ಪಂಚಮಸಾಲಿ ಹೋರಾಟ; ಯಡಿಯೂರಪ್ಪ ವಿರೋಧಿಸಿದ್ದು ಸತ್ಯಕ್ಕೆ ದೂರ: ವಿಜಯೇಂದ್ರ
ಕಾಂಗ್ರೆಸ್ ಸರಕಾರ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂದು ಸ್ವಾಮೀಜಿ ಹೇಳಿದ್ದಾರೆ
Team Udayavani, Dec 9, 2024, 8:52 PM IST
ಬೆಳಗಾವಿ: ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೋಮವಾರ(ಡಿ9) ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಪಂಚಮಸಾಲಿ ಮೀಸಲಾತಿ ಹೋರಾಟ ಸಂಬಂಧ ಕೂಡಲಸಂಗಮ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ’ ಎಂದು ತಿಳಿಸಿದರು.
‘ಕೆಲವು ವೈಯಕ್ತಿಕ ಕಾರಣಕ್ಕೆ ಪಂಚಮಸಾಲಿ ಹೋರಾಟಕ್ಕೆ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ಬೆಂಬಲ ಇಲ್ಲ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ ಎಂದು ಸ್ವಾಮೀಜಿ ಅವರಿಗೆ ತಿಳಿಸಲಾಗಿದೆ .ಹಿಂದೆ ಯಡಿಯೂರಪ್ಪ ಅವರ ನೇತೃತ್ವದ ಬಿ ಜೆ ಪಿ ಸರಕಾರವಿದ್ದಾಗ ಪಂಚಮಸಾಲಿ ಸಮಾಜಕ್ಕೆ 3 b ಕೊಡಲಾಗಿತ್ತು. ಆಗ3 b ಕೊಟ್ಟ ಕಾರಣದಿಂದಲೇ ಸಮಾಜಕ್ಕೆ 2 A ಸ್ಥಾನಮಾನ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸಲು ಸಾಧ್ಯವಾಗಿದೆ. ಈ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ. ಯಡಿಯೂರಪ್ಪ ಅವರ ವಿರೋಧ ಇದೆ, ಅನ್ಯಾಯ ಮಾಡಿದರು ಎಂಬ ಆರೋಪಗಳು ಸತ್ಯಕ್ಕೆ ದೂರ’ ಎಂದು ವಿಜಯೇಂದ್ರ ಹೇಳಿದರು.
”ಸ್ವಾಮೀಜಿಗಳಿಗೆ ಸಾಕಷ್ಟು ತಪ್ಪು ಅಭಿಪ್ರಾಯಗಳಿತ್ತು. ಕಾಂಗ್ರೆಸ್ ಸರಕಾರ ಬಂದ ಬಳಿಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಹಿಂದೆ ಯಾವುದೇ ಸರಕಾರ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ ಸಹ ನಮ್ಮ ಸಮಾಜದ ಮೇಲೆ ಈ ರೀತಿ ದೌರ್ಜನ್ಯಗಳು ಆಗಿಲ್ಲ ಎಂದು ಸ್ವಾಮೀಜಿ ತಿಳಿಸಿದ್ದಾರೆ” ಎಂದು ವಿಜಯೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.