UKP; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಜಾರಿ ಹೋರಾಟಕ್ಕೆ 150ಕ್ಕೂ ಹೆಚ್ಚು ಶ್ರೀಗಳ ಬಲ
Team Udayavani, Dec 9, 2024, 6:30 AM IST
ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ (UKP) 3ನೇ ಹಂತವನ್ನು ಏಕಕಾಲಕ್ಕೆ ಪೂರ್ಣಗೊಳಿಸುವಂತೆ ಒತ್ತಾಯಿಸಿ ಸಂತ್ರಸ್ತರು ಕಳೆದ 5 ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಹೋರಾಟಕ್ಕೆ 150ಕ್ಕೂ ಅಧಿಕ ಸ್ವಾಮೀಜಿಗಳ ಬೆಂಬಲ ದೊರೆತಿದೆ.
ಹೋರಾಟ ತೀವ್ರಗೊಳ್ಳುತ್ತಿದ್ದಂತೆ ರವಿವಾರ ಸ್ವತಃ ಸಚಿವ ಆರ್.ಬಿ. ತಿಮ್ಮಾಪುರ ಹೋರಾಟದ ಸ್ಥಳಕ್ಕೆ ಭೇಟಿ ನೀಡಿ, ನಾನು ಸಚಿವ-ಶಾಸಕ ಆನಂತರ. ಮೊದಲು ನಾನೊಬ್ಬ ರೈತ. ಈ ಹೋರಾಟಕ್ಕೆ ರೈತನಾಗಿ ಬೆಂಬಲ ಕೊಡುವೆ, ಸಚಿವನಾಗಿ ನನ್ನ ಜವಾಬ್ದಾರಿ ನಿಭಾಯಿಸುವೆ ಎಂದು ಹೇಳಿದರು. ಸೋಮವಾರ ದಿಂಗಾಲೇಶ್ವರ ಶ್ರೀ, ತೋಂಟದ ಸಿದ್ಧಲಿಂಗ ಶ್ರೀ, ನಿಡಸೋಸಿ ಶ್ರೀಗಳ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಸ್ವಾಮೀಜಿಗಳು ಹೋರಾಟದ ಸ್ಥಳಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸಲಿದ್ದಾರೆ.
ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ವಕೀಲರು ಡಿ. 9ರಂದು ಕೋರ್ಟ್ ಕಲಾಪದಿಂದ ದೂರ ಉಳಿದು ಹೋರಾಟಕ್ಕೆ ಬೆಂಬಲಿಸಲಿದ್ದಾರೆ. ಯುಕೆಪಿ ಪೂರ್ಣಕ್ಕೆ ಸರಕಾರ ತತ್‌ಕ್ಷಣ ಸೂಕ್ತ ನಿರ್ಧಾರ ಪ್ರಕಟಿಸದಿದ್ದರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ ಎಂದು ವಕೀಲ ಸಂಘಗಳು ಎಚ್ಚರಿಕೆ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.