Project: ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಡಿಪಿಆರ್ ಜನವರಿಯೊಳಗೆ ಪೂರ್ಣಗೊಳಿಸಿ: ಸೋಮಣ್ಣ
ವನ್ಯಜೀವಿ ಮಂಡಳಿಯಿಂದ ವರದಿ ಬಂದರೆ ಯೋಜನೆ ಆರಂಭದ ಅಡೆತಡೆ ನಿವಾರಣೆ: ರೈಲ್ವೆ ಖಾತೆ ಸಹಾಯಕ ಸಚಿವ
Team Udayavani, Dec 8, 2024, 9:16 PM IST
ಹುಬ್ಬಳ್ಳಿ: ಹುಬ್ಬಳ್ಳಿ-ಅಂಕೋಲಾ ಹಾಗೂ ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲ್ವೆ ಮಾರ್ಗದ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಜನವರಿ ಅಂತ್ಯದೊಳಗೆ ಪೂರ್ಣಗೊಳ್ಳಬೇಕು. ಜೂ.25ರೊಳಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದಕ್ಕಿರುವ ಸಣ್ಣಪುಟ್ಟ ತೊಂದರೆಗಳ ನಿವಾರಿಸಲಾಗುವುದು ಎಂದು ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ತಿಳಿಸಿದರು.
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಸಂಬಂಧಿಸಿ ವನ್ಯಜೀವಿ ಮಂಡಳಿಯಿಂದ ವರದಿ ಬರಬೇಕಾಗಿದೆ. ಅರಣ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಅನುಮತಿ ದೊರೆತಿದೆ. ಇದೀಗ ವನ್ಯಜೀವಿಗಳ ಚಲನವಲನದ ಕುರಿತು ಒಂದು ಸಮೀಕ್ಷೆ ಆಗಿದೆ. ಅದರ ವರದಿ ಡಿ.15 ರೊಳಗೆ ಬರುವ ನಿರೀಕ್ಷೆಯಿದೆ. ಇದೊಂದು ವರದಿ ಬಂದರೆ ಯೋಜನೆ ಆರಂಭಿಸಲು ಯಾವುದೇ ಅಡೆತಡೆಗಳು ಇರುವುದಿಲ್ಲ ಎಂದು ತಿಳಿಸಿದರು.
ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಈ ಎರಡು ಯೋಜನೆಗಳ ಪ್ರಾರಂಭಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳು ನಡೆದಿವೆ. ಇಂತಹ ಯೋಜನೆಗಳ ಕುರಿತು ಸಭೆಗಳಲ್ಲಿ ಚರ್ಚಿಸಲಾಗುತ್ತಿದೆ. ಈ ಕುರಿತು ಈಗಾಗಲೇ ಹಲವು ಬಾರಿ ಸಭೆಗಳ ಕೂಡ ಮಾಡಲಾಗಿದೆ. ಯೋಜನೆಗಳಿಗಿರುವ ಸಣ್ಣ ಪುಟ್ಟ ತೊಡಕುಗಳ ನಿವಾರಣೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.