Mangaluru: ಇಬ್ಬರು ಕುಖ್ಯಾತ ಸರಗಳ್ಳರ ಬಂಧನ
Team Udayavani, Dec 11, 2024, 6:40 AM IST
ಮಂಗಳೂರು: ಮಂಗಳೂರು ಕಮೀಷನರೆಟ್ ವ್ಯಾಪ್ತಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಸರಕಳ್ಳರಿಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂಲತಃ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್‌ನವನಾಗಿದ್ದು ಪ್ರಸ್ತುತ ತೊಕ್ಕೊಟ್ಟು ಪೆರ್ಮನೂರು ಚೆಂಬುಗುಡ್ಡೆಯಲ್ಲಿ ವಾಸವಿರುವ ಹಬೀಬ್ ಹಸನ್ ಆಲಿಯಾಸ್ ಚೊಂಬುಗುಡ್ಡೆ ಹಬೀಬ್ ಆಲಿಯಾಸ್ ಅಬ್ಬಿ (43) ಮತ್ತು ಬಂಟ್ವಾಳ ಬಿ.ಮೂಡ ಅದ್ದೆಡ್ಡಿ ಹೌಸ್ ನ ಉಮ್ಮರ್ ಶಿಯಾಫ್ (29) ಬಂಧಿ ತ ಕಳ್ಳರು.
ಪ್ರಕರಣ -1
ಡಿ. 6ರಂದು ನರಿಂಗಾನ ಗ್ರಾಮದ ತೌಡುಗೋಳಿ ಅಂಗನವಾಡಿ ಕೇಂದ್ರದಲ್ಲಿ ಸುಜಿನಾ ಡಿ’ಸೋಜಾ ಅವರು ಕೆಲಸದಲ್ಲಿರುವಾಗ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು, ಮಂಜನಾಡಿಗೆ ಹೋಗುವ ದಾರಿಯ ಬಗ್ಗೆ ವಿಚಾರಿಸಿದ್ದು, ದಾರಿಯನ್ನು ಹೇಳಿ ಅಂಗನವಾಡಿಯ ಬಾಗಿಲನ್ನು ಹಾಕುವಷ್ಟರಲ್ಲಿ ಬಾಗಿ ಲನ್ನು ದೂಡಿ ಒಳಗೆ ಪ್ರವೇಶಿಸಿದ ಆರೋಪಿಗಳು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ-2
ಡಿ. 9ರಂದು ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೋಳ ಗ್ರಾಮದ ಸುಂಕಮಾರು- ಮಂಜರಪಲ್ಕೆ ಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವಸಂತಿ ಅವರಲ್ಲಿ ಬೈಕ್‌ನಲ್ಲಿ ಬಂದ ಯುವಕ ಮತ್ತು ಯುವತಿ ಭಾಸ್ಕರ್ ಅವರ ಮನೆಗೆ ಹೋಗುವ ದಾರಿ ಯಾವುದೆಂದು ಕೇಳಿ ಬೈಕ್ ಸವಾರನು ವಸಂತಿಯವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ.
