SM Krishna: ಪ್ರೊಫೆಸರ್‌ ಟು ಸಿಎಂ, ಗವರ್ನರ್‌, ವಿದೇಶಾಂಗ ಸಚಿವ…SMK ರಾಜಕೀಯ ಯಶೋಗಾಥೆ…

1996ರಿಂದ 1999ರವರೆಗೆ ರಾಜ್ಯಸಭೆ ಸದಸ್ಯರನ್ನಾಗಿ ನೇಮಕ ಮಾಡಿತ್ತು...

Team Udayavani, Dec 10, 2024, 1:26 PM IST

SM Krishna: ಪ್ರೊಫೆಸರ್‌ ಟು ಸಿಎಂ, ಗವರ್ನರ್‌, ವಿದೇಶಾಂಗ ಸಚಿವ…SMK ರಾಜಕೀಯ ಯಶೋಗಾಥೆ…

ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (SMK) ಅವರು ಮಂಗಳವಾರ (ಡಿ.09) ಬೆಳಗ್ಗೆ ನಸುಕಿನ ವೇಳೆ ಇಹಲೋಕ ತ್ಯಜಿಸಿದ್ದಾರೆ. ಆರಂಭದಲ್ಲಿ ಕಾನೂನು ಪ್ರೊಫೆಸರ್‌ ಆಗಿ ವೃತ್ತಿ ಜೀವನ ಆರಂಭಿಸಿದ್ದ ಎಸ್‌ ಎಂಕೆ ಅವರು ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದು, ಅಭಿವೃದ್ಧಿಯ ಹರಿಕಾರರಾಗಿ, ಬ್ರ್ಯಾಂಡ್‌ ಬೆಂಗಳೂರು ರೂವಾರಿಯಾದ ಅವರ ರಾಜಕೀಯ ಜೀವನದ ಚಿತ್ರಣ ಇಲ್ಲಿದೆ…

ಪ್ರೊಫೆಸರ್‌, ರಾಜಕಾರಣಿ, ಮುಖ್ಯಮಂತ್ರಿ, ಗವರ್ನರ್!‌

ಬೆಂಗಳೂರಿನ ರೇಣುಕಾಚಾರ್ಯ ಅಂತಾರಾಷ್ಟ್ರೀಯ ಕಾನೂನು ಕಾಲೇಜಿನಲ್ಲಿ ಎಸ್‌ ಎಂ ಕೃಷ್ಣ ಅವರು ಪ್ರೊಫೆಸರ್‌ ಆಗುವ ಮೂಲಕ ವೃತ್ತಿ ಜೀವನ ಆರಂಭಿಸಿದ್ದರು. 1962ರಲ್ಲಿ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿ, ರಾಜಕೀಯ ಪ್ರವೇಶಿಸಿದ್ದರು.

1968ರಲ್ಲಿ ಎಸ್‌ ಎಂಕೆ ರಾಷ್ಟ್ರರಾಜಕಾರಣ ಪ್ರವೇಶಿಸಿದ್ದರು. ಹೌದು ನಾಲ್ಕನೇ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದು, ನಂತರ ಐದನೇ ಲೋಕಸಭಾ ಚುನಾವಣೆಯಲ್ಲೂ ಪುನರಾಯ್ಕೆಗೊಂಡಿದ್ದರು. 1972ರಲ್ಲಿ ಮರಳಿ ರಾಜ್ಯ ರಾಜಕಾರಣಕ್ಕೆ ಆಗಮಿಸಿ ವಾಣಿಜ್ಯ, ಕೈಗಾರಿಕೆ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ 1977ರವರೆಗೆ ಕಾರ್ಯನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ಎಸ್‌ ಎಂ ಕೆ ಅವರ ನಾಯಕತ್ವ ಗುಣ ಗುರುತಿಸಿದ ಕಾಂಗ್ರೆಸ್‌ ಹೈಕಮಾಂಡ್‌ 1980ರಲ್ಲಿ ಮತ್ತೆ ಲೋಕಸಭಾ ಅಖಾಡಕ್ಕೆ ಇಳಿಸಿತ್ತು. ಹೀಗೆ 1983ರಿಂದ 1984ರವರೆಗೆ ಕೇಂದ್ರದ ರಾಜ್ಯ ಖಾತೆ ಕೈಗಾರಿಕಾ ಸಚಿವರಾಗಿ ಹಾಗೂ 1984ರಿಂದ 1985ರವರೆಗೆ ಕೇಂದ್ರದ ರಾಜ್ಯ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು.

ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಶಾಲಿಯಾಗಿ ಬೆಳೆಯತೊಡಗಿದ್ದ ಎಸ್.ಎಂ ಕೃಷ್ಣ ಅವರನ್ನು 1989ರಿಂದ 1992ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಆಗಿ ಆಯ್ಕೆ ಮಾಡಲಾಗಿತ್ತು. ಅದೇ ವರ್ಷ ಎಸ್‌ ಎಂ ಕೆ ಅವರನ್ನು ಹೈಕಮಾಂಡ್ ಉಪಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿತ್ತು.‌ ನಂತರ 1996ರಿಂದ 1999ರವರೆಗೆ ರಾಜ್ಯಸಭೆ ಸದಸ್ಯರನ್ನಾಗಿ ನೇಮಕ ಮಾಡಿತ್ತು.

ರಾಜಕೀಯ ಹಾಗೂ ನಾಯಕತ್ವದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್‌ ಎಂ ಕೃಷ್ಣ ಅವರು 1999ರಲ್ಲಿ ಪಾಂಚಜನ್ಯ ಯಾತ್ರೆಯ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಜತೆಗೆ 1999ರಿಂದ 2004ರವರೆಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ, ಬ್ರ್ಯಾಂಡ್‌ ಬೆಂಗಳೂರು ಖ್ಯಾತಿಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸುವಲ್ಲಿ ಮಹತ್ವದ ರೂವಾರಿಯಾಗಿ ಹೊರಹೊಮ್ಮಿದ್ದರು. ಬಳಿಕ 2004ರ ಡಿಸೆಂಬರ್‌ 6ರಂದು ಮಹಾರಾಷ್ಟ್ರದ ಗವರ್ನರ್‌ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಜಾಗತಿಕ ಮಟ್ಟದಲ್ಲೂ ಅನುಭವ ಹೊಂದಿದ್ದ ಎಸ್‌ ಎಂ ಕೆ 1982ರಲ್ಲಿ ವಿಶ್ವಸಂಸ್ಥೆಯ ಭಾರತೀಯ ನಿಯೋಗದ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಷ್ಟೇ ಅಲ್ಲದೇ ವೆಸ್ಟ್‌ ಮಿನಿಸ್ಟರ್‌ ಮತ್ತು ಬ್ರಿಟನ್‌ ನಲ್ಲಿ ನಡೆದ ಕಾಮನ್‌ ವೆಲ್ತ್‌ ಪಾರ್ಲಿಮೆಂಟರಿ ಸೆಮಿನಾರ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

2017ರಲ್ಲಿ ಬಿಜೆಪಿ ಸೇರಿ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದ ಎಸ್‌ ಎಂ ಕೃಷ್ಣ ಅವರು 2023ರ ಜನವರಿ 7ರಂದು ರಾಜಕೀಯ ನಿವೃತ್ತಿ ಘೋಷಿಸಿದ್ದರು. ಎಸ್‌ ಎಂಕೆ ಪತ್ನಿ ಪ್ರೇಮಾ ಕೃಷ್ಣ ಮತ್ತು ಪುತ್ರಿಯರಾದ ಮಾಳವಿಕಾ ಕೃಷ್ಣ, ಶಾಂಭವಿ ಕೃಷ್ಣ ಅವರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Gadag; Shirahatti Constituency MLA Chandru Lamani car driver ends his life

Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

7

Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್‌; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.