Mangaluru: ಸಂಘನಿಕೇತನ ಬೌದ್ಧಿಕ ವರ್ಗದಲ್ಲಿ ಸರಸಂಘಚಾಲಕ ಭಾಗವತ್‌ ಭಾಗಿ

Team Udayavani, Dec 9, 2024, 12:35 AM IST

Mangaluru: ಸಂಘನಿಕೇತನ ಬೌದ್ಧಿಕ ವರ್ಗದಲ್ಲಿ ಸರಸಂಘಚಾಲಕ ಭಾಗವತ್‌ ಭಾಗಿ

ಮಂಗಳೂರು: ಐದು ದಿನಗಳ ಕರಾವಳಿ ಪ್ರವಾಸದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ| ಮೋಹನ ಭಾಗವತ್‌ ಅವರು ಮಂಗಳೂರಿನ ಸಂಘನಿಕೇತನದಲ್ಲಿ ರವಿವಾರ ಜರಗಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರ ಬೌದ್ಧಿಕ ವರ್ಗದಲ್ಲಿ ಭಾಗಿಯಾಗಿ ಒಗ್ಗಟ್ಟಿನ ಸಂದೇಶ ನೀಡಿದರು.

“ಆದರ್ಶದ ಪಥದಿ ಮುನ್ನಡೆಯೋ ಧ್ಯೇಯವಾದಿ’ ಎನ್ನುವ ಘೋಷವಾಕ್ಯದಡಿ ಜರಗಿದ ಬೌದ್ಧಿಕ ವರ್ಗದಲ್ಲಿ ಅವರು ಒಂದು ತಾಸು ಕಾಲ ಉಪನ್ಯಾಸ ನೀಡಿ, ಸಂಘ ಸ್ಥಾಪನೆಯ ಹಿನ್ನೆಲೆ ಹಾಗೂ ಕಾರ್ಯಕರ್ತರು, ರಾಷ್ಟ್ರೀಯವಾದಿಗಳು ಬೆಳೆಸಿಕೊಳ್ಳಬೇಕಾದ ಆತ್ಮವಿಶ್ವಾಸದ ಬಗ್ಗೆ ಮಾತನಾಡಿದರು.

ನೂತನ ಕಾರ್ಯಾಲಯಕ್ಕೆ ಭೇಟಿ
ಸಂಘನಿಕೇತನದ ಬಳಿ ನಿರ್ಮಿಸಲಾದ ಸಂಘದ ನೂತನ ಕಾರ್ಯಾಲಯಕ್ಕೆ ಡಾ| ಭಾಗವತ್‌ ಭೇಟಿ ನೀಡಿದರು. ಈ ಸಂದರ್ಭ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಕಾರ್ಯಾಲಯದ ಆವರಣದಲ್ಲಿ ಸ್ವರ್ಣಚಂಪಕ ಗಿಡವೊಂದನ್ನು ನೆಟ್ಟರು. ತುಳುನಾಡಿನ ಸಾಂಪ್ರದಾಯಿಕ ಶೈಲಿಯ ಮನೆಯನ್ನು ಹೋಲುವಂತೆ ನಿರ್ಮಿಸಲಾದ ನೂತನ ಕಾರ್ಯಾಲಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಹಸರಕಾರ್ಯವಾಹ ಮುಕುಂದ ಸಿ.ಆರ್‌., ಕ್ಷೇತ್ರೀಯ ಸಂಘಚಾಲಕ ಡಾ| ಪಿ. ವಾಮನ್‌ ಶೆಣೈ, ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ಪ್ರಾಂತ ಸಂಘಚಾಲಕ ಜಿ.ಎಸ್‌. ಉಮಾಪತಿ, ಮಂಗಳೂರು ವಿಭಾಗ ಸಂಘಚಾಲಕ ಡಾ| ನಾರಾಯಣ ಶೆಣೈ ಉಪಸ್ಥಿತರಿದ್ದರು.