ಜೈಲಿನಿಂದ ಬಿಡುಗಡೆಗೊಂಡಿದ್ದ
ತನಿಖೆ ನಡೆಸುತ್ತಿದ್ದಾಗ ಈ ಹಿಂದೆ ಹಲವು ಸರಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 4 ದಿನಗಳ ಹಿಂದೆ ಜೈಲ್‌ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಹಬೀಬ್ ಹಸನ್ ಹಾಗೂ ಆತನ ಸಹಚರ ಭಾಗಿಯಾಗಿರುವ ಕುರಿತು ಮಾಹಿತಿ ಲಭಿಸಿತ್ತು. ಆಗ ಮಂಗಳೂರು ನಗರದ ಕಾರ್‌ಸ್ಟ್ರೀಟ್ ಬಳಿಯಲ್ಲಿದ್ದಾನೆ ಎನ್ನುವ ಮಾಹಿತಿ ಬಂದಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಚೂರಿ ಇಟ್ಟುಕೊಂಡಿದ್ದ
ಹಬೀಬ್ ಹಸನ್ ವಶದಿಂದ ಕಾರ್ಕಳದಿಂದ ಸುಲಿಗೆ ಮಾಡಿದ 17.43 ಗ್ರಾಂ ಚಿನ್ನದ ಸರ, ಸರಕಳ್ಳತನ ಮಾಡಲು ಉಪಯೋಗಿಸಿದ ಹೀರೋ ಹೊಂಡಾ ಬೈಕ್, ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ. ಈತನನ್ನು ದಸ್ತಗಿರಿ ಮಾಡಲು ಪೊಲೀಸರು ಬಂದಾಗ ಅವರಿಗೆ ಹಲ್ಲೆ ನಡೆಸಲು ಈ ಚೂರಿಯನ್ನು ಇಟ್ಟುಕೊಂಡಿದ್ದ.ಮಂಗಳೂರು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್‌ನಾಯ್ಕ… ಅವರ ನೇತೃತ್ವದಲ್ಲಿ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್.ಎಂ., ಪಿಎಸ್‌ಐ ಸುದೀಪ್ ಎಂ.ವಿ., ಎಎಸ್‌ಐ ಯವರಾದ ಮೋಹನ್ ಕೆ.ವಿ., ರಾಮ ಪೂಜಾರಿ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬೈಕ್ ಅನ್ನು ಕದ್ದು ಕೃತ್ಯಕ್ಕೆ ಬಳಸುತ್ತಿದ್ದರು
ಆರೋಪಿಗಳಿಬ್ಬರು 2 ತಿಂಗಳ ಹಿಂದೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕಡೆ ಮಹಿಳೆಯರ ಕುತ್ತಿಗೆಯಿಂದ ಸರಕಳ್ಳತನ ಮಾಡಿ ಬಂ ಧಿಸಲ್ಪಟ್ಟು ಮಂಗಳೂರು ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಡಿ. 6ರಂದು ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದು, ಅದೇ ದಿನವೇ ಮಂಗಳೂರು ನಗರದ ಜೈಲ್ ರಸ್ತೆಯ ಪರಿಸರದಲ್ಲಿ ಬೈಕ್ ಕಳ್ಳತನ ಮಾಡಿ ಮರುದಿನ ಆರೋಪಿಗಳಿಬ್ಬರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ ಬಳಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದರು. ಅಲ್ಲದೇ 2 ದಿನ ಬಳಿಕ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಇನ್ನೊಂದು ಬೈಕ್ ಅನ್ನು ಕಳವು ಮಾಡಿ ಅದೇ ಬೈಕ್‌ನಲ್ಲಿ ಆರೋಪಿ ಹಬೀಬ್ ಆತನ ಸ್ನೇಹಿತೆ ಮಹಿಳೆಯ ಜತೆಗೂಡಿ ಕಾರ್ಕಳದಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ.
ಆರೋಪಿ ಮೇಲಿತ್ತು 39 ಕೇಸು!
ಆರೋಪಿಗಳ ಪೈಕಿ ಹಬೀಬ್ ಹಸನ್ ವಿರುದ್ಧ ಈ ಹಿಂದೆ ಮಂಗಳೂರು ನಗರದ ಬರ್ಕೆ, ಮೂಡಬಿದ್ರಿ, ಸುರತ್ಕಲ್, ಉಳ್ಳಾಲ, ಕೊಣಾಜೆ, ಬಜ್ಪೆ, ವಿಟ್ಲ, ಬಂಟ್ವಾಳ ನಗರ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಒಟ್ಟು 39 ಕಳವು, ಜಾನುವಾರು ಕಳವು, ಸರಕಳ್ಳತನ ಪ್ರಕರಣಗಳು ದಾಖಲಾಗಿದೆ. ಆರೋಪಿ ಉಮ್ಮರ್‌ಶಿಯಾಫ್ ಈ ಹಿಂದೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ 2 ಸರಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.