Mangaluru; ಸುರತ್ಕಲ್-ಎಂಆರ್‌ಪಿಎಲ್ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ; ಬದಲಿಮಾರ್ಗ ಸೂಚನೆ
Team Udayavani, Dec 9, 2024, 6:08 PM IST
ಸುರತ್ಕಲ್: ಸುರತ್ಕಲ್ ಎಂಆರ್‌ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಿ, ಬದಲಿಮಾರ್ಗ ಉಪಯೋಗಿಸುವ ಕುರಿತಂತೆ ಮಂಗಳೂರು ಕಮಿಷನರ್ ಸೋಮವಾರ (ಡಿ.09) ಅದೇಶ ಹೊರಡಿಸಿದ್ದಾರೆ.
ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ ಚೊಕ್ಕಬೆಟ್ಟು ರಸ್ತೆ ಹಾಗೂ ಮಂಗಳೂರು ಕಡೆಯಿಂದ ಬರುವವರಿಗೆ ಕುಳಾಯಿ, ಕಾನಾ ರಸ್ತೆಯಾಗಿ ಚೊಕ್ಕಬೆಟ್ಟು ಹೋಗಲು ಬದಲಿ ಮಾರ್ಗ ಸೂಚಿಸಲಾಗಿದೆ.
ಪರ್ಯಾಯ ರಸ್ತೆ ಬಳಕೆ ಹಾಗೂ ಸಂಚಾರ ನಿಷೇಧ ಕುರಿತಂತೆ ಮಂಗಳೂರು ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಜನತೆ ಸಹಕರಿಸಬೇಕು: ಶಾಸಕ ಮನವಿ
ಕಾಂಕ್ರಿಟೀಕರಣ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆಯ ನಿಧಿಯಿಂದ 78 ಲಕ್ಷ ರೂ.ಮಂಜೂರು ಮಾಡಲಾಗಿದೆ. ಕಾಮಗಾರಿ ಸಂದರ್ಭ ಒಂದೆರಡು ತಿಂಗಳು ಬದಲಿ ಮಾರ್ಗ ಉಪಯೋಗಿಸುವ ಅನಿವಾರ್ಯತೆಯಿದ್ದು ವಾಹನ ಸವಾರರು ಜನರು ಸಹಕರಿಸಬೇಕು. ಶಾಶ್ವತ ಕಾಮಗಾರಿ ಮಾಡುವ ನಿಟ್ಟಿನಲ್ಲಿ ಕಾಂಕ್ರಿಟ್ ಮಾರ್ಗ ಅಗತ್ಯವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಜನತೆಯಲ್ಲಿ ವಿನಂತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.