಟ್ರಮಟ್ಟದ ಯೋಗಪಟು ಕಾವ್ಯಾ, ಬನಶಂಕರಿ ಕಲಾತಂಡದ ದಿನೇಶ್ ಎಡಮೊಗೆ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Auto Draft

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-iip

Industrial production ಕಳೆದ ನವೆಂಬರ್‌ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.