SM Krishna: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ
Team Udayavani, Dec 10, 2024, 7:24 AM IST
ಬೆಂಗಳೂರು: ಮಾಜಿ ಸಿಎಂ ಎಸ್. ಎಂ ಕೃಷ್ಣ (92) ಮಂಗಳವಾರ (ಡಿ.10 ರಂದು) ನಸುಕಿನ ಜಾವ 2:45ರ ವೇಳೆಗೆ ವಿಧಿವಶರಾಗಿದ್ದಾರೆ.
ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ (ಡಿ.11 ರಂದು) ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆರಂಭಿಕ ಜೀವನ: ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್‌ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
ರಾಜಕೀಯ ಜೀವನ: 1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವರು ಆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಎನ್ನುವ ಪಕ್ಷಕ್ಕೆ ಸೇರಿದ್ದರು. ಆ ನಂತರ 1967ರ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಎಂಎಂ ಗೌಡ ವಿರುದ್ಧ ಸೋಲನುಭವಿಸಿದ್ದರು. 1968 ರಲ್ಲಿ ಅವರು ರಾಷ್ಟ್ರ ರಾಜಕೀಯ ಅಖಾಡಕ್ಕೆ ಪ್ರವೇಶಿಸಿದ್ದರು. 1968ರ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಗೆಲುವು ಸಾಧಿಸಿ ಕೇಂದ್ರ ರಾಜಕೀಯಕ್ಕೆ ಪ್ರವೇಶ ಪಡೆದರು.
1968 ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆ ಸಮಯದಲ್ಲಿ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮಾಡಲು ಎಸ್‌ಎಂ ಕೃಷ್ಣ ಅವರ ಪಾತ್ರ ಪ್ರಧಾನವಾಗಿತ್ತು.
1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಅವರು ಅದೇ ವರ್ಷ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಪ್ರಮುಖ ಪಾತ್ರವಹಿಸಿದ್ದರು. ಈ ಸಂದರ್ಭದಲ್ಲಿ ಅವರ ನೇತೃತ್ವದಲ್ಲಿ ನಡೆದ ಪಾಂಚಜನ್ಯ ಯಾತ್ರೆ ಕರ್ನಾಟಕ ಕಾಂಗ್ರೆಸ್‌ಗೆ ಹೊಸ ಶಕ್ತಿ ತುಂಬಿತ್ತು.
ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023 ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿತ್ತು.
ಬದಲಾದ ರಾಜಕೀಯ ಸನ್ನಿವೇಶ ಬಿಜೆಪಿ ಸೇರ್ಪಡೆ: ತಮ್ಮ ಇಳಿ ವಯಸ್ಸಿನಲ್ಲಿ ಎಸ್‌ಎಂ ಕೃಷ್ಣ ಬಿಜೆಪಿ ಪಕ್ಷಕ್ಕೆ ಸೇರಿದ್ದರು. 2017 ರ ಜನವರಿಯಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು.
ವಯೋಸಹಜ ಕಾಯಿಲೆಯ ಸಮಸ್ಯೆಯಿಂದಾಗಿ ಅವರು 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದರು.
ವೈಯಕ್ತಿಕ ಜೀವನ: ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್‌ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.