Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
Team Udayavani, Dec 11, 2024, 8:23 PM IST
ಮಡಿಕೇರಿ: ಕುಶಾಲನಗರದಲ್ಲಿ ವಿವಾಹ ಶಾಸ್ತ್ರ ನಡೆಯುತ್ತಿದ್ದ ಸಂದರ್ಭ ವಧುವಿನ ಕೊಠಡಿಯಿಂದ ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಪ್ರಕರಣವನ್ನು ಬೇಧಿಸಿರುವ ಕೊಡಗು ಜಿಲ್ಲಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕುಶಾಲನಗರ ಸಮೀಪದ ತೊರೆನೂರು ನಿವಾಸಿ ಚರಣ್ ಕುಮಾರ್(19), ಗೋಣಿಮರೂರು ಗ್ರಾಮದ ನಿವಾಸಿ ನಿತಿನ್ ಎಸ್.ಎಲ್.(22) ಹಾಗೂ ಅರಿಶಿನಕುಪ್ಪೆ ನಿವಾಸಿ ಮಿಥುನ್(24) ಎಂಬುವವರೇ ಬಂಧಿತ ಆರೋಪಿಗಳು.
ಕುಶಾಲನಗರದ ರೈತ ಭವನದಲ್ಲಿ ನ.28 ರಂದು ನಳಿನಿ ಎಂಬುವವರ ಮಗಳ ವಿವಾಹ ಶಾಸ್ತ್ರ ನಡೆಯುತಿತ್ತು. ಈ ಸಂದರ್ಭ ವಧುವಿನ ಕೊಠಡಿಯಲ್ಲಿದ್ದ 28 ಗ್ರಾಂ ಚಿನ್ನಾಭರಣ ಮತ್ತು 5 ಸಾವಿರ ರೂ. ನಗದು ಕಳವಾಗಿತ್ತು. ಈ ಬಗ್ಗೆ ನಳಿನಿ ಅವರು ನೀಡಿದ ದೂರನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದರು. ಮಾಲು ಸಹಿತ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ಪಿಐ ಪ್ರಕಾಶ್ ಬಿ.ಜಿ., ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ಪಿಎಸ್‌ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: Mangaluru: ಶುಭ ಸುದ್ದಿ… ಹೊಸ ವರ್ಷಕ್ಕೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
MUST WATCH
ಹೊಸ ಸೇರ್ಪಡೆ
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.