Puttur; ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ 55 ಕೋ.ರೂ. ಪ್ರಸ್ತಾವನೆ

ಧರ್ಮಸ್ಥಳ, ಸುಬ್ರಹ್ಮಣ್ಯ ಮಾದರಿಯಲ್ಲಿ ಪುತ್ತೂರು ದೇವಸ್ಥಾನದ ಸಮಗ್ರ ಅಭಿವೃದ್ಧಿ

Team Udayavani, Dec 9, 2024, 12:38 PM IST

2

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಪ್ರವಾಸ ದೋದ್ಯಮ ಕ್ಷೇತ್ರವಾಗಿ ಪರಿವರ್ತಿಸಲು ಮಾಸ್ಟರ್‌  ಪ್ಲ್ಯಾನ್‌ ರೂಪಿಸಿದ್ದು ಅನುದಾನಕ್ಕಾಗಿ ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶಾಸಕ ಅಶೋಕ್‌ ರೈ ತಿಳಿಸಿದ್ದಾರೆ.

ಶಾಸಕ ಅಶೋಕ್‌ ಕುಮಾರ್‌ ರೈ ಅವರ ನೇತೃತ್ವದಲ್ಲಿ ಅಭಿವೃದ್ಧಿಗೆ ಸಂಬಂಧಿಸಿ ಕೆಲಸ ಕಾರ್ಯಗಳಿಗೆ ಮುಂದಡಿ ಇಡಲಾಗಿದೆ. ದೇವಸ್ಥಾನದ ಸುತ್ತ ಮುತ್ತಲಿರುವ ಅನಾದಿ ಕಾಲದ ಕಟ್ಟಡಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ.

55 ಕೋಟಿ ರೂ ಪ್ರಸ್ತಾವನೆ
ಕೇಂದ್ರ ಪ್ರವಾಸೋದ್ಯಮ ಇಲಾಖೆಯ ‘ಪ್ರಷಾದ್‌’ ಯೋಜನೆಯಡಿ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಶಾಸಕರು ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಇಲಾಖೆಗೆ ಅ. 25 ರಂದು ಪ್ರಸ್ತಾವನೆಯನ್ನು ಕಳುಹಿಸಿದ್ದರು. ಇದೇ ಪ್ರಸ್ತಾವನೆಯನ್ನು ರಾಜ್ಯ ಸರಕಾರದ ಮೂಲಕ ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ಕಳುಹಿಸಲಾಗಿದೆ. ರಾಜ್ಯ ಸರಕಾರ ಕೂಡಾ ಈ ಯೋಜನೆಯಡಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನವನ್ನು ಸೇರಿಸಿ 55 ಕೋ.ರೂ. ಅನುದಾನವನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ. ಡಿ. 6 ರಂದು ಈ ಪ್ರಸ್ತಾವನೆಯನ್ನು ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ಕಳುಹಿಸಲಾಗಿದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ವಿವರಿಸಿದ್ದಾರೆ.

ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಪ್ರಷಾದ್‌ ಯೋಜನೆಯಡಿ ಅನುದಾನ ಮಂಜೂರಾದಲ್ಲಿ ಮಹಾದ್ವಾರ, ಘನತ್ಯಾಜ್ಯ ನಿರ್ವಹಣೆ, ದೇಗುಲದ ಕಚೇರಿ, ಮೂಲ ಸೌಕರ್ಯ, ಗೋಶಾಲೆ, ಮಂಟಪ, ವಿಐಪಿ ವ್ಯವಸ್ಥೆ, ಪ್ರಸಾದ ಕೌಂಟರ್‌, ಆವರಣಗೋಡೆ, ಅಡಿಟೋರಿಯಂ ಕಲಾಗ್ರಾಮ, ಯಾತ್ರಿ ನಿವಾಸ್‌, ಹೊಸ ವಿನ್ಯಾಸದ ಬೆಳಕಿನ ವ್ಯವಸ್ಥೆ, ಮತ್ತು ಲ್ಯಾಂಡ್‌ ಸ್ಕೇಪ್‌ ಇಲ್ಲಿ ನಿರ್ಮಾಣವಾಗಲಿದೆ ಎಂದವರು ಹೇಳಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡುವಂತೆ ಸಂಸದ ಬ್ರಿಜೇಶ್‌ ಚೌಟ ಅವರಿಗೆ ಮನವಿ ಮಾಡಲಾಗುತ್ತಿದೆ ಎಂದರು.

ಧರ್ಮಸ್ಥಳ, ಸುಬ್ರಹ್ಮಣ್ಯ ಮಾದರಿಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಅಭಿವೃದ್ಧಿಯಾಗಬೇಕು. ಅಲ್ಲಿಗೆ ಬರುವ ಭಕ್ತರು ಪುತ್ತೂರು ಕ್ಷೇತ್ರಕ್ಕೂ ಭೇಟಿ ನೀಡಬೇಕು. ಇದಕ್ಕೆ ಪೂರಕವಾಗಿ ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆಗೆ 55 ಕೋಟಿ ರೂ. ಅನುದಾನಕ್ಕೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.
– ಅಶೋಕ್‌ ರೈ, ಶಾಸಕರು

ಟಾಪ್ ನ್ಯೂಸ್

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು

Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

18-uv-fusion

Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.