Congress; ನಮ್ಮ ಸರಕಾರ ಅಲ್ಲಾಡದು: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಬಿಜೆಪಿಗೆ ಒಮ್ಮೆಯೂ ಪೂರ್ಣ ಜನಾದೇಶ ಸಿಕ್ಕಿಲ್ಲ
Team Udayavani, Dec 9, 2024, 6:40 AM IST
ಸಂಡೂರು/ಸವಣೂರು: ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಮಾತ್ರ ಸುಭದ್ರ ಸರಕಾರ ನೀಡಲು ಸಾಧ್ಯ. ಐದು ವರ್ಷ ನಮ್ಮ ಸರಕಾರವನ್ನು ಯಾರಿಂದಲೂ ಅಲುಗಾಡಿಸಲು ಆಗದು. ವಿಪಕ್ಷ ನಾಯಕ ಅಶೋಕ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಎಂದೂ ಸಿಎಂ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಂಡೂರು, ಶಿಗ್ಗಾಂವಿ ಕ್ಷೇತ್ರದ ಮತದಾರರಿಗೆ ರವಿವಾರ ಆಯೋಜಿಸಿದ್ದ ಅಭಿನಂದನ ಸಮಾರಂಭದಲ್ಲಿ ಮಾತನಾಡಿದ ಅವರು, 2013ರಲ್ಲಿ 122, 2023ರಲ್ಲಿ 136 ಸ್ಥಾನಗಳೊಂದಿಗೆ ಅಧಿ ಕಾರಕ್ಕೆ ಬಂದಿದ್ದ ನನ್ನ ನೇತೃತ್ವದ ಕಾಂಗ್ರೆಸ್ ಸರಕಾರ ಐದು ವರ್ಷ ಸುಭದ್ರವಾಗಿರಲಿದೆ. ರಾಜ್ಯದಲ್ಲಿ ಬಿಜೆಪಿಗೆ ಒಮ್ಮೆಯೂ ಜನಾದೇಶ ಸಿಕ್ಕಿಲ್ಲ. ಎರಡು ಬಾರಿಯೂ “ಆಪರೇಷನ್ ಕಮಲ’ದ ಮೂಲಕವೇ ಅ ಧಿಕಾರಕ್ಕೆ ಬಂದಿದೆ. ಆದರೆ ಒಮ್ಮೆಯೂ ಸುಭದ್ರವಾಗಿ ಐದು ವರ್ಷ ಇರಲಿಲ್ಲ ಎಂದು ಟೀಕಿಸಿದರು.
2028ಕ್ಕೂ ನಮ್ಮದೇ “ಗ್ಯಾರಂಟಿ’ ಸರಕಾರ
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದ್ದರಿಂದ ಕೇಂದ್ರ ಸರಕಾರ ಹತಾಶಗೊಂಡು ತೊಂದರೆ ಕೊಡುತ್ತಿದೆ. ನಮಗೆ ನ್ಯಾಯಯುತವಾಗಿ ಕೊಡಬೇಕಾದ ಹಣವನ್ನು ಕೊಡುತ್ತಿಲ್ಲ, ತೆರಿಗೆ ಪಾಲು ಕೊಡುತ್ತಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಸರಿಯಾಗಿ ಹಣ ನೀಡುತ್ತಿಲ್ಲ. ಎಷ್ಟೇ ತೊಂದರೆ ಕೊಟ್ಟರೂ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಇದೇ ಗ್ಯಾರಂಟಿ ಯೋಜನೆಗಳ ಮೂಲಕ 2028ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.