ಎಸ್.ಎಂ.ಕೃಷ್ಣಗೆ ಮರಣೋತ್ತರ “ಕರ್ನಾಟಕ ರತ್ನ’ ನೀಡಿ: ಅಶೋಕ್
Team Udayavani, Dec 11, 2024, 11:00 PM IST
ಬೆಂಗಳೂರು: ಎಸ್.ಎಂ. ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರಕಾರದಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ಕರ್ನಾಟಕ ರತ್ನ’ ವನ್ನು ಮರಣೋತ್ತರವಾಗಿ ನೀಡಬೇಕೆಂದು ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿರುವ ಅವರು, ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ರಾಜ್ಯ ಪಾಲ ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು.
ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಹೀಗಾಗಿ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasur: ಗೊಮ್ಮಟಗಿರಿಯಲ್ಲಿ ಮೂರು ದಿನಗಳ ಕಾಲ ಬಾಹುಬಲಿ ಮಸ್ತಕಾಭಿಷೇಕ
ಬೆಳಗಾವಿ ಘಟನೆ: ಹೋರಾಟಗಾರರ ವಿರುದ್ದದ ಎಲ್ಲ ಪ್ರಕರಣ ರದ್ಧುಪಡಿಸಬೇಕು: ವಚನಾನಂದ ಸ್ವಾಮೀಜಿ
Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು
Shivamogga: ಕಾರು- ಬೈಕ್ ನಡುವೆ ಅಪಘಾತ… ಓರ್ವ ಸ್ಥಳದಲ್ಲೇ ಸಾ*ವು, ಇನ್ನೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.