ಪ್ರಭಾತ ಶಾಖೆಗೆ ಭೇಟಿ
ಡಾ| ಭಾಗವತ್‌ ಅವರು ಮಂಗಳೂರಿನ ಬೊಲ್ಪುಗುಡ್ಡೆಯಲ್ಲಿ ರವಿವಾರ ಬೆಳಗ್ಗೆ ನಡೆದ ಆರೆಸ್ಸೆಸ್‌ ಪ್ರಭಾತ ಶಾಖೆಗೆ ಭೇಟಿ ನೀಡಿದರು. ಬಳಿಕ ಸಂಘನಿಕೇತನಕ್ಕೆ ಮರಳಿ ಇಡೀ ದಿನ ಸಂಘಟನೆಯ ಹಲವು ಸ್ತರದ ಮುಖಂಡರು, ಕಾರ್ಯಕರ್ತರೊಂದಿಗೆ ಬೈಠಕ್‌ ನಡೆಸಿದರು. ಸಂಜೆಯ ಬೌದ್ಧಿಕ ವರ್ಗದ ಬಳಿಕ ಉಡುಪಿಗೆ ತೆರಳಿದರು.

ಐದು ದಿನ ಕರಾವಳಿ ವಾಸ್ತವ್ಯ
ಆರೆಸ್ಸೆಸ್‌ ಶತಮಾನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರಾಂತ ಪ್ರವಾಸ ಕೈಗೊಂಡಿರುವ ಡಾ| ಮೋಹನ ಭಾಗವತ್‌ ಅವರು ಡಿ. 6ರಂದು ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಡಿ. 7ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇನ್ನೂ ಎರಡು ದಿನ ಕಾಲ ಮಂಗಳೂರಿನಲ್ಲೇ ಇರಲಿರುವ ಡಾ| ಭಾಗವತ್‌ ಅವರು ಆರೆಸ್ಸೆಸ್‌ ಶತಮಾನ ಪೂರ್ತಿ ಹಿನ್ನೆಲೆಯಲ್ಲಿ ಪಂಚ ಪರಿವರ್ತನೆ ಬಗ್ಗೆ ವಿವರವಾದ ಚರ್ಚೆ ನಡೆಸಲಿದ್ದಾರೆ. ಹಲವು ಸ್ತರಗಳ ಬೈಠಕ್‌ ನಡೆಯಲಿದ್ದು, ಸಾಮರಸ್ಯ, ಕುಟುಂಬ ಪ್ರಬೋಧನ, ಪರ್ಯಾವರಣ, ನಾಗರಿಕ ಕರ್ತವ್ಯ ಮತ್ತು ಸ್ವದೇಶಿ ಚಿಂತನೆಗಳಿಗೆ ಒತ್ತು ನೀಡುವ ನಿಟ್ಟಿನಲ್ಲಿ ಚಿಂತನ ಮಂಥನ ನಡೆಯಲಿದೆ.

ಇವೆಲ್ಲವೂ ಸಂಘದ ಆಂತರಿಕ ಬೈಠಕ್‌ಗಳಾಗಿದ್ದು, ಆಹ್ವಾನಿತರಿಗಷ್ಟೇ ಭಾಗವಹಿಸಲು ಅವಕಾಶ ಇದೆ. ಪುತ್ತೂರಿನಲ್ಲಿ ನಡೆದ ಆರೆಸ್ಸೆಸ್‌ ಅಖಿಲ ಭಾರತೀಯ ಕಾರ್ಯಕಾರಿಣಿ ಸಭಾ ಬಿಟ್ಟರೆ ಪ್ರಾಂತ ಪ್ರವಾಸದ ವೇಳೆ ಸರಸಂಘಚಾಲಕರೊಬ್ಬರು ಕರಾವಳಿಯಲ್ಲಿ ಐದು ದಿನ ವಾಸ್ತವ್ಯ ಹೂಡಿರುವುದು ಇದೇ ಪ್ರಥಮ ಬಾರಿ. ಝೆಡ್‌ ಪ್ಲಸ್‌ ಭದ್ರತೆ ಹೊಂದಿರುವ ಸರಸಂಘಚಾಲಕರ ಪ್ರವಾಸ, ವಾಸ್ತವ್ಯದ ಹಿನ್ನೆಲೆಯಲ್ಲಿ ಪೊಲೀಸರು ಅವರ ವಾಸ್ತವ್ಯದ ಸ್ಥಳ ಹಾಗೂ ಭೇಟಿಯ ಸ್ಥಳದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ.

ಟಾಪ್ ನ್ಯೂಸ್

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.