S. M. Krishna: ಆ ಎರಡು ತಪ್ಪು ಮಾಡಬಾರದಿತ್ತು ಎಂದಿದ್ದರು ಬ್ರ್ಯಾಂಡ್ ಬೆಂಗಳೂರು ರೂವಾರಿ
Team Udayavani, Dec 10, 2024, 8:55 AM IST
ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಿದ್ದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ, ಮಲ್ಲಯ್ಯ ಕೃಷ್ಣ (S.M.Krishna) ಅವರು ಮಂಗಳವಾರ (ಡಿ.10) ನಸುಕಿನ 2.45ರ ಸುಮಾರಿಗೆ ಅಸುನೀಗಿದ್ದಾರೆ.
ಅವರ ಅಧಿಕಾರಾವಧಿಯಲ್ಲಿ ಐಟಿ ಕ್ಷೇತ್ರಕ್ಕೆ ನೀಡಿದ ಉತ್ತೇಜನವಾಗಿ ಬೆಂಗಳೂರನ್ನು ಜಾಗತಿಕ ಭೂಪಟದಲ್ಲಿ ಮಿನುಗಿಸಿದ್ದಕ್ಕಾಗಿ ಅವರು ಹೆಚ್ಚು ಪ್ರಸಿದ್ದಿ ಪಡೆದರು. ಇದರ ಪರಿಣಾಮವಾಗಿ ಬೆಂಗಳೂರು ನಗರವು ಭಾರತದ ‘ಸಿಲಿಕಾನ್ ವ್ಯಾಲಿ’ ಆಗಿ ಬೆಳೆಯುತ್ತಿದೆ.
ಕಳೆದ ವರ್ಷ ಜನವರಿಯಲ್ಲಿ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸಿದರು. ಈ ವೇಳೆ ತಮ್ಮ ವಯಸ್ಸನ್ನು ಕಾರಣವೆಂದು ಉಲ್ಲೇಖಿಸಿದ್ದರು.
1932ರ ಮೇ 1ರಂದು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಜನಿಸಿದ ಎಸ್.ಎಂ.ಕೃಷ್ಣ ಅವರು ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವರು ಆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಎನ್ನುವ ಪಕ್ಷಕ್ಕೆ ಸೇರಿದ್ದರು. ಬಳಿಕ ಕಾಂಗ್ರೆಸ್ ಸೇರಿ ಕರ್ನಾಟಕ ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ ರಾಜಕೀಯವಾಗಿ ಮೇಲಕ್ಕೇರಿದ್ದರು. ಬದಲಾದ ಸನ್ನಿವೇಶದಲ್ಲಿ 2017ರಲ್ಲಿ ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. 2023ರ ಜನವರಿ 7ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದರು.
ಎರಡು ತಪ್ಪು ಮಾಡಿದ್ದೆ ಎಂದಿದ್ದ ಕೃಷ್ಣ
ಬೆಂಗಳೂರು ನಗರವನ್ನು ಸಿಂಗಾಪುರದಂತೆ ಮಾಡುತ್ತೇನೆಂದು ಪಣ ತೊಟ್ಟಿದ್ದ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಐಟಿ ಉದ್ಯಮಕ್ಕೆ ಒತ್ತು ನೀಡಿದರು. ಐಟಿ ಬೆಳವಣಿಗೆಗೆ ಅವರ ಬೆಂಬಲ ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯ ಪ್ರಾಮುಖ್ಯತೆಯು ಬ್ರಾಂಡ್ ಬೆಂಗಳೂರನ್ನು ಜಾಗತಿಕ ನಕ್ಷೆಯಲ್ಲಿ ಬೆಳಗುವಂತೆ ಮಾಡಿತು.
ಇದರಿಂದ ಎಸ್.ಎಂ.ಕೃಷ್ಣ ಉತ್ತಮ ಹೆಸರು ಮಾಡಿದ್ದರು. ಇದೇ ಧೈರ್ಯದಲ್ಲಿ ಕೃಷ್ಣ ಅವರು 2004ರಲ್ಲಿ ಅವಧಿಪೂರ್ವ ವಿಧಾನಸಭೆಗೆ ಚುನಾವಣೆಗೆ ಮುಂದಾದರು. ಆದರೆ ಅವರು ಭಾವಿಸಿದಂತೆ ಆಗಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ತರಲು ವಿಫಲರಾದರು. ಯಾವುದೇ ಪಕ್ಷಕ್ಕೆ ಬಹುಮತ ಬರಲಿಲ್ಲ. ಕೃಷ್ಣ ಅವರು ಕೂಡಾ ಮದ್ದೂರು ಕ್ಷೇತ್ರದ ಬದಲು ಚಾಮರಾಜಪೇಟೆಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.
ಇದಾಗಿ ಕೆಲವೇ ಸಮಯದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕವಾದರು. 2008ರವರೆಗೆ ಅವರು ರಾಜ್ಯಪಾಲರಾಗಿದ್ದರು.
“ನನ್ನ ಐದು ವರ್ಷಗಳ ಅಧಿಕಾರಾವಧಿಯು 2004 ರಲ್ಲಿ ಕೊನೆಗೊಳ್ಳುವ ಆರು ತಿಂಗಳ ಮೊದಲು ಅಸೆಂಬ್ಲಿಯನ್ನು ವಿಸರ್ಜಿಸುವುದು ದೊಡ್ಡ ಪ್ರಮಾದವಾಗಿತ್ತು” ಎಂದು ಕೃಷ್ಣ ಅವರು ಕಳೆದ ವರ್ಷ ಪತ್ರಿಕೆಯೊಂದಕ್ಕೆ ಮಾತನಾಡುವ ಸಮಯದಲ್ಲಿ ಹೇಳಿದ್ದರು.
“ಎರಡನೆಯ ಪ್ರಮಾದವೆಂದರೆ, ಕಾಂಗ್ರೆಸ್ ನನಗೆ ನೀಡಿದ ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಯನ್ನು ಸ್ವೀಕರಿಸಿದ್ದು. ಅದರ ಬದಲಿಗೆ ನಾನು ವಿರೋಧ ಪಕ್ಷದ ನಾಯಕನಾಗಿ ಇಲ್ಲಿಯೇ ಮುಂದುವರಿಯಬೇಕಿತ್ತು. ನಾನು ಇನ್ನೂ ಕೆಲ ಕಾಲ ರಾಜ್ಯ ರಾಜಕಾರಣದಲ್ಲಿ ಮುಂದುವರಿಯಬೇಕಿತ್ತು” ಎಂದಿದ್ದರು.
“ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಾಗಲೆಲ್ಲಾ, ನಾನು ಸಿಎಂ ಆಗುತ್ತಿದ್ದೆ ಮತ್ತು ಜಾಗತಿಕ ಗುಣಮಟ್ಟವನ್ನು ಪೂರೈಸಲು ಬೆಂಗಳೂರಿನ ಮೂಲಸೌಕರ್ಯವನ್ನು ಸುಧಾರಿಸಲು ನನಗೆ ಅವಕಾಶವನ್ನು ನೀಡುತ್ತಿತ್ತು” ಎಂದು ಕೃಷ್ಣ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
MUST WATCH
ಹೊಸ ಸೇರ್ಪಡೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibande: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.