Udupi: ಮೋಹನ್ ಭಾಗವತ್ ರಿಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ಪ್ರದಾನ

ಹಿಂದೂ ಸಾಮ್ರಾಟ್ ಬಿರುದು ಗೌರವ... ಪ್ರತಿಯೊಬ್ಬ ಹಿಂದೂ ಶೂನ್ಯ ಸಹಿಷ್ಣುವಾಗಿರಬೇಕು..

Team Udayavani, Dec 8, 2024, 9:19 PM IST

1-rss-bg

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ ಮೋಹನ್ ಭಾಗವತ್ ಅವರು ರವಿವಾರ(ಡಿ8) ಸಂಜೆ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಗೀತಾಮಂದಿರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಸನಾತನ ಧರ್ಮ ಸಂರಕ್ಷಣೆಯ ಕಾರ್ಯದಲ್ಲಿ ನೀಡಿದ ಮಹೋನ್ನತ ಸೇವೆಯನ್ನು ಪರಿಗಣಿಸಿ ‘ಹಿಂದು ಸಾಮ್ರಾಟ್’ ಎಂಬ ಬಿರುದು ಹಾಗೂ ‘ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ’ ಸಹಿತ ಸಂಮಾನಿಸಿ ಶ್ರೀ ಕೃಷ್ಣ ಮುಖ್ಯಪ್ರಾಣರ ಪ್ರಸಾದವಿತ್ತು ಅನುಗ್ರಹಿಸಿದರು. ಸಮ್ಮಾನದಲ್ಲಿ ಬೃಹತ್ ಕಡಗೋಲು, ರಜತಫಲಕ ಶಾಲು ಫಲಪುಷ್ಪವನ್ನು ಒಳಗೊಂಡಿತ್ತು.

ಶ್ರೀಕೃಷ್ಣ ದರ್ಶನದ ಬಳಿಕ ಡಾ ಭಾಗವತ್ ಗೀತಾಮಂದಿರಕ್ಕೆ ಭೇಟಿ ನೀಡಿದರು .‌ಶ್ರೀಗಳು ಅಲ್ಲಿನ ಗೀತಾಶಿಲಾ ಲೇಖನ ಧ್ಯಾನ ಮಂದಿರ ,ವಾದಿರಾಜ ಸಂಶೋಧನ ಮಂದಿರಗಳನ್ನು ಪರಿಚಯಿಸಿ ನಡೆಸುತ್ತಿರುವ ಚಟುವಟಿಕೆಗಳನ್ನು ವಿವರಿಸಿದರು. ತಮ್ಮ ಚತುರ್ಥ ಪರ್ಯಾಯಾವಧಿಯ ಅತ್ಯಂತ ದೂರದೃಷ್ಟಿಯ ಕೋಟಿ ಗೀತಾಲೇಖನ ಯಜ್ಞದ ಕುರಿತೂ ವಿವರಿಸಿದರು. ಎಲ್ಲವನ್ನೂ ಭಾಗವತ್ ಆಸಕ್ತಿಯಿಂದ ಆಲಿಸಿ ಸಂತೋಷ ವ್ಯಕ್ತಪಡಿದರು .

ವರ್ತಮಾನದಲ್ಲಿ ದೇಶ ಮತ್ತು ಬಾಂಗ್ಲಾ ಮೊದಲಾದೆಡೆಗಳಲ್ಲಿ ನಡೆಯುತ್ತಿರುವ ಹಿಂದು ವಿರೋಧಿ ವಿದ್ಯಮಾನಗಳ ಕುರಿತಾಗಿಯೂ ಈರ್ವರೂ ಖಾಸಗಿಯಾಗಿ ಗಹನ ಚರ್ಚೆ ನಡೆಸಿದರು. ಸನಾತನ ಧರ್ಮದ ರಕ್ಷಣೆ ಪೋಷಣೆ ಸಂವರ್ಧನೆಯ ವಿಚಾರದಲ್ಲಿ ಪ್ರತಿಯೊಬ್ಬ ಹಿಂದೂ ಶೂನ್ಯ ಸಹಿಷ್ಣುವಾಗಿರಬೇಕು ಮತ್ತು ಸಮಸ್ತ ಸಾಧು ಸಂತ ಸಮಾಜ ಹಿಂದೆಂದಿಗಿಂತ ಹೆಚ್ಚು ಸಮರ್ಥವಾಗಿ ಸಮಾಜಕ್ಕೆ ಧಾರ್ಮಿಕ ಮೌಲ್ಯಗಳು ಮತ್ತು‌ ರಾಷ್ಟ್ರೀಯ ವಿಚಾರಧಾರೆಗಳ ಮಾರ್ಗದರ್ಶನ ನೀಡಬೇಕೆಂದು ಅನಿಸಿಕೆ ವ್ಯಕ್ತ ಪಡಿಸಿದರು.

‌ಶತಮಾನದ ಹೊಸ್ತಿಲಲ್ಲಿರುವ ಸಂಘವು ದೇಶದಲ್ಲಿ ಸನಾತನ ಧರ್ಮದ ಅಸ್ಮಿತೆಯನ್ನು ಸಂರಕ್ಷಿಸುವಲ್ಲಿ ನೀಡುತ್ತಿರುವ ಕೊಡುಗೆಗಳ ಬಗ್ಗೆ ಅತೀವ ಪ್ರಶಂಸೆ ವ್ಯಕ್ತಪಡಿಸಿದ ಶ್ರೀಗಳು, ಸಂಘವಿಲ್ಲದಿದ್ದರೆ ಹಿಂದೂಗಳು ದೇಶದಲ್ಲಿ ಮತ್ತಷ್ಟು ಬವಣೆಗಳನ್ನು ಅನುಭವಿಸಬೇಕಾದ ಸಂಭವ ಇತ್ತು .ಆದರೆ ಹೆಡಗೇವಾರರಿಂದ ಭಾಗವತ್ ರ ತನಕ ಸಂಘವನ್ನು ಮುನ್ನಡೆಸಿದ ಸಮಸ್ತ ನೇತಾರರೂ ತಮ್ಮ ರಾಷ್ಟ್ರೀಯ ಬದ್ಧತೆ ಹಾಗೂ ತ್ಯಾಗಪೂರ್ಣ ಬದುಕಿನಿಂದ ಅಸಂಖ್ಯ ಜನರಲ್ಲಿ ರಾಷ್ಟ್ರ ಭಕ್ತಿಯ ತೇಜಸ್ಸನ್ನು ಜಾಗೃತಗೊಳಿಸಿದ ಪರಿ ಅನನ್ಯ ಮತ್ತು ಅದ್ಭುತ ಎಂದೂ ಬಣ್ಣಿಸಿ , ವರ್ತಮಾನದ ಸಂಕೀರ್ಣ ಸ್ಥಿತಿಯಲ್ಲಿ ಭಾಗವತರಂಥವರ ಮತ್ತು ಸಂಘ ಶಕ್ತಿಯ ಅನಿವಾರ್ಯತೆ ಇದೆ . ಬಹುಕಾಲ ಅವರ ಸೇವೆ ಮಾರ್ಗದರ್ಶನಗಳು ದೇಶಕ್ಕೆ ಲಭಿಸುವಂತಾಗಲಿ ಎಂದು ಹಾರೈಸಿದರು . ಕಿರಿಯ ಶ್ರೀ ಸುಶ್ರೀಂದ್ರ ತೀರ್ಥರಿಂದಲೂ ಭಾಗವತ್ ಆಶೀರ್ವಾದ ಪಡೆದರು .‌

ಸಂಘದ ಹಿರಿಯ ಮುಖಂಡ ಮುಕುಂದ್, ಮಠದ ದಿವಾನ ಎಂ ನಾಗರಾಜ ಆಚಾರ್ಯ ,ಮಟ್ಟಿ ಲಕ್ಷ್ಮೀ ನಾರಾಯಣ ರಾವ್,ಪ್ರಮೋದ್ ಸಾಗರ್ ಸಂತೋಷ್ ಶೆಟ್ಟಿ ,ವೈದಿಕ ವಿದ್ವಾಂಸರು,ಗಣ್ಯರು ಭಾಗವಹಿಸಿದ್ದರು.

ಮಠದ ಮುಂಭಾಗದಲ್ಲಿ ಭಾಗವತ್ ಅವರನ್ನು ವಾದ್ಯ, ಚಂಡೆವಾದನ ಮಂತ್ರಘೋಷ ಸಹಿತ ಸಾಂಪದ್ರದಾಯಿಕ ಗೌರವಗಳೊಂದಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.