Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
Team Udayavani, Dec 10, 2024, 1:21 PM IST
ಪಾವಗಡ: ಲಾರಿ ಹಾಗೂ ಬೊಲೆರೋ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೊಲೆರೋ ವಾಹನದ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ತುಮಕೂರು ರಸ್ತೆಯ ಎಸ್.ಆರ್.ಎಸ್ ಪೆಟ್ರೋಲ್ ಬಂಕ್ ಮುಂಭಾಗ ಡಿ.10 ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಎಂಬವರ ಮಗ ಗಿರೀಶ್ (21) ಎಂದು ಗುರುತಿಸಲಾಗಿದೆ.
ತುಮಕೂರು ರಸ್ತೆಯಿಂದ ಪಾವಗಡದ ಕಡೆ ಬರುತ್ತಿದ್ದ ಬುಲೆರೋ, ಮುಂಭಾಗದಲ್ಲಿ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಲಾರಿಯ ಮುಂಭಾಗದಲ್ಲಿ ಓಮಿನಿಯೊಂದು ತೆರಳುತ್ತಿದ್ದು, ಇದ್ದಕ್ಕಿದ್ದಂತೆ ಓಮಿನಿ ಯೂ ಟರ್ನ್ ತೆಗೆದುಕೊಂಡಿದ್ದು, ಹಾಗಾಗಿ ಲಾರಿ ಚಾಲಕ ತನ್ನ ವೇಗವನ್ನು ಕಡಿಮೆ ಮಾಡಿದ್ದಾನೆ. ಹಿಂದೆಯಿಂದ ಬರುತ್ತಿದ್ದ ಬೊಲೆರೋ ವಾಹನ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಪಿಎಸ್ಐ ಗುರುನಾಥ ಭೇಟಿ ನೀಡಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.