Justice Shekhar Yadav; ಬಹುಸಂಖ್ಯಾಕರ ಆಶಯದಂತೆ ದೇಶ ನಡೀಬೇಕು
Team Udayavani, Dec 10, 2024, 6:45 AM IST
ಪ್ರಯಾಗ್‌ರಾಜ್: “ದೇಶದಲ್ಲಿ ಇರುವ ಬಹುಸಂಖ್ಯಾಕರ ಆಶಯದಂತೆಯೇ ಭಾರತ ನಡೆಯಬೇಕು. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಯಾದವ್ ಪ್ರತಿಪಾದಿಸಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಕಾನೂನು ಘಟಕ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು “ಹೈಕೋರ್ಟ್ ನ್ಯಾಯಮೂರ್ತಿಯಾಗಿ ಈ ಮಾತನ್ನು ಹೇಳಲು ಸಾಧ್ಯವಿಲ್ಲ. ಆದರೆ ಕಾನೂನು ಕೆಲಸ ಮಾಡುವುದೇ ಬಹುಸಂಖ್ಯೆಯು ಮೇಲೆಯೇ. ಬಹುಸಂಖ್ಯಾಕರ ಕ್ಷೇಮಾಭಿವೃದ್ಧಿ ಮತ್ತು ಸಂತೋಷಕ್ಕೆ ಏನು ಪ್ರಯೋಜನ ಆಗುತ್ತದೆಯೋ ಅದನ್ನು ಮಾತ್ರ ಸ್ವೀಕರಿಸಲಾಗುತ್ತದೆ ಎಂದರು. “ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ, ಸತಿ, ಸಾಮೂಹಿಕ ಅಗ್ನಿಗೆ ಪ್ರಾಣಾರ್ಪಣೆಯನ್ನು ನಿಷೇಧಿಸಲಾಗಿದೆ. ಆದರೆ ಮುಸ್ಲಿಮರಲ್ಲಿ ಬಹುಪತ್ನಿತ್ವ ಪದ್ಧತಿ ಈಗಲೂ ಮುಂದುವ ರಿಸಲಾಗಿದೆ. ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಸಂಹಿತೆ ಶೀಘ್ರದಲ್ಲಿಯೇ ನನಸಾಗಲಿದೆ’ ಎಂದಿದ್ದಾರೆ. ಜಡ್ಜ್ ಹೇಳಿಕೆಗೆ ಸಂಸದ ಅಸಾದುದ್ದೀನ್ ಓವೈಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಇಂತಹವರಿಂದ ಅಲ್ಪಸಂಖ್ಯಾತರು ನ್ಯಾಯ ಪಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.