Belagavi Session; ಬಾಣಂತಿ-ಶಿಶು ಸಾವು: ನ್ಯಾಯಾಂಗ ತನಿಖೆಗೆ ಪಟ್ಟು

ರಾಜ್ಯಾದ್ಯಂತ 6 ತಿಂಗಳಲ್ಲಿ 350ಕ್ಕೂ ಹೆಚ್ಚು ಬಾಣಂತಿಯರು ಸಾವು: ಬಿಜೆಪಿ ಕಳವಳ

Team Udayavani, Dec 9, 2024, 11:50 PM IST

1-BJP-1

ಬೆಳಗಾವಿ: ಬಳ್ಳಾರಿ ಮತ್ತು ಬೆಳಗಾವಿಯ ಜಿಲ್ಲಾಸ್ಪತ್ರೆಗಳಲ್ಲಿ ನಡೆದ ಶಿಶುಗಳ ಮತ್ತು ಬಾಣಂತಿಯರ ಸಾವಿನ ಪ್ರಕರಣ ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿತು. ಕಳೆದ 6 ತಿಂಗಳಲ್ಲಿ ರಾಜ್ಯಾದ್ಯಂತ 350ಕ್ಕೂ ಹೆಚ್ಚು ಬಾಣಂತಿಯರು ಮೃತಪಟ್ಟಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಳವಳ ವ್ಯಕ್ತಪಡಿಸಿದೆ.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ಬಿಜೆಪಿಯ ರವಿಕುಮಾರ್‌, ಸಿ.ಟಿ. ರವಿ, ಡಿ.ಎಸ್‌. ಅರುಣ್‌, ಸರಕಾರ ಒಂದು ಕಡೆ ಗೃಹಲಕ್ಷ್ಮೀ ಯೋಜನೆಯನ್ನು ನೀಡುತ್ತಾ ಮಹಿಳೆಯರನ್ನು ಆರ್ಥಿಕ ಸಬಲರನ್ನಾಗಿ ಮಾಡುತ್ತೇವೆ ಎಂದು ಹೇಳುತ್ತಿದೆ. ಆದರೆ, ಸರಕಾರದ ಜಿಲ್ಲಾಸ್ಪತ್ರೆಯನ್ನು ನಂಬಿ ಚಿಕಿತ್ಸೆಗೆ ಹೋಗುತ್ತಿರುವ ಗೃಹಿಣಿಯರು ಮನೆಗೆ ಮರಳಿ ಹೋಗುತ್ತೇವೋ? ಇಲ್ಲವೋ? ಎಂಬ ಜೀವ ಭಯದಲ್ಲಿದ್ದಾರೆ ಎಂದು ಆರೋಪಿಸಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿನ ಪ್ರಕರಣದಲ್ಲಿ ಆರೋಗ್ಯ ಸಚಿವರು ನಿರ್ಲಕ್ಷ್ಯ ತೋರಿ¨ªಾರೆ. ಈ ಸಂಬಂಧ ಸತ್ಯಾಸತ್ಯತೆ ಅರಿಯಲು ಸರಕಾರ ಕೂಡಲೇ ಹೈಕೋರ್ಟ್‌ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.

ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ
ಆಧುನಿಕ ಯಂತ್ರೋಪಕಣಗಳ ಕಾಲದಲ್ಲಿ ಕೂಡ ಆಸ್ಪತ್ರೆಗಳಲ್ಲಿ ಬಾಣಂತಿಯರು ಜೀವ ಕೈಚಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ. ರಾಜ್ಯದಲ್ಲಿ ಸರಕಾರಿ ಆರೋಗ್ಯ ಸೇವೆ ಸಂಪೂರ್ಣ ಹದಗೆಟ್ಟಿದೆ. ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ. ಕಳಪೆ ಗ್ಲೂಕೋಸ್‌, ಔಷಧಿಗಳಿಂದ ಗೃಹಲಕ್ಷ್ಮಿಯರು ಬಲಿಯಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟುಹಿಡಿದರು. ಈ ವೇಳೆ ಮಧ್ಯಪ್ರವೇಶಿ ಸಿ ದ ಸಚಿವ ದಿನೇಶ್‌ ಗುಂಡೂರಾವ್‌, ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿನ ವಿಚಾರವಾಗಿ ಸರಕಾರ ಚರ್ಚೆ ನಡೆಸಲು ಸಿದ್ಧವಿದೆ ಎಂದರು. ಈ ವೇಳೆ ಸಭಾಪತಿ ಹೊರಟ್ಟಿ ಶೂನ್ಯ ವೇಳೆ ಚರ್ಚೆಗೆ ಅವಕಾಶ ನೀಡಲು ಬರುವುದಿಲ್ಲ. ಬೇರೆ ರೂಪದಲ್ಲಿ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿ ಚರ್ಚೆಗೆ ತೆರೆ ಎಳೆದರು.

ಟಾಪ್ ನ್ಯೂಸ್

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

vidhana-Soudha

Cast Census: ಲಿಂಗಾಯತ, ಒಕ್ಕಲಿಗ ಜಂಟಿ ಸಮರ?

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

vidhana-Soudha

Cast Census: ಲಿಂಗಾಯತ, ಒಕ್ಕಲಿಗ ಜಂಟಿ ಸಮರ?

Gun-exersie

ಶ್ರೀರಾಮಸೇನೆ ಕಾರ್ಯಕರ್ತರಿಗೆ ಬಂದೂಕು ತರಬೇತಿ: 27 ಮಂದಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.