Dec.13: ಶಿರ್ವ ಸಂತ ಮೇರಿ ಪ.ಪೂ.ಕಾಲೇಜು; ಸುವರ್ಣ ಮಹೋತ್ಸವ ಸಮಾರೋಪ
Team Udayavani, Dec 11, 2024, 2:32 PM IST
ಶಿರ್ವ: ಇಲ್ಲಿನ ಸಂತ ಮೇರಿ ಪ.ಪೂ. ಕಾಲೇಜು ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದ್ದು, ಸಮಾರೋಪ ಸಮಾರಂಭವು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ|ಜೆರಾಲ್ಡ್ ಐಸಾಕ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ಡಿ.13ರಂದು ಸಂಜೆ ಮೊನ್ಸಿಂಜೊರ್ ಹಿಲರಿ ಗೊನ್ಸಾಲ್ವಿಸ್ ರಂಗ ಮಂಟಪದಲ್ಲಿ ನಡೆಯಲಿದೆ.
ಬಿಷಪ್ ಡಾ|ಜೆರಾಲ್ಡ್ ಐಸಾಕ್ ಲೋಬೋ ಅವರು ಸಂಸ್ಥಾಪಕರ ಭಾವಚಿತ್ರ ಅನಾವರಣಗೊಳಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೆಥೊಲಿಕ್ ಎಜ್ಯುಕೇಶನಲ್ ಸೊಸೈಟಿ ಆಫ್ ಉಡುಪಿ ಡಯಾಸಿಸ್‌ನ ಕಾರ್ಯದರ್ಶಿ ವಂ|ವಿನ್ಸೆಂಟ್ ಕ್ರಾಸ್ತಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಹಾಗೂ ಶಿರ್ವ ಗ್ರಾ.ಪಂ. ಅಧ್ಯಕ್ಷೆ ಸವಿತಾ ಪೂಜಾರಿ ಭಾಗವಹಿಸಲಿದ್ದಾರೆ.
ಡಿ.14 ರಂದು ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಸಮಾರಂಭ ಜರಗಲಿದ್ದು, ಬೆಳಗ್ಗೆ ಮುದರಂಗಡಿ ಸಂತ ಫ್ರಾನ್ಸಿಸ್ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕ ವಂ| ಫೆಡ್ರಿಕ್ ಡಿಸೋಜಾ ಧ್ವಜಾರೋಹಣ ನೆರವೇರಿಸಲಿರುವರು. ವಾರ್ಷಿಕೋತ್ಸವ ಸಮಾರಂಭದಲ್ಲಿ ಉಡುಪಿ ಧರ್ಮಪ್ರಾಂತ್ಯದ ವಿಗಾರ್ ಜನರಲ್ ಮೊ|ವಂ| ಫರ್ಡಿನಾಂಡ್ ಗೊನ್ಸಾಲ್ವಿಸ್ ಅಧ್ಯಕ್ಷತೆ ವಹಿಸಲಿದ್ದು,ಮುಖ್ಯ ಅತಿಥಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿಸೋಜಾ ಭಾಗವಹಿಸಲಿರುವರು.ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜ ,ಸಂಚಾಲಕ ನೋರ್ಬರ್ಟ್ ಮಚಾದೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಮೆಲ್ವಿನ್ ಆರಾನ್ಹ, ಕಾರ್ಯದರ್ಶಿ ಜೆಸಿಂತಾ ಡಿಸೋಜಾ, ಪ್ರಾಂಶುಪಾಲ ಜಯಶಂಕರ್.ಕೆ ಉಪಸ್ಥಿತರಿರುವರು ಎಂದು ಸುವರ್ಣ ಮಹೋತ್ಸವ ಸಮಿತಿಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chhattisgarh: ಮೂವರು ನಕ್ಸಲರ ಎನ್‌ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Ajekar: ಎಷ್ಟು ದಿನ ಟವರ್ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್ ಕೊಡಿ ಸ್ವಾಮಿ!
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!
Mangaluru: ನಾಗುರಿ ಬಳಿ ನೀರು ಪೂರೈಕೆ ಪೈಪ್‌ಲೈನ್ ಅಳವಡಿಕೆ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.