BJP; ಯತ್ನಾಳ್ ಅವರದ್ದು ಲಾಂಗ್ ಟರ್ಮ್ ಸ್ಟ್ರಾಟರ್ಜಿ…: ವಿಜಯೇಂದ್ರ ಲೇವಡಿ

ನಾನು ರಾಜ್ಯಾಧ್ಯಕ್ಷ ಸ್ಥಾನ ಪಡೆದಿರೋದು ಸಿಎಂ ಆಗಲಿಕ್ಕೆ ಅಲ್ಲ....

Team Udayavani, Dec 8, 2024, 8:20 PM IST

vijayendra-3

ದಾವಣಗೆರೆ: ‘ಯತ್ನಾಳ್ ಅವರಿಗೆ ಲಾಂಗ್ ಟರ್ಮ್ ಸ್ಟ್ರಾಟರ್ಜಿ ಇದ್ದಂತೆ ಕಾಣುತ್ತದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರವಿವಾರ(ಡಿ8 )ಲೇವಡಿ ಮಾಡಿದ್ದಾರೆ.

ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಯತ್ನಾಳ್ ಮತ್ತು ರೆಬೆಲ್ ಬಿಜೆಪಿಗರ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು. ಯತ್ನಾಳ್ ಅವರಿಗೆ ಲಾಂಗ್ ಟರ್ಮ್ ಸ್ಟ್ರಾಟರ್ಜಿ ಇದ್ದಂತೆ ಕಾಣುತ್ತದೆ. ನಾವು ಯಾವ ಹೋರಾಟ ಮಾಡಬೇಡಿ ಎಂದು ಹೇಳಿಲ್ಲ.ಎಲ್ಲವನ್ನೂ ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ. ಅವರ ಅನುಮಾನಗಳಿಗೆ, ಆಸೆಗಳಿಗೆ ಕಾಲವೇ ಉತ್ತರ ಕೊಡಲಿದೆ, ಅವರಿಗೆ ಒಳ್ಳೆಯದಾಗಲಿ’ ಎಂದರು.

ಮುಂದಿನ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ‘ನಾನು ರಾಜ್ಯಾಧ್ಯಕ್ಷ ಸ್ಥಾನ ಪಡೆದಿರೋದು ಸಿಎಂ ಆಗಲಿಕ್ಕೆ ಅಲ್ಲ.ಈ ಸ್ಥಾನವನ್ನ ಜವಾಬ್ದಾರಿಯಿಂದ ನಿರ್ವಹಣೆ ಮಾಡುತ್ತೇನೆ’ ಎಂದರು.

ಹಗರಣ ಹೊರಗೆಳೆಯುತ್ತೇವೆ
‘ಚಳಿಗಾಲದ ಅಧಿವೇಶದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣ ಹೊರಗೆಳೆಯುವ ಕೆಲಸ ಮಾಡುತ್ತೇವೆ. ಅಭಿವೃದ್ಧಿಗಾಗಿ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ಯಾವುದೇ ಅಭಿವೃದ್ಧಿ ಇಲ್ಲದೆ ರಾಜ್ಯದ ಜನತೆ ತತ್ತರಿಸುವಂತಾಗಿದೆ.ಜನರ ಧ್ವನಿಯಾಗಿ ನಾಳೆಯಿಂದ(ಸೋಮವಾರ) ಅಧಿವೇಶನದಲ್ಲಿ ಎಚ್ಚರಿಸುವ ಕೆಲಸ ಮಾಡಲಿದ್ದೇವೆ’ ಎಂದರು.

‘ವಕ್ಫ್ ವಿರುದ್ದ ನಮ್ಮ ಪ್ರವಾಸ ನಿಲ್ಲುವುದಿಲ್ಲ.ಅಧಿವೇಶದ ನಂತರ ಪ್ರವಾಸ ಮಾಡಿ ಮತ್ತಷ್ಟು ಮಾಹಿತಿ ಕಲೆ ಹಾಕುತ್ತೇವೆ.‌ನಂತರ ಪಾರ್ಲಿಮೆಂಟ್ ಮುಂದೆ ಧರಣಿ ಮಾಡುತ್ತೇವೆ’ ಎಂದರು.

‘ಗ್ಯಾರಂಟಿಗೆ ಹಣ ಹೊಂದಿಸದೇ ಸರ್ಕಾರ ಪರದಾಡುತ್ತಿದೆ. ಚುನಾವಣೆಗೆ ಮೂರು ದಿನ ಇದ್ದಾಗ ಗ್ಯಾರಂಟಿ ಹಣ ಬಿಡುಗಡೆ ಮಾಡುತ್ತಾರೆ.ಬಡವರಿಗೆ ಅವಮಾನ ಮಾಡುವಂತೆ ಕೆಲಸ ಸರ್ಕಾರ ಮಾಡುತ್ತಿದೆ.ಗ್ಯಾರಂಟಿಗಳನ್ನು ಯಾರು ಕೇಳಿರಲಿಲ್ಲ.ಅಭಿವೃದ್ದಿಗೆ ಹಣ ಇಲ್ಲದೆ ಕಾಂಗ್ರೆಸ್ ಶಾಸಕರೇ ತಲೆ ಎತ್ತಿ ಹೋಗದ ಸ್ಥಿತಿ ನಿರ್ಮಾಣವಾಗಿದೆ.ಯಾವ ಕಾಲದಲ್ಲೂ ಇಂತಹ ಕೆಟ್ಟ ಸ್ಥಿತಿ ಬಂದಿರಲಿಲ್ಲ’ ಎಂದು ರಾಜ್ಯ ಸರಕಾರದ ವಿರುದ್ಧ ವಿಜಯೇಂದ್ರ ಕಿಡಿ ಕಾರಿದರು.

ಬಳ್ಳಾರಿಯಲ್ಲಿ ಗರ್ಭಿಣೆಯರ ಸಾವು ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ‘ಮುನ್ನೂರಕ್ಕೂ ಹೆಚ್ಚು ಗರ್ಭಿಣಿಯರ ಸಾವಾಗಿದೆ. ನಿನ್ನೆ ನಮ್ಮ ಪಕ್ಷದ ಮಹಿಳಾ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ, ನಾವು ಹೋರಾಟ ಮಾಡಲಿದ್ದೇವೆ’ ಎಂದು ತಿಳಿಸಿದರು.

ಟಾಪ್ ನ್ಯೂಸ್

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.