ಮೋದಿ-ಅದಾನಿ.. ಸೋನಿಯಾ-ಸೊರೊಸ್ :ರಾಜ್ಯಸಭೆ, ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಗಲಾಟೆ
ಉಭಯ ಸದನಗಳಲ್ಲಿ ವಿಪಕ್ಷ ನಾಯಕರ ಗದ್ದಲ.. ಚರ್ಚೆಯೇ ನಡೆಯದೆ ಕಲಾಪ ಮುಂದಕ್ಕೆ
Team Udayavani, Dec 10, 2024, 6:10 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೌತಮ್ ಅದಾನಿ, ಸೋನಿಯಾ ಗಾಂಧಿ ಹಾಗೂ ಜಾರ್ಜ್ ಸೊರೊಸ್ ವಿಚಾರಗಳಿಗೆ ಸಂಬಂಧಿಸಿದಂತೆ ಸಂಸತ್ತಿನ ಉಭಯ ಸದನಗಳಲ್ಲಿ ಸೋಮವಾರ ಗದ್ದಲ ಉಂಟಾಗಿದೆ. ಹೀಗಾಗಿ ಯಾವುದೇ ಪ್ರಮುಖ ಚರ್ಚೆಗಳು ನಡೆಯದೇ ಉಭಯ ಸದನಗಳನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.
ಸೋಮವಾರ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು, ಗೌತಮ್ ಅದಾನಿ ವಿಷಯದ ಬಗ್ಗೆ ಚರ್ಚೆ ನಡೆಸಬೇಕು. ಸೊರೊಸ್ ನೆರವು ನೀಡುವ ಸಂಸ್ಥೆ ಜತೆಗೆ ಸೋನಿಯಾ ಗಾಂಧಿ ಜತೆಗೆ ಲಿಂಕ್ ಇದೆ ಎಂದು ಆರೋಪಿಸಿದ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಸದನದ ಬಾವಿಗಳಿದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ವೇಳೆ “ಮೋದಿ ಸರ ಕಾ ರಕ್ಕೆ ಧಿಕ್ಕಾರ’, “ನಮಗೆ ನ್ಯಾಯ ಕೊಡಬೇಕು’ ಎಂದು ಘೋಷಣೆಗಳನ್ನು ಕೂಗಿದರು. ಬಳಿಕ ಸಮಾಜವಾದಿ ಪಕ್ಷದ ಸಂಸದರು ಬಾವಿಗಿಳಿದ ಕಾರಣ ಗದ್ದಲ ಹೆಚ್ಚಾಗಿ ಕಲಾಪವನ್ನು ಮಧ್ಯಾಹ್ನ 2ಗಂಟೆಗೆ ಮುಂದೂಡಲಾಯಿತು. ಅನಂತರ ಸದನ ಸಮಾ
ಪ್ರತಿಭಟನೆಯಲ್ಲಿ ಭಾಗಿಯಾಗದ ಟಿಎಂಸಿ: ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಟಿಎಂಸಿಯ ಸಂಸದರು ಭಾಗಿಯಾಗಲಿಲ್ಲ. ಮಧ್ಯಾಹ್ನ 2 ಗಂಟೆಗೆ ಕಲಾಪ ಆರಂಭವಾದಾಗಲೂ ವಿಪಕ್ಷಗಳು, ಸೊರೊಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಹೆಸರನ್ನು ಉಲ್ಲೇಖೀಸಿದ್ದಕ್ಕೆ ನಿಶಿಕಾಂತ್ ದುಬೆ ಅವರಿಗೆ ನಾವು ನೋಟಿಸ್ ನೀಡಿದ್ದೇವೆ. ಆದರೂ ಸಭಾಧ್ಯಕ್ಷರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನೆ ಆರಂಭಿಸಿದವು. ಹೀಗಾಗಿ ಕಲಾಪವನ್ನು 3 ಗಂಟೆಗೆ ಬಳಿಕ ಒಂದು ದಿನ ಮುಂದೂಡಲಾಯಿತು.
ರಾಜ್ಯಸಭೆಯಲ್ಲೂ ಗದ್ದಲ: ಸೋಮವಾರ ಬೆಳಗ್ಗೆ 10.30ಕ್ಕೆ ಸದನ ಆರಂಭವಾದ ಕೂಡಲೇ ವಿಪಕ್ಷ ಸಂಸದರು ಗದ್ದಲ ಆರಂಭಿಸಿದರು. ದೇಶದ ಸಮಗ್ರತೆಗೆ ಧಕ್ಕೆ ತರುವ ವಿಚಾರಗಳನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಧನ್‌ಕರ್ ಹೇಳಿದ್ದು, ವಿಪಕ್ಷ ನಾಯಕರನ್ನು ಕೆರಳಿಸಿತು. ಪ್ರತಿಭಟನೆ ಹೆಚ್ಚಾದ ಹಿನ್ನೆಲೆಯಲ್ಲಿ ಸದನವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.
ರಾಜ್ಯಸಭೆಯಲ್ಲಿ ನಡ್ಡಾ vs ಮಲ್ಲಿಕಾರ್ಜುನ ಖರ್ಗೆ
ಸೊರೊಸ್ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವೆ ಭಾರೀ ವಾಗ್ಯುದ್ಧ ನಡೆದಿದೆ. ಕಾಂಗ್ರೆಸ್ ವಿದೇಶಿ ಶಕ್ತಿಗಳ ಕೈಗೊಂಬೆಯಾಗಿದೆ ಎಂದು ನಡ್ಡಾ ಆರೋಪಿಸಿದರೆ, ನಾವು ದೇಶಭಕ್ತರು ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಜಾರ್ಜ್ ಸೊರೊಸ್ ಕಂಪೆನಿ ಹಾಗೂ ಸೋನಿಯಾ ಗಾಂಧಿ ನಡುವೆ ಇರುವ ಸಂಬಂಧ ಗಂಭೀರವಾದದ್ದು. ಆ ಪಕ್ಷ ವಿದೇಶಿ ಶಕ್ತಿಗಳ ಕೈಗೊಂಬೆಯಾಗಿದೆ. ಈ ಮೂಲಕ ದೇಶದಲ್ಲಿ ಅಸ್ಥಿರತೆ ಉಂಟು ಮಾಡಲು ಯತ್ನಿಸುತ್ತಿದೆ ಎಂದು ನಡ್ಡಾ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯಲು ಕಾಂಗ್ರೆಸ್ ಬದ್ಧವಾಗಿದೆ. ದೇಶದಲ್ಲಿರುವ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಹೀಗೆ ವರ್ತಿಸುತ್ತಿದೆ ಎಂದು ಹೇಳಿದ್ದಾರೆ.
ಸೊರೊಸ್, ಸೋನಿಯಾ ಲಿಂಕ್ ಗಂಭೀರ: ರಿಜಿಜು
ಜಾರ್ಜ್ ಸೊರೊಸ್ ಬೆಂಬಲಿತ ಸಂಘಟನೆಯ ಜತೆಗೆ ಸೋನಿಯಾ ಗಾಂಧಿ ಹೊಂದಿರುವ ಸಂಪರ್ಕ ಗಂಭೀರ ಸ್ವರೂಪದ್ದು. ಇದು ಭಾರತ ವಿರೋಧಿ ಕೃತ್ಯವಾಗಿದ್ದು, ಇದನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, ಹೊರಗಿನ ವ್ಯಕ್ತಿಗಳು ಭಾರತದ ಮೇಲೆ ನಿಯಂತ್ರಣ ಸಾಧಿಸಲು ಯತ್ನಿಸಿದರೆ ಅದನ್ನು ನೋಡಿಕೊಂಡು ಸುಮ್ಮನಿರಲಾಗದು ಎಂದರು. ಅದಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್‌ನ ಪವನ್ ಖೇರಾ “ನಾವು ದೇಶಪ್ರೇಮಿಗಳಾಗಿದ್ದು, ದೇಶವಿರೋಧಿ ಕೃತ್ಯದಲ್ಲಿ ತೊಡಗಿಕೊಳ್ಳುವುದು ಸಾಧ್ಯವೇ ಇಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.