Ankola; ಮನೆ ಮಂದಿ ಮಲಗಿರುವಾಗಲೇ ಕನ್ನ: ದೇವರ ಮೂರ್ತಿಗಳನ್ನೇ ಕದ್ದೊಯ್ದರು
Team Udayavani, Dec 9, 2024, 11:04 PM IST
ಅಂಕೋಲಾ : ಮನೆಯಲ್ಲಿ ಜನರು ಮಲಗಿರುವಾಗಲೇ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ ಬೆಲೆಬಾಳುವ ದೇವರ ಮೂರ್ತಿಗಳನ್ನು ಕದ್ದೊಯ್ದ ಘಟನೆ ತಾಲೂಕಿನ ಹಿಲ್ಲೂರು ತಿಂಗಳಬೈಲಿನಲ್ಲಿ ನಡೆದಿದೆ.
ವೃತ್ತಿಯಲ್ಲಿ ಪಿಡಿಒ ಆಗಿರುವ ವಿಟ್ಠಲ ವಾಸು ಬಾಂದಿ ಇವರು ಈ ಕುರಿತು ದೂರು ನೀಡಿದ್ದು ಡಿಸೆಂಬರ್ 8 ಮಧ್ಯರಾತ್ರಿಯಿಂದ ನಸುಕಿನ 2.30 ಗಂಟೆಯ ನಡುವಿನ ಅವಧಿಯಲ್ಲಿ ಮನೆಯವರು ಮಲಗಿರುವಾಗ, ಯಾರೋ ಕಳ್ಳರು ಮನೆಯ ಒಳಗೆ ಪ್ರವೇಶಿಸಿ, ದೇವರ ಕೋಣೆಯ ಬೀಗ ಮುರಿದು, ದೇವರ ಕೋಣೆಯಲ್ಲಿದ್ದ ಅಂದಾಜು 1 ಲಕ್ಷ 30 ಸಾವಿರ ರೂ. ಬೆಲೆಬಾಳುವ ಹಿತ್ತಾಳೆ ಲೋಹದ ದೇವರ 47 ಮೂರ್ತಿಗಳು, 5 ಕಪಿಲ್ ಕಲ್ಲುಗುಂಡುಗಳು ಹಾಗೂ ವಿಟ್ಠಲ ಬಾಂದಿ ಅವರ ಹೆಂಡತಿಯ ಹಳೆಯ ನೊಕಿಯಾ ಮೊಬೈಲನ್ನು ಕಳುವು ಮಾಡಿಕೊಂಡು ಹೋಗಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.