Parliament session: ಏಕಕಾಲಕ್ಕೆ ಚುನಾವಣೆ ಮಸೂದೆ ಈ ಸಲವೇ ಸಂಸತ್ತಿನಲ್ಲಿ ಮಂಡನೆ?
ಸರಕಾರಕ್ಕೆ ಮಸೂದೆ ಪರ ಮತಗಳ ಕೊರತೆ; ಹಾಗಾಗಿ ಮಂಡನೆ ಬಳಿಕ ಮಸೂದೆ ಜೆಪಿಸಿಗೆ?
Team Udayavani, Dec 10, 2024, 7:15 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಯಾದ “ಒಂದು ದೇಶ, ಒಂದು ಚುನಾವಣೆ’ಗೆ ಸಂಬಂಧಿಸಿದ ಮಸೂದೆಯನ್ನು ಸಂಸತ್ತಿನ ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೇ ಮಂಡಿ ಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಮಂಡನೆಯಾದ ಬಳಿಕ ಬೆಂಬಲ ವನ್ನು ಹೆಚ್ಚಿಸಿಕೊಳ್ಳಲು ಇದನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸುವ ಸಾಧ್ಯತೆ ಇದೆ ಎಂದು ತಿಳಿಸಿವೆ.
ಇಡೀ ದೇಶದಲ್ಲಿ ಒಂದೇ ಬಾರಿಗೆ ಚುನಾವಣೆ ನಡೆಸುವ ಯೋಜನೆ ಇದಾಗಿದ್ದು, ಇದನ್ನು ಜಾರಿಗೆ ತರುವ ಮೂಲಕ ಚುನಾವಣ ವೆಚ್ಚ, ಸಮಯ ಉಳಿತಾಯವಾಗಲಿದೆ ಎಂದು ಕೇಂದ್ರ ಸರಕಾರ ಹೇಳಿದೆ. ಈಗಾಗಲೇ “ಒಂದು ದೇಶ, ಒಂದು ಚುನಾವಣೆ’ಯ ಸಾಧಕ, ಬಾಧಕಗಳನ್ನು ಪರ್ಯಾಲೋಚಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟ ಈಗಾಗಲೇ ಅಂಗೀಕರಿಸಿದೆ.
ಸರಕಾರಕ್ಕೆ ಬಹುಮತದ ಕೊರತೆ
“ಒಂದು ದೇಶ, ಒಂದು ಚುನಾವಣೆ’ ಮಸೂದೆ ಅಂಗೀಕಾರವಾಗಬೇಕಾದರೆ ಸಂವಿಧಾನಕ್ಕೆ ಕನಿಷ್ಠ ಆರು ತಿದ್ದುಪಡಿಗಳನ್ನು ತರಬೇಕಿದೆ.
ಇದಕ್ಕಾಗಿ ಸಂಸತ್ತಿನ ಮೂರನೇ ಎರಡರಷ್ಟು ಸಂಸದರ ಒಪ್ಪಿಗೆ ಬೇಕಿದೆ. ಆದರೆ ಇಷ್ಟು ಪ್ರಮಾಣದ ಬಹು ಮತ ಲೋಕಸಭೆ ಮತ್ತು ರಾಜ್ಯಸಭೆ ಯಲ್ಲಿ ಸರಕಾರಕ್ಕಿಲ್ಲ. ರಾಜ್ಯಸಭೆಯಲ್ಲಿ 164 ಮತಗಳ ಆವಶ್ಯಕತೆ ಇದ್ದು, ಸರಕಾರದ ಬಳಿ 112 ಮತಗಳಿವೆ. ಲೋಕಸಭೆಯಲ್ಲಿ 364 ಮತಗಳ ಬದಲಿಗೆ 292 ಮತಗಳನ್ನು ಸರಕಾರ ಹೊಂದಿದೆ. ಹೀಗಾಗಿ ಮೈತ್ರಿಕೂಟದಲ್ಲಿಲ್ಲದ ವಿಪಕ್ಷಗಳ ಸಂಸದರ ಮನವೊಲಿಸಲು ಕೇಂದ್ರ ಸರಕಾರ ಮುಂದಾಗಿದೆ ಎನ್ನಲಾಗಿದೆ.
ಬಜೆಟ್ ಅಧಿವೇಶನದಲ್ಲಿ ಮಂಡನೆ?
ಒಂದು ವೇಳೆ ಪ್ರಸ್ತುತ ನಡೆಯುತ್ತಿರುವ ಸದನದಲ್ಲಿ ಈ ಮಸೂದೆಯನ್ನು ಮಂಡಿಸಲು ಸಾಧ್ಯವಾಗದಿದ್ದರೆ, ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ. “ಒಂದು ದೇಶ ಒಂದು ಚುನಾವಣೆ’ ಜಾರಿ ಮಾಡಲು ಕೇಂದ್ರ ಸರಕಾರ ಸಾಕಷ್ಟು ಮುತುವರ್ಜಿ ತೋರಿಸುತ್ತಿದ್ದು, ಇದಕ್ಕಾಗಿ ಸಕಲ ಪ್ರಯತ್ನಗಳನ್ನು ಮಾಡುತ್ತಿದೆ ಎನ್ನಲಾಗಿದೆ.
ವಿಪಕ್ಷಗಳದ್ದೇ ಚಿಂತೆ
“ಒಂದು ದೇಶ, ಒಂದು ಚುನಾವಣೆ’ ಘೋಷಣೆಯಾದಾಗಿನಿಂದ ವಿಪಕ್ಷ ನಾಯಕರು ಅದನ್ನು ವಿರೋಧಿಸುತ್ತಲೇ ಇದ್ದಾರೆ. ಅಲ್ಲದೆ ಈ ಬಾರಿ ಐಎನ್‌ಡಿಐಎ ಮೈತ್ರಿಕೂಟವು ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆದ್ದಿರುವುದು ಆಡಳಿತ ಪಕ್ಷದ ತಲೆನೋವನ್ನು ಹೆಚ್ಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